Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಂತಿಮ ಲೀಗ್ ಪಂದ್ಯದಲ್ಲಿ ಭಾರತಕ್ಕೆ ನೆದರ್ಲೆಂಡ್ಸ್ ಸವಾಲು: ಪಂದ್ಯದ ಸಮಯ ಹಾಗೂ ಸಂಭಾವ್ಯ XI

ರೋಹಿತ್ ಶರ್ಮಾ ಪಡೆಯ ವಿಶ್ವಕಪ್‌ನ ಗೆಲುವಿನ ಓಟಕ್ಕೆ ಲೀಗ್ ಹಂತದಲ್ಲಿ ಈವರೆಗೆ ಯಾವ ತಂಡದಿಂದಲೂ ಸವಾಲೊಡ್ಡಲು ಸಾಧ್ಯವಾಗಲೇ ಇಲ್ಲ. ಟೂರ್ನಿಯ ಅಂತಿಮ ಲೀಗ್ ಪಂದ್ಯವನ್ನಾಡಲು ಟೀಮ್ ಇಂಡಿಯಾ ಸಜ್ಜಾಗಿದ್ದು ಈ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಭಾರತಕ್ಕೆ ಎದುರಾಳಿಯಾಗಿ ಕಣಕ್ಕಿಳಿಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸಲು ಸಿದ್ಧವಾಗಿದೆ.

ಆಡಿರುವ 8 ಪಂದ್ಯಗಳಲ್ಲಿ 8ರಲ್ಲಿಯೂ ಅಧಿಕಾರಯುತವಾಗಿ ಗೆದ್ದಿರುವ ಭಾರತ ಟೂರ್ನಿಯ ಏಕೈಕ ಅಜೇಯ ತಂಡವಾಗಿ ಉಳಿದುಕೊಂಡಿದೆ. ಇನ್ನು ನೆದರ್ಲೆಂಡ್ಸ್ ತಂಡ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯ ಗೆದ್ದುಕೊಂಡಿದ್ದರೂ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲುಣಿಸಿ ಶಾಕ್ ನೀಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡ ನೆದರ್ಲೆಂಡ್ಸ್ ವಿರುದ್ಧ ಎಚ್ಚರ ತಪ್ಪುವಂತಿಲ್ಲ ಎನ್ನುವುದು ಕೂಡ ಸ್ಪಷ್ಟ.

World cup, match 43nd: India vs Netherlands; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳ ವಿರುದ್ಧದ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್

ನೆದರ್ಲೆಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್, ಸಾಕಿಬ್ ಜುಲ್ಫಿಕರ್, ವಿಕ್ರಮಜಿತ್ ಸಿಂಗ್, ಶರೀಜ್ ಅಹ್ಮದ್, ನೋಹ್ ಕ್ರೋಸ್

ಪಿಚ್ ರಿಪೋರ್ಟ್ ಹೀಗಿದೆ

ಭಾರತ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಪಿಚ್ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಅದ್ಭುತವಾಗಿ ಬೌಲಿಂಗ್ ನಡೆಸಿದರೆ ಬೌಲಿಂಗ್ ವಿಭಾಗಕೂಡ ಇಲ್ಲಿ ಮಿಂಚು ಹರಿಸುವ ಅವಕಾಶವಿದೆ. ಟಾಸ್ ಗೆದ್ದ ತಂಡ ಇಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿನ ಸರಾಸರಿ ಸ್ಕೋರ್ 253 ರನ್.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಎಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಎಸ್‌ಎ ಯಾದವ್, ಆರ್‌ಎ ಜಡೇಜಾ, ಎಂ ಶಮಿ, ಜೆಜೆ ಬುಮ್ರಾ, ಕೆಎಲ್ ಯಾದವ್, ಮೊಹಮ್ಮದ್ ಸಿರಾಜ್

ನೆದರ್ಲೆಂಡ್ಸ್: ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಒ'ಡೌಡ್, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ ಮತ್ತು ವಿಕೆಟ್ ಕೀಪರ್), ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

Story first published: Saturday, November 11, 2023, 18:16 [IST]
Other articles published on Nov 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+