ವಿಶ್ವಕಪ್ ಅಂಕಪಟ್ಟಿ: ಆಸ್ಟ್ರೇಲಿಯಾ ವಿರುದ್ಧ ಸ್ಮರಣೀಯ ಗೆಲುವು ಸಾಧಿಸಿದರೂ ಪಾಕ್‌ಗಿಂತ ಹಿಂದಿದೆ ಭಾರತ
ವಿಶ್ವಕಪ್ ಟೂರ್ನಿಯಲ್ಲಿ ಎಲ್ಲಾ ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳನ್ನು ಈಗ ಆಡಿದೆ. ಟೀಮ್ ಇಂಡಿಯಾ ಭಾನುವಾರ ಆಸ್ಟ್ರೇಲಿಯಾ ತಂಡವನ್ನು ಭಾನುವಾರ ಎದುರಿಸಿದ್ದು ಈ ಪಂದ್ಯದಲ್ಲಿ ಸಮೋಘ ಪ್ರದರ್ಶನದ ಮೂಲಕ ಸ್ಮರಣೀಯ ಗೆಲುವು ಸಾಧಿಸಿದೆ ಭಾರತ. ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅವರ ಅಮೋಘ ಜೊತೆಯಾಟದ ಕಾರಣದಿಂದಾಗಿ 6 ವಿಕೆಟ್‌ಗಳ ಅಂತರದ ಸಾಧಿಸಿದ ಗೆಲುವು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುವಂತಾಗಲಿದೆ.
ಈ ಗೆಲುವುನೊಂದಿಗೆ ಭಾರತ ತಂಡ ಅಂಕಪಟ್ಟಿಯಲ್ಲಿ ತನ್ನ ಖಾತೆಯನ್ನು ತೆಗೆದಿದೆ. ಎರಡು ಅಂಕಗಳು ಭಾರತ ತಂಡದ ಖಾತೆಗೆ ಸೇರ್ಪಡೆಯಾಗಿದ್ದು ಆಸ್ಟ್ರೇಲಿಯಾ ತಂಡ ಆರಂಭೀಕ ಪಂದ್ಯದಲ್ಲಿಯೇ ಆಘಾತಕಾರಿ ಸೋಲು ಕಂಡಿದೆ. ಆದರೆ ಈ ಅದ್ಭುತ ಗೆಲುವಿನ ಹೊರತಾಗಿಯೂ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ಬಾಂಗ್ಲಾದೇಶಗಳಿಗಿಂತಲೂ ಹಿಂದಿದೆ.

ಭಾರತ ಮತ್ತು ಆಸ್ಟ್ರೇಲಿಯಾ 2023ರ ವಿಶ್ವಕಪ್‌ನ ಮೊದಲ ಸುತ್ತಿನ ರೋಚಕ ಮುಖಾಮುಖಿಯನ್ನಯ ಪೂರ್ಣಗೊಳಿಸಿದೆ. 200 ರನ್‌ಗಳನ್ನು ಬೆನ್ನಟ್ಟಿದ ಭಾರತ ತಂಡ ಆರು ವಿಕೆಟ್‌ಗಳ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ 0.883 ನೆಟ್ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಈ ನೆಟ್ ರನ್‌ರೇಟ್‌ನ ಕಾಎಣದಿಂದಾಗಿಯೇ ಭಾರತ ತಂಡ ಟೂರ್ನಿಯಲ್ಲಿ ಗೆಲುವು ಕಂಡಿರುವ ಐದು ತಂಡಗಳ ಪೈಕಿ ಕೊನೆಯ ಸ್ಥಾನದಲ್ಲಿದೆ!
ಕಳೆದ ಆವೃತ್ತಿಯ ರನ್ನರ್-ಅಪ್ ನ್ಯೂಜಿಲೆಂಡ್ ಇಂಗ್ಲೆಂಡ್ ವಿರುದ್ಧ ಒಂಬತ್ತು ವಿಕೆಟ್‌ಗಳ ಅದ್ಭುತ ಗೆಲುವಿನ ನಂತರ ಅಗ್ರಸ್ಥಾನವನ್ನು ಆಕ್ರಮಿಸಿಕೊಂಡಿದೆ. ಕೇವಲ 36.2 ಓವರ್‌ಗಳಲ್ಲಿ 283 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕಿವೀಸ್ 2.149 ಅದ್ಭುತ ನೆಟ್ ರನ್‌ರೇಟ್ ದರವನ್ನು ಕಾಯ್ದುಕೊಂಡಿತು. ಶನಿವಾರ ನಡೆದ ಟೂರ್ನಮೆಂಟ್‌ನ ತನ್ನ ಆರಂಭಿಕ ಪಂದ್ಯದಲ್ಲಿ 428 ರನ್‌ಗಳ ದಾಖಲೆ ಸ್ಕೋರ್ ರಕ್ಷಿಸಿಕೊಂಡುಶ್ರೀಲಂಕಾವನ್ನು 102 ರನ್‌ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
ಅಕ್ಟೋಬರ್ 5 ರಂದು ಅಹಮದಾಬಾದ್‌ನಲ್ಲಿ ನಡೆದ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರೀ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೊನೆಯ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ನೆದರ್ಲ್ಯಾಂಡ್ಸ್ ಮತ್ತು ಶ್ರೀಲಂಕಾ ಹಾಗೂ ಇಂಗ್ಲೆಂಡ್ ವಿಶ್ವಕಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು ಮೊದಲ ಗೆಲುವಿಗಾಗಿ ಈ ತಂಡಗಳು ಹಾತೊರೆಯುತ್ತಿದೆ. ಎರಡನೇ ಸುತ್ತಿನ ಪಂದ್ಯಗಳು ಸೋಮವಾರದಿಂದ (ಅಕ್ಟೋಬರ್ 9) ಆರಂಭವಾಗಲಿದೆ.
ಭಾನುವಾರ ನಡೆದ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು ಮೊದಲಿಗೆ ಬೌಲಿಂಗ್‌ನಲ್ಲಿ 199 ರನ್‌ಗಳಿಗೆ ನಿಯಂತ್ರಿಸಿತ್ತು. ಟೀಮ್ ಇಂಡಿಯಾದ ಅದ್ಭುತ ಬೌಲಿಂಗ್‌ನ ಕಾರಣದಿಂದಾಗಿ ದೊಡ್ಡ ಮೊತ್ತದ ಗುರಿಯನ್ನು ನೀಡಲು ಆಸ್ಟ್ರೇಲಿಯಾ ತಂಡಕ್ಕೆ ಸಾಧ್ಯವಾಗಲಿಲ್ಲ. ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿ ಭಾರತ ತಂಡಕ್ಕೆ ಮೇಲುಗೈ ಒದಗಿಸಿದರೆ ಕುಲ್‌ದೀಪ್ ಯಾದವ್ ಹಾಗೂ ಬೂಮ್ರಾ ತಲಾ ಎರಡು ವಿಕೆಟ್ ಪಡೆದರು. ಸಿರಾಜ್, ಅಶ್ವಿನ್, ಪಾಂಡ್ಯ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಇನ್ನು ಆಸ್ಟ್ರೇಲಿಯಾ ತಂಡ ನೀಡಿದ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಆರಂಭದಲ್ಲಿಯೇ ಭಾರೀ ದೊಡ್ಡ ಆಘಾತಕ್ಕೆ ಸಿಲುಕಿತ್ತು. ತಂಡದ ಮೊತ್ತ ಕೇವಲ 5 ರನ್ ಆಗುವಷ್ಟರಲ್ಲಿ ಭಾರತ ತಂಡ 3 ವಿಎಕಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಈ ಸಂದರ್ಭದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಜೋಡಿ ಟೀಮ್ ಇಂಡಿಯಾಗೆ ಅಮೋಘ ಗೆಲುವು ತಂದುಕೊಟ್ಟರು. ವಿರಾಟ್ ಕೊಹ್ಲಿ 85 ರನ್‌ಗಳಿಸಿ ಗೆಲುವಿನ ಸನಿಹದಲ್ಲಿರುವಾಗ ವಿಕೆಟ್ ಕಳೆದುಕೊಂಡರೆ ಕೆಎಲ್ ರಾಹುಲ್ 97 ರನ್‌ಗಳಿಸಿ ಅಜೇಯವಾಗುಳಿದು ಗೆಲುವು ಸಾರಿದರು.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್
ಆಸ್ಟ್ರೇಲಿಯಾ ತಂಡ ಆಡುವ ಬಳಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಸೀನ್ ಅಬಾಟ್, ಟ್ರಾವಿಸ್ ಹೆಡ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications