Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್‌ 2023: ಆಸ್ಟ್ರೇಲಿಯಾ ವಿರುದ್ಧ ಅಂತಿಮ ಹೋರಾಟಕ್ಕಿಳಿದ ಬಾಂಗ್ಲಾದೇಶ: Live ಸ್ಕೋರ್

ವಿಶ್ವಕಪ್ ಟೂರ್ನಿ ಲೀಗ್ ಹಂತದ ಕೊನೆಯ ಮೂರು ಪಂದ್ಯಗಳು ಮಾತ್ರವೇ ಬಾಕಿಯಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್‌ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಬಾಂಗ್ಲಾದೇಶ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದೆ. ಕಳೆದ ಪಂದ್ಯದ ಮ್ಯಾಚ್ ವಿನ್ನರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮಿಚೆಲ್ ಸ್ಟಾರ್ಕ್‌ಗೆ ಈ ಪಂದ್ಯದಲ್ಲಿ ವಿಶ್ರಾಂತಿ ನಿಡಲಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಶಾನ್ ಅಬಾಟ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಬಾಂಗ್ಲಾದೇಶ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ನಾಯಕ ಶಕೀಬ್ ಅಲ್ ಹಸನ್ ಗಾಯದಿಂದ ಹೊರಬಿದ್ದಿರುವ ಕಾರಣ ಅವರ ಸ್ಥಾನದಲ್ಲಿ ನಸುಮ್ ಅಹ್ಮದ್ ಅವಕಾಶ ಪಡೆದುಕೊಂಡಿದ್ದಾರೆ.

World cup, match 43, Australia vs Bangladesh, Toss report, playing XI and Live score

Live ಸ್ಕೋರ್ ಹೀಗಿದೆ

1
57808

ಇನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ಈಗಾಗಲೇ ಸೆಮಿಫೈನಲ್‌ಗೇರುವ ನಾಲ್ಕು ತಂಡಗಳು ಯಾವುದು ಎನ್ನುವುದು ಈಗಾಗಲೇ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನಿಯಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶ ತಂಡ ಈಗಾಗಲೇ ಲೀಗ್ ಹಂತದಿಂದಲೇ ಹೊರಬಿದ್ದಿದ್ದು 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಾನ ಗಳಿಸಿಕೊಳ್ಳುವ ಪ್ರಯತ್ನದಲ್ಲಿದೆ.

ಇತ್ತಂಡಗಳ ಆಡುವ ಬಳಗ

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್ವೆಲ್, ಮಿಚೆಲ್ ಸ್ಟಾರ್ಕ್

ಬಾಂಗ್ಲಾದೇಶ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮಹಮ್ಮದುಲ್ಲಾ, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ನಸುಮ್ ಅಹ್ಮದ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್
ಬೆಂಚ್: ಅನಾಮುಲ್ ಹಕ್, ತಂಝಿಮ್ ಹಸನ್ ಸಾಕಿಬ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್

Story first published: Saturday, November 11, 2023, 10:36 [IST]
Other articles published on Nov 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+