Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

World Cup Qualifiers: ಮತ್ತೆ ಅಬ್ಬರಿಸಿದ ರಾಜಾ: ವೆಸ್ಟ್ ಇಂಡೀಸ್‌ ವಿರುದ್ಧ ಭರ್ಜರಿಯಾಗಿ ಗೆದ್ದ ಜಿಂಬಾಬ್ವೆ

ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಜಿಂಬಾಬ್ವೆ ತಂಡ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಮಿಂಚಿದ ಜಿಂಬಾಬ್ವೆ 35 ರನ್‌ಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿದೆ. ಅನುಭವಿ ಆಲ್‌ರೌಂಡರ್ ಸಿಕಂದರ್ ರಾಜಾ ಈ ಪಂದ್ಯದಲ್ಲಿಯೂ ಜಿಂಬಾಬ್ವೆ ಪರವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಗ ಪ್ರದರ್ಶನ ನೀಡಿದ್ದು ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ನಾಯಕ ಕ್ರೇಗ್ ಇರ್ವಿನ್ 47 ರನ್, ಸಿಕಂದರ್ ರಾಜಾ 68 ರನ್ ಮತ್ತು ರಿಯಾನ್ ಬರ್ಲ್ 50 ರನ್‌ಗಳ ಕೊಡುಗೆ ನಿಇದ ಕಾರಣ ಜಿಂಬಾಬ್ವೆ ತಂಡ 268 ರನ್‌ಗಳನ್ನು ಗಳಿಸಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ ಸವಾಲಿನ ಗುರಿಯನ್ನು ನಿಗದಿಪಡಿಸಿತು.

World Cup Qualifiers: Zimbabwe won against west indies by 35 runs

ಈ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡಕ್ಕೆ ಸಾಧಾರಣ ಆರಂಬ ದೊರೆಯಿತಾದರೂ ನಂತರ ದೊಡ್ಡ ಜೊತೆಯಾಟ ಬಾರಲಿಲ್ಲ. ಆರಂಭಿಕ ಆಟಗಾರ ಕೈಲ್ ಮೇಯರ್ಸ್ ಮಾತ್ರ ಅರ್ಧ ಶತಕ ಸಿಡಿಸಿದ್ದು ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ರೊಸ್ಟನ್ ಚೇಸ್ 44 ರನ್‌ಗಳ ಕೊಡುಗೆ ನೀಡಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಜಿಂಬಾಬ್ವೆ ಪರವಾಗಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದು ಟೆಂಡೈ ಚಟರಾ ಮೂರು ವಿಕೆಟ್ ಪಡೆದರೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದ ಸಿಕಂದರ್ ರಾಜಾ ಬೌಲಿಂಗ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದು ಎರಡು ವಿಕೆಟ್ ಪಡೆದರು. ವೆಸ್ಟ್ ಇಂಡಿಸ್ ತಂಡ 233 ರನ್‌ಗಳನ್ನು ಮಾತ್ರವೇಗಳಿಸಲು ಸಾಧ್ಯವಾಗಿದ್ದು 35 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಜಿಂಬಾಬ್ವೆ ಆಡುವ ಬಳಗ: ಜಾಯ್ಲಾರ್ಡ್ ಗುಂಬಿ, ಕ್ರೇಗ್ ಎರ್ವಿನ್ (ನಾಯಕ), ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರಯಾನ್ ಬರ್ಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ವೆಲ್ಲಿಂಗ್ಟನ್ ಮಸಕಡ್ಜಾ, ರಿಚರ್ಡ್ ನಾಗರವ, ಟೆಂಡೈ ಚಟಾರ, ಬ್ಲೆಸ್ಸಿಂಗ್ ಮುಜರಬಾನಿ
ಬೆಂಚ್: ತಡಿವಾನಾಶೆ ಮರುಮನಿ, ಬ್ರಾಡ್ ಇವಾನ್ಸ್, ಇನೋಸೆಂಟ್ ಕೈಯಾ, ಲ್ಯೂಕ್ ಜೊಂಗ್ವೆ

ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ನಿಕೋಲಸ್ ಪೂರನ್, ರೋಸ್ಟನ್ ಚೇಸ್, ರೋವ್‌ಮನ್ ಪೊವೆಲ್, ಜೇಸನ್ ಹೋಲ್ಡರ್, ಕೀಮೋ ಪೌಲ್, ಅಲ್ಜಾರಿ ಜೋಸೆಫ್, ಅಕೇಲ್ ಹೊಸೈನ್
ಬೆಂಚ್: ಯಾನಿಕ್ ಕ್ಯಾರಿಯಾ, ಕೀಸಿ ಕಾರ್ಟಿ, ಶಮರ್ ಬ್ರೂಕ್ಸ್, ರೊಮಾರಿಯೋ ಶೆಫರ್ಡ್

Story first published: Saturday, June 24, 2023, 21:20 [IST]
Other articles published on Jun 24, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+