ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೂ ಕೊನೆಯ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇಂಗ್ಲೆಂಡ್ ತಂಡದ ಪರವಾಗಿ ಆಡುವ ಡೇವಿಡ್ ವಿಲ್ಲಿ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದಾರೆ. ಈ ವಿಶ್ವಕಪ್ ಟೂರ್ನಿ ತನ್ನ ಅಂತಿಮ ಅಂತಾರಾಷ್ಟ್ರಿಯ ಪಂದ್ಯವಾಗಿರಲಿದೆ ಎಂದು ವಿಲ್ಲಿ ಈಗಾಗಲೇ ಘೋಷಣೆ ಮಾಡಿದ್ದರು. ಇಂಗ್ಲೆಂಡ್ ಸೆಮಿಫೈನಲ್‌ಗೆ ಅರ್ಹತೆ ಪಡೆಯದಿರುವ ಕಾರಣ ಪಾಕಿಸ್ತಾನ ವಿರುದ್ಧದ ಈ ಪಂದ್ಯ ಅವರ ಅಂತಿಮ ಅಂತಾರಾಷ್ಟ್ರೀಯ ಪಂದ್ಯವಾಗಿರಲಿದೆ.

Live ಸ್ಕೋರ್ ಹೀಗಿದೆ
ಇನ್ನು ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಓಐನಲ್‌ಗೇರುವ ಸ್ಪರ್ಧೆಯಲ್ಲಿ ಉಳಿದುಕೊಂಡಿದೆ. ಆದರೆ ಅದು ಸಾಧ್ಯವಾಗಬೇಕಿದ್ದರೆ ಪಾಕಿಸ್ತಾನ ತಂಡಕ್ಕೆ ಪವಾಡವೇ ಆಗಬೇಕಿದೆ. ಭಾರೀ ಅಂತರದಿಂದ ಪಾಕಿಸ್ತಾನ ತಂಡ ಗೆದ್ದರೆ ಮಾತ್ರವೇ ಅದು ಸಾಧ್ಯವಾಗಲಿದೆ. ಅದರಲ್ಲೂ ಈ ಪಂದ್ಯದಲ್ಲಿ ಪಾಕಿಸ್ತಾನ ಎರಡನೇ ಪಾಳಯದಲ್ಲಿ ಬ್ಯಾಟಿಂಗ್ ಮಾಡುವ ಸವಾಲು ಪಡೆದುಕೊಂಡಿರುವ ಕಾರಣ ಇದು ಈಗ ಬಹುತೇಕ ಅಸಂಭವ ಎನಿಸಿಕೊಂಡಿದೆ. ಯಾಕೆಂದರೆ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ 284 ಎಸೆತಗಳು ಬಾಕಿಯಿರುವಂತೆಯೇ ಗೆಲುವು ಸಾಧಿಸಿದರೆ ಮಾತ್ರ ಇದು ಸಾಧ್ಯ.
ಇಂಗ್ಲೆಂಡ್ ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗುಸ್ ಅಟ್ಕಿನ್ಸನ್, ಆದಿಲ್ ರಶೀದ್
ಬೆಂಚ್: ಮಾರ್ಕ್ ವುಡ್, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರ್ರಾನ್, ಬ್ರೈಡನ್ ಕಾರ್ಸೆ
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಮ್ ಜೂನಿಯರ್, ಹ್ಯಾರಿಸ್ ರೌಫ್
ಬೆಂಚ್: ಹಸನ್ ಅಲಿ, ಉಸಾಮಾ ಮಿರ್, ಮೊಹಮ್ಮದ್ ನವಾಜ್, ಇಮಾಮ್-ಉಲ್-ಹಕ್