For Quick Alerts
ALLOW NOTIFICATIONS  
For Daily Alerts
 

ಹರಿಣಗಳ ಅಗ್ನಿ ಪರೀಕ್ಷೆ ಎದುರಿಸಲು ಸಿದ್ಧವಾದ ಅಫ್ಘಾನಿಸ್ತಾನ: ಪಂದ್ಯದ ಸಮಯ ಹಾಗೂ ಸಂಭಾವ್ಯ XI

ಆಸ್ಟ್ರೇಲಿಯಾ ವಿರುದ್ಧ ಭಾರೀ ಅಂತರದಿಂದ ಗೆದ್ದೇ ಬಿಟ್ಟೆವು ಎನ್ನುವ ಸ್ಥಿತಿಯಿಂದ ಸೋಲು ಅನುಭವಿಸಿದ ಆಘಾತದಿಂದ ಅಫ್ಘಾನಿಸ್ತಾನ ಹೊರಗೆ ಬರಲೇ ಬೇಕಿದೆ. ಸೆಮಿಫೈನಲ್‌ಗೇರುವ ಅವಕಾಶವನ್ನು ಇನ್ನೂ ಉಳಿಸಿಕೊಂಡಿರುವ ಅಫ್ಘಾನಿಸ್ತಾನ ತಂಡಕ್ಕೆ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ತಂಡ ಸವಾಲೊಡ್ಡಿದೆ. ಆದರೆ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಗೆಲುವು ಮಾತ್ರವೇ ಸಾಧಿಸಿದರೆ ಸಾಕಾಗದು. ಭಾರೀ ಅಂತರದಿಂದ ಗೆದ್ದು ನೆಟ್ ರನ್‌ರೇಟ್ ಕೂಡ ಉತ್ತಮ ಪಡಿಸಿಕೊಳ್ಳುವ ಅಗತ್ಯವಿದೆ.

ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಸೆಮಿಫೈನಲ್‌ನಲ್ಲಿ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಹೀಗಾಗಿ ಹರಿಣಗಳ ಪಾಲಿಗೆ ಈ ತಂಡ ಅಂತದ್ಧೇನೂ ಮಹತ್ವ ಪಡೆದುಕೊಂಡಿಲ್ಲ. ಆದರೆ ಅಫ್ಘಾನಿಸ್ತಾನ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿರುವ ದಕ್ಷಿಣ ಆಫ್ರಿಕಾ ತಂಡವನ್ನು ಭಾರೀ ದೊಡ್ಡ ಅಂತರದಿಂದ ಮಣಿಸಬೇಕಾದ ಸವಾಲು ಅಫ್ಘಾನಿಸ್ತಾನ ತಂಡದ ಮುಂದಿದೆ.

World cup, match 42nd: Afghanistan vs South Africa; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಪಂದ್ಯ ಶುಕ್ರವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡುಸ್ಸೆನ್, ಲಿಜಾದ್ ವಿಲಿಯಮ್ಸ್.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಲುಂಗಿ ಎನ್ಗಿಡಿ

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್, ನವೀನ್-ಉಲ್-ಹಕ್

Story first published: Thursday, November 9, 2023, 20:02 [IST]
Other articles published on Nov 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+