Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup Qualifiers: ನೆದರ್ಲೆಂಡ್ಸ್ vs ನೇಪಾಳ, ಟಾಸ್ ರಿಪೋರ್ಟ್, ಆಡುವ ಬಳಗ, Live ಸ್ಕೋರ್

ವಿಶ್ವಕಪ್ ಅರ್ಹತಾ ಸುತ್ತಿನ ಟೂರ್ನಿಯ 14ನೇ ಪಂದ್ಯದಲ್ಲಿ ಇಂದು ನೆದರ್ಲೆಂಡ್ಸ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ನೇಪಾಳ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ನೆದರ್ಲೆಂಡ್ಸ್ ತಂಡ ಎ ಗುಂಪಿನಲ್ಲಿದ್ದು ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ. ಆಡಿರುವ ಎರಡು ಪಂದ್ಯಗಳ ಪೈಕಿ ಒಂದು ಗೆಲುವು ಸಾಧಿಸಿದ್ದರೆ ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಜಿಂಬಾಬ್ವೆ ವಿರುದ್ಧ ಮೊದಲ ಪಂದ್ಯವನ್ನು ಆಡಿದ್ದು ಆ ಪಂದ್ಯದಲ್ಲಿ 6 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿತ್ತು. ಆದರೆ ನಂತರ ನಡೆದ ಯುಎಸ್‌ಎ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

World Cup Qualifiers: match 14, Netherlands vs Nepal Toss report

Live ಸ್ಕೋರ್ ಹೀಗಿದೆ

1
57565

ಇನ್ನು ನೇಪಾಳ ತಂಡ ಅಂಕಪಟ್ಟೊಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು ಈ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಸೋಲು ಅನುಭವಿಸಿದ್ದು ಒಂದು ಗೆಲುವು ಸಾಧಿಸಿದೆ. ಜಿಂಬಾಬ್ವೆ ಹಾಗೂ ವೆಸ್ಟ್ ಇಂಡಿಸ್ ವಿರುದ್ಧ ಭಾರೀ ಅಂತರದಿಂದ ಜಿಂಬಾಬ್ವೆ ಸೋಲು ಕಂಡಿದ್ದರೆ ಯುಎಸ್‌ಎ ವಿರುದ್ಧ 101 ರನ್‌ಗಳ ಅಂತರದ ಗೆಲುವು ಸಾಧಿಸಿತ್ತು.

ನೆದರ್ಲೆಂಡ್ಸ್ ಆಡುವ ಬಳಗ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ವೆಸ್ಲಿ ಬ್ಯಾರೆಸಿ, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಲೋಗನ್ ವ್ಯಾನ್ ಬೀಕ್, ಕ್ಲೇಟನ್ ಫ್ಲಾಯ್ಡ್, ಶರೀಜ್ ಅಹ್ಮದ್, ಆರ್ಯನ್ ದತ್, ರಯಾನ್ ಕ್ಲೈನ್

ಬೆಂಚ್: ವಿವಿಯನ್ ಕಿಂಗ್ಮಾ, ಸಾಕಿಬ್ ಜುಲ್ಫಿಕರ್, ಮೈಕೆಲ್ ಲೆವಿಟ್, ನೋಹ್ ಕ್ರೋಸ್

ನೇಪಾಳ ಆಡುವ ಬಳಗ: ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ಭೀಮ್ ಶಾರ್ಕಿ, ರೋಹಿತ್ ಪೌಡೆಲ್ (ನಾಯಕ), ಆರಿಫ್ ಶೇಖ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಗುಲ್ಸನ್ ಝಾ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಲಲಿತ್ ರಾಜಬಂಶಿ
ಬೆಂಚ್: ಜ್ಞಾನೇಂದ್ರ ಮಲ್ಲಾ, ಸೋಂಪಾಲ್ ಕಾಮಿ, ಕಿಶೋರ್ ಮಹತೋ, ಪ್ರತಿಸ್ ಜಿಸಿ, ಅರ್ಜುನ್ ಸೌದ್

Story first published: Saturday, June 24, 2023, 13:24 [IST]
Other articles published on Jun 24, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+