For Quick Alerts
ALLOW NOTIFICATIONS  
For Daily Alerts
 

ಮಾರ್ಶ್ ಶತಕದ ಅಬ್ಬರ: ಬಾಂಗ್ಲಾದೇಶ ವಿರುದ್ಧ ಆಸಿಸ್‌ಗೆ ಬೃಹತ್ ಗೆಲುವು

ಬಾಂಗ್ಲಾದೇಶದ ವಿರುದ್ಧದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಅಮೋಘ ಗೆಲುವು ಸಾಧಿಸಿದೆ. ಬಾಂಗ್ಲಾದೇಶ ನೀಡಿದ 307 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಕೇವಲ ಎರಡು ವಿಕೆಟ್ ಕಳೆದುಕೊಂಡು ಈ ಗುರಿಯನ್ನು 44.4 ಓವರ್‌ಗಳಲ್ಲಿ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಈ ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

ಬಾಂಗ್ಲಾದೇಶ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಟ್ರಾವಿಸ್ ಹೆಡ್ ವಿಕೆಟನ್ನು ಶೀಘ್ರದಲ್ಲಿಯೇ ಕಳೆದುಕೊಂಡಿತ್ತು. ಆದರೆ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಶ್ ಭರ್ಜರಿ ಶತಕದ ಜೊತೆಯಾಟ ನೀಡುವ ಮೂಲಕ ತಂಡವನ್ನು ರನ್ ಬೆನ್ನಟ್ಟುವಿಕೆಗೆ ವೇಗ ನೀಡಿದರು. 53 ರನ್‌ಗಳಿಸಿದ ವಾರ್ನರ್ ವಿಕೆಟ್ ಕಳೆದುಕೊಂಡ ಬಳಿಕ ಸ್ಟೀವ್ ಸ್ಮಿತ್ ಮಾರ್ಶ್ ಅವರನ್ನು ಸೇರಿಕೊಂಡರು. ನಂತರ ಈ ಜೋಡಿ ವಿಕೆಟ್ ಕಳೆದುಕೊಳ್ಳದೆ ಬಾಂಗ್ಲಾದೇಶ ನೀಡಿದ ಬೃಹತ್ ಗುರಿಯನ್ನು ಮೆಟ್ಟಿ ನಿಲ್ಲಲು ಕಾರಣವಾದರು.

World cup, match 43, Australia won by 8 wickets against Bangladesh, Highlights

ಮಾರ್ಶ್ ಹಾಗೂ ಸ್ಮಿತ್ ಜೋಡಿ ಮುರಿಯದ ಮೂರನೇ ವಿಕೆಟ್‌ಗೆ ಬರೊಬ್ಬರಿ 175 ರನ್‌ಗಳ ಜೊತೆಯಾಟವನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಮಿಚೆಲ್ ಮಾರ್ಶ್ ಬೃಹತ್ ಶತಕ ಸಿಡಿಸಿದ್ದರೆ ಸ್ಟೀವ್ ಸ್ಮಿತ್ ಅವರಿಂದ ಅರ್ಧ ಶತಕದ ಕೊಡುಗೆ ಬಂದಿದೆ. ಮಾರ್ಶ್ 132 ಎಸೆತಗಳಲ್ಲಿ 177 ರನ್‌ಗಳನ್ನು ಬಾರಿಸಿ ಅಜೇಯವಾಗುಳಿದರು. ಇನ್ನು ಸ್ಟೀವ್ ಸ್ಮಿತ್ 64 ಎಸೆತಗಳಲ್ಲಿ 63 ರನ್‌ಗಳನ್ನು ಬಾರಿಸಿ ಅದ್ಭುತ ಸಾಥ್ ನೀಡಿದ್ದಾರೆ.

ಇನ್ನು ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಉತ್ತಮ ಪ್ರದರ್ಶನ ನೀಡಿತು. ತಂಡದಲ್ಲಿ ತೌಹಿದ್ ಹೃದಯ್ ಅವರಿಂದ ಏಕೈಕ ಅರ್ಧ ಶತಕ ಮಾತ್ರವೇ ಬಂದಿದ್ದರೂ ಕೂಡ ಉಳಿದ ಆಟಗಾರರಿಂದ ಬ್ಯಾಟ್‌ನಿಂದ ಪರಿಣಾಮಕಾರಿ ಪ್ರದರ್ಶನ ಬಂದಿತ್ತು. ಹೃದಯ್ 74 ರನ್‌ಗಳ ಕೊಡುಗೆ ನೀಡಿದರು. ಉಳಿದಂತೆ ಶಂಟೋ 45 ರನ್‌ಗಳನ್ನು ಗಳಿಸಿದರೆ ಆರಂಭಿಕರಾದ ತನ್ಸಿದ್ ಹಸನ್ ಹಾಗೂ ಲಿಟನ್ ದಾಸ್ ತಲಾ 36 ರನ್‌ಗಳ ಕೊಡುಗೆ ನೀಡಿದರು. ಹೀಗಾಗಿ ನಿಗದಿತ 50 ಓವರ್‌ಗಳಲ್ಲಿ ಬಾಂಗ್ಲಾದೇಶ 8 ವಿಕೆಟ್ ಕಳೆದುಕೊಂಡು 306 ರನ್‌ಗಳನ್ನು ಗಳಿಸಿತ್ತು.

ಇತ್ತಂಡಗಳ ಆಡುವ ಬಳಗ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್ವೆಲ್, ಮಿಚೆಲ್ ಸ್ಟಾರ್ಕ್

ಬಾಂಗ್ಲಾದೇಶ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮಹಮ್ಮದುಲ್ಲಾ, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ನಸುಮ್ ಅಹ್ಮದ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್
ಬೆಂಚ್: ಅನಾಮುಲ್ ಹಕ್, ತಂಝಿಮ್ ಹಸನ್ ಸಾಕಿಬ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್

Story first published: Saturday, November 11, 2023, 19:35 [IST]
Other articles published on Nov 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+