Ind vs Aus: ಹರ್ಭಜನ್ ಅಪರೂಪದ ದಾಖಲೆ ಸರಿಗಟ್ಟಿದ ರವೀಂದ್ರ ಜಡೇಜಾ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 199 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ರವೀಂದ್ರ ಜಡೇಜಾ ಅದ್ಭುಇತ ಯಶಸ್ಸು ಸಾಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಅಪರೂಪದ ದಾಖಲೆಯ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಅವರನ್ನು ಸೇರಿಕೊಂಡಿದ್ದಾರೆ.
ಬಿಸಿಯಾದ ವಾತಾವರಣದಿಂದಾಗಿ ಸಾಕಷ್ಟು ಸವಾಲಿನಿಂದ ಕೂಡಿದ್ದ ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರು ಬೌಲಿಂಗ್‌ನಲ್ಲಿ ಮ್ಯಾಜಿಕ್ ಮಾಡಿದ್ದಾರೆ. ರನ್ ನೀಡುವುದರಲ್ಲಿಯೂ ಕಡಿವಾಣ ಹಾಕಿದ ಜಡ್ಡು ವಿಕೆಟ್ ಕೂಡ ಕಬಳಿಸುವಲ್ಲಿಯೂ ಯಶಸ್ವಿಯಾದರು.

ಚೆನ್ನೂ ಸೂಪರ್ ಕಿಂಗ್ಸ್ ಪರವಾಗಿ ಆಡುವ ರವೀಂದ್ರ ಜಡೇಜಾಗೆ ಚೆನ್ನೈನ ಪಿಚ್ ಉಳಿದೆಲ್ಲರಿಗಿಂತಲೂ ಹೆಚ್ಚು ಪರಿಚಿತ ಎನ್ನುವುದು ಸ್ಪಷ್ಟ. ಹೀಗಾಗಿ ಈ ಪಿಚ್‌ನ ಲಾಭವನ್ನು ಅವರು ಅದ್ಭುತವಾಗಿ ಬಳಸಿಕೊಂಡರು. ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲ್ಯಾಬುಶೇನ್ ಅವರನ್ನು ಸತತ ಎರಡು ಓವರ್‌ಗಳಲ್ಲಿ ಫೆವಿಲಿಯನ್‌ಗೆ ಅಟ್ಟಿದ ಜಡ್ಡು ಬಳಿಕ ಅಲೆಕ್ಸ್ ಕ್ಯಾರಿ ಅವರನ್ನು ಕೂಡ ಶೂನ್ಯಕ್ಕೆ ಔಟ್ ಮಾಡಿದರು. ಈ ಮೂಲಕ ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕಕ್ಕೆ ದೊಡ್ಡ ಆಘಾತ ನೀಡಿದ್ದಾರೆ. 10 ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸಿದಾಗ ಜಡೇಜಾ 28 ರನ್ ನೀಡಿ 3 ವಿಕೆಟ್ ಪಡೆದುಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಜಡೇಜಾ 3 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ವಿರುದ್ಧ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಈ ಸಾಧನೆಯನ್ನು ಮಾಡಿದ ಕೇವಲ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ ಜಡ್ಡು. ಈ ಪೈಕಿ ಇಬ್ಬರು ಭಾರತೀಯರೇ ಆಗಿದ್ದಾರೆ. ಸ್ಟುವರ್ಟ್ ಬ್ರಾಡ್ ಹಾಗೂ ಹರ್ಭಜನ್ ಸಿಂಗ್ ಉಳಿದ ಇಬ್ಬರು ಆಟಗಾರರು.
ಆಸ್ಟ್ರೇಲಿಯಾ ಆಡುವ ಬಖಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications