ವಿಶ್ವಕಪ್ 2023; ಭಾರತಕ್ಕೆ ಸವಾಲೊಡ್ಡಿದ ಅಫ್ಘಾನಿಸ್ತಾನ: ಪಂದ್ಯದ ಸಮಯ, ಪಿಚ್ ರಿಪೋರ್ಟ್ ಹಾಗೂ ಪ್ಲೇಯಿಂಗ್ XI
ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಬುಧವಾರ ಎರಡನೇ ಪಂದ್ಯವನ್ನಾಡಲಿದ್ದು ಈ ಪಂದ್ಯದಲ್ಲಿ ಭಾರತಕ್ಕೆ ಅಫ್ಘಾನಿಸ್ತಾನ ತಂಡ ಎದುರಾಳಿಯಾಗಿ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಅದ್ಭುತ ಗೆಲುವು ಸಾಧಿಸಿದ್ದು ಎರಡನೇ ಪಂದ್ಯದಲ್ಲಿ ಅದೇ ಗೆಲುವಿನ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ.
ಮತ್ತೊಂದೆಡೆ ಅಫ್ಘಾನಿಸ್ತಾನ ತಂಡ ಸಾಕಷ್ಟು ಪ್ರತಿಭಾನ್ವಿತ ಆಟಗಾರರ ಪಡೆಯನ್ನು ಹೊಂದಿದ್ದರೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಸೋಲು ಅನುಭವಿಸಿರುವ ಅಫ್ಘಾನಿಸ್ತಾನ ತಂಡ ಇದೀಗ ಭಾರತದ ಕಠಿಣ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಅಫ್ಘಾನಿಸ್ತಾನದ ಹೆಚ್ಚಿನ ಆಟಗಾರರಿಗೆ ಭಾರತದ ವಾತಾವರಣ ಅತ್ಯಂತ ಪರಿಚಿತವಾಗಿದ್ದು ಭಾರತದ ತಂಡದ ವಿರುದ್ಧ ಮೇಲುಗೈ ಸಾಧಿಸುವ ಆತ್ಮವಿಶ್ವಾಸದಲ್ಲಿದ್ದಾರೆ.

ಇನ್ನು ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಅವರೇ ಆರಂಭಿಕರಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇನ್ನು ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ ತಂಡ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಪಿಚ್ ರಿಪೋರ್ಟ್
ಈ ಪಂದ್ಯದಲ್ಲಿ ಪಿಚ್ ಬ್ಯಾಟರ್‌ಗಳಿಗೆ ಅದ್ಭುತವಾಗಿ ನೆರವು ನೀಡುವ ಸಾಧ್ಯತೆಯಿದೆ. ಸಾಮಾನ್ಯವಾಗಿ ದೆಹಲಿ ಪಿಚ್ ನಿಧಾನಗತಿಗೆ ಹೆಚ್ಚು ಪ್ರಸಿದ್ಧ. ಇಲ್ಲಿ ಬ್ಯಾಟರ್‌ಗಳಿಗೆ ರನ್‌ಗಳಿಸುವುದು ಕಷ್ಟಕರ ಸ್ಥಿತಿಯಿತ್ತು. ಆದರೆ ವಿಶ್ವಕಪ್‌ಗಾಗಿ ಹೊಸ ಪಿಚ್ ಸಿದ್ಧಪಡಿಸಲಾಗಿದ್ದು ಕಪ್ಪು ಮಣ್ಣಿನ ಪಿಚ್ ತಯಾರಿಸಲಾಗಿದೆ. ಹೀಗಾಗಿ ಪಿಚ್ ಹೊಸತನದೊಂದಿಗೆ ಸಜ್ಜಾಗಿದೆ. ಇನ್ನು ಇಲ್ಲಿ ಕಳೆದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ಬರೊಬ್ಬರಿ 428 ರನ್‌ಗಳನ್ನು ಕಲೆಹಾಕಿತ್ತು. ಇದನ್ನು ಬೆನ್ನಟ್ಟಿದ ಶ್ರೀಲಂಕಾ ಕೂಡ 326 ರನ್‌ಗಳನ್ನು ಕಲೆಹಾಕಿತ್ತು. ಹೀಗಾಗಿ ಹೈಸ್ಕೋರಿಂಗ್ ಪಂದ್ಯವನ್ನು ಇಲ್ಲಿ ನಿರೀಕ್ಷಿಸಬಹುದಾಗಿದೆ.
ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ನಜಿಬುಲ್ಲಾ ಜದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications