For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌ 2023: ಅಂತಿಮ ಲೀಗ್ ಪಂದ್ಯದಲ್ಲಿ ಭಾರತ vs ನೆದರ್ಲೆಂಡ್ಸ್ ಮುಖಾಮುಖಿ: Live ಸ್ಕೋರ್

ವಿಶ್ವಕಪ್ ಟೂರ್ನಿಯಲ್ಲಿ ಅಂತಿಮ ಲೀಗ್ ಪಂದ್ಯ ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದುಕೊಂಡಿದ್ದು ಆರಂಭದಲ್ಲಿ ಬ್ಯಾಟಿಂಗ್ ದಾಳಿ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ನೆದರ್ಲೆಂಡ್ಸ್ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಲೀಗ್ ಪಂದ್ಯದ ಕೊನೆಯ ಪಂದ್ಯವಾಗಿರುವ ಕಾರಣ ಈ ಪಂದ್ಯದಲ್ಲಿ ಭಾರತ ಯಾವುದಾದರೂ ಬದಲಾವನೆ ಮಾಡುಕೊಳ್ಳಬಹುದಾ ಎನ್ನುವ ಕುತೂಹಲವಿತ್ತು. ಆದರೆ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಸೆಮಿಫೈನಲ್‌ಗೆ ಸಿದ್ಧತೆ ನಡೆಸಲಿದೆ. ಹೀಗಾಗಿ ಈ ಹಿಂದಿನ ಪಂದ್ಯದಲ್ಲಿ ಆಡಿದ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಮತ್ತೊಂದೆಡೆ ನೆದರ್ಲೆಂಡ್ಸ್ ತಂಡ ಕೂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ.

World cup, match 45, India vs Netherlands, Toss report, playing XI and Live score

ಆಡಿರುವ 8 ಪಂದ್ಯಗಳಲ್ಲಿ 8ರಲ್ಲಿಯೂ ಅಧಿಕಾರಯುತವಾಗಿ ಗೆದ್ದಿರುವ ಭಾರತ ಟೂರ್ನಿಯ ಏಕೈಕ ಅಜೇಯ ತಂಡವಾಗಿ ಉಳಿದುಕೊಂಡಿದೆ. ಇನ್ನು ನೆದರ್ಲೆಂಡ್ಸ್ ತಂಡ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯ ಗೆದ್ದುಕೊಂಡಿದ್ದರೂ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲುಣಿಸಿ ಶಾಕ್ ನೀಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡ ನೆದರ್ಲೆಂಡ್ಸ್ ವಿರುದ್ಧ ಎಚ್ಚರ ತಪ್ಪುವಂತಿಲ್ಲ ಎನ್ನುವುದು ಕೂಡ ಸ್ಪಷ್ಟ.

ಭಾರತ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಪಿಚ್ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಅದ್ಭುತವಾಗಿ ಬೌಲಿಂಗ್ ನಡೆಸಿದರೆ ಬೌಲಿಂಗ್ ವಿಭಾಗಕೂಡ ಇಲ್ಲಿ ಮಿಂಚು ಹರಿಸುವ ಅವಕಾಶವಿದೆ. ಟಾಸ್ ಗೆದ್ದ ತಂಡ ಇಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿನ ಸರಾಸರಿ ಸ್ಕೋರ್ 253 ರನ್.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್

ಬೆಂಚ್: ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್

ನೆದರ್ಲೆಂಡ್ಸ್: ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್
ಬೆಂಚ್: ಸಾಕಿಬ್ ಜುಲ್ಫಿಕರ್, ವಿಕ್ರಮಜಿತ್ ಸಿಂಗ್, ಶರೀಜ್ ಅಹ್ಮದ್, ನೋಹ್ ಕ್ರೋಸ್

Story first published: Sunday, November 12, 2023, 13:34 [IST]
Other articles published on Nov 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+