World Cup Qualifiers: ಜಿಂಬಾಬ್ವೆ vs ವೆಸ್ಟ್ ಇಂಡೀಸ್, ಟಾಸ್ ರಿಪೋರ್ಟ್, ಆಡುವ ಬಳಗ, Live ಸ್ಕೋರ್
ವಿಶ್ವಕಪ್ ಅರ್ಹತಾ ಸುತ್ತಿನ ಟೂರ್ನಿಯ 13ನೇ ಪಂದ್ಯದಲ್ಲಿ ಇಂದು ಜಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಜಿಂಬಾಬ್ವೆ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯಕ್ಕೆ ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಎರಡು ತಂಡಗಳು ಕೂಡ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ತಮ್ಮ ಈ ಹಿಂದಿನ ಪಂದ್ಯದಲ್ಲಿ ಆಡಿದ ಆಡುವ ಬಳಗದೊಂದಿಗೆ ಕಣಕ್ಕಿಳಿಯುವ ತೀರ್ಮಾನ ತೆಗೆದುಕೊಂಡಿದೆ.

Live ಸ್ಕೋರ್ ಹೀಗಿದೆ
ಎರಡು ತಂಡಗಳು ಈ ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಆಡಿದ್ದು ಎರಡು ಗೆಲುವು ಸಾಧಿಸಿದೆ. ವೆಸ್ಟ್ ಇಂಡೀಸ್ ಆಡಿದ ಮೊದಲ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ 39 ರನ್‌ಗಳ ಗೆಲುವು ಸಾಧಿಸಿದ್ದರೆ ನಂತರ ನೇಪಾಳದ ವಿರುದ್ಧ 101 ರನ್‌ಗಳ ಬೃಹತ್ ಗೆಲುವು ಸಾಧಿಸಿತ್ತು. ಇತ್ತ ಜಿಂಬಾಬ್ವೆ ಕೂಡ ಮೊದಲ ಪಂದ್ಯದಲ್ಲಿ ನೇಪಾಳ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ್ದರೆ ನಂತರ ನೆದರ್ಲೆಂಡ್ಸ್ ತಂಡದ ವಿರುದ್ಧ 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.
ಜಿಂಬಾಬ್ವೆ ಆಡುವ ಬಳಗ: ಜಾಯ್ಲಾರ್ಡ್ ಗುಂಬಿ, ಕ್ರೇಗ್ ಎರ್ವಿನ್ (ನಾಯಕ), ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರಯಾನ್ ಬರ್ಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ವೆಲ್ಲಿಂಗ್ಟನ್ ಮಸಕಡ್ಜಾ, ರಿಚರ್ಡ್ ನಾಗರವ, ಟೆಂಡೈ ಚಟಾರ, ಬ್ಲೆಸ್ಸಿಂಗ್ ಮುಜರಬಾನಿ
ಬೆಂಚ್: ತಡಿವಾನಾಶೆ ಮರುಮನಿ, ಬ್ರಾಡ್ ಇವಾನ್ಸ್, ಇನೋಸೆಂಟ್ ಕೈಯಾ, ಲ್ಯೂಕ್ ಜೊಂಗ್ವೆ
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ನಿಕೋಲಸ್ ಪೂರನ್, ರೋಸ್ಟನ್ ಚೇಸ್, ರೋವ್‌ಮನ್ ಪೊವೆಲ್, ಜೇಸನ್ ಹೋಲ್ಡರ್, ಕೀಮೋ ಪೌಲ್, ಅಲ್ಜಾರಿ ಜೋಸೆಫ್, ಅಕೇಲ್ ಹೊಸೈನ್
ಬೆಂಚ್: ಯಾನಿಕ್ ಕ್ಯಾರಿಯಾ, ಕೀಸಿ ಕಾರ್ಟಿ, ಶಮರ್ ಬ್ರೂಕ್ಸ್, ರೊಮಾರಿಯೋ ಶೆಫರ್ಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications