For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2023; ಇಂಗ್ಲೆಂಡ್ vs ಬಾಂಗ್ಲಾದೇಶ, ಪಂದ್ಯದ ಪ್ರಿವ್ಯೂ, ಸಂಭಾವ್ಯ ಆಡುವ ಬಳಗ

ವಿಶ್ವಕಪ್‌ನಲ್ಲಿ ಮಂಗಳವಾರ ಡಬಲ್ ಹೆಡ್ಡರ್ ಪಂದ್ಯಗಳು ಆಯೋಜನೆಯಾಗಲಿದೆ. ಇಂಗ್ಲೆಂಡ್ ತಂಡ ಬಾಂಗ್ಲಾದೇಶವನ್ನು ಎದುರಿಸಲಿದ್ದು ಈ ಪಂದ್ಯಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಇಂಗ್ಲೆಂಡ್ ತಂಡ ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದು ಬಾಂಗ್ಲಾದೇಶ ಹಾಲಿ ಚಾಂಪಿಯನ್ನರಿಗೆ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.

ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದ್ದು ಹಾಲಿ ಚಾಂಪಿಯನ್ನರಾಗಿ ಕಣಕ್ಕಿಳಿದರೂ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ಬಾಂಗ್ಲಾದೇಶದ ವಿರುದ್ಧ ಮೊದಲ ಗೆಲುವು ಸಾಧಿಸುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲಿದೆ. ಕಿವೀಸ್ ವಿರುದ್ಧದ ಪಂದ್ಯದಲ್ಲಿ ಅನುಭವಿಸಿದ ಹಿನ್ನಡೆಯಿಂದ ಹೊರಬರುವ ಪ್ರಯತ್ನ ನಡೆಸಲಿದೆ. ಮತ್ತೊಂದೆಡೆ ಬಾಂಗ್ಲಾದೇಶ ತಂಡ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದೆ ಬಾಂಗ್ಲಾ ಪಡೆ. ಇದೀಗ ಎರಡನೇ ಕದನಕ್ಕೆ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಸೆಣೆಸಾಟಕ್ಕೆ ಸಂಪೂರ್ಣವಾಗಿ ಸಿದ್ಧವಾಗಿದೆ.

World cup, match 7: England vs Bangladesh; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಇನ್ನು ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 10:30ಕ್ಕೆ ಆರಂಭವಾಗಲಿದ್ದು ಬೆಳಿಗ್ಗೆ 10 ಗಂಟೆಗೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್

ಈ ಪಂದ್ಯದಲ್ಲಿ ಪಿಚ್ ಬ್ಯಾಟರ್‌ಗಳಿಗೆ ಅದ್ಭುತವಾಗಿ ನೆರವು ನೀಡುವ ಸಾಧ್ಯತೆಯಿದೆ. ಕಳೆದ ಐದು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 250 ರನ್‌ನಷ್ಟಿದೆ. ಇಲ್ಲಿ ಟಾಸ್ ಗೆದ್ದ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಳ್ಳುವುದು ಉತ್ತಮವಾಗಿರಲಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಜೋಸ್ ಬಟ್ಲರ್(ವಿಕೆಟ್ ಕೀಪರ್/ನಾಯಕ), ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ಡೇವಿಡ್ ವಿಲ್ಲಿ, ರೀಸ್ ಟೋಪ್ಲಿ

ಬಾಂಗ್ಲಾದೇಶ ತಂಡ: ತಂಜಿದ್ ಹಸನ್, ಲಿಟನ್ ದಾಸ್, ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್(ನಾಯಕ), ಮುಶ್ಫಿಕರ್ ರಹೀಮ್(ವಿಕೆಟ್ ಕೀಪರ್), ತೌಹಿದ್ ಹೃದಯ್, ಮಹ್ಮುದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್, ಮಹೇದಿ ಹಸನ್, ನಸುಮ್ ಅಹ್ಮದ್, ಹಸನ್ ಮಹಮೂದ್, ತಂಝಿಮ್ ಹಸನ್ ಸಾಕಿಬ್

ಸಂಭಾವ್ಯ ಆಡುವ ಬಳಗ:

ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್

ಬಾಂಗ್ಲಾದೇಶ: ತಂಜಿದ್ ಹಸನ್, ಲಿಟ್ಟನ್ ದಾಸ್, ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರಹಮಾನ್

Story first published: Monday, October 9, 2023, 18:20 [IST]
Other articles published on Oct 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+