World cup: ವಾಂಖೆಡೆಯಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಭವ: ಕಿವೀಸ್‌ಗೆ ಗೆಲ್ಲಲು ಬೃಹತ್ ಗುರಿ
ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ನ್ಯೂಜಿಲೆಂಡ್ ಬೌಲಿಂಗ್ ವಿಭಾಗದ ವಿರುದ್ಧ ಅಬ್ಬರಿಸಿದ್ದಾರೆ. ವಿರಾಟ್ ಕೊಹ್ಲಿ ವಿಶ್ವದಾಖಲೆಯ ಶತಕ ಸಿಡಿಸಿದರೆ ಶ್ರೇಯಸ್ ಐಯ್ಯರ್ ಕೂಡ ಮತ್ತೊಂದು ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡಕ್ಕೆ 398 ರನ್‌ಗಳ ಬೃಹತ್ ಗುರಿಯನ್ನು ಮುಂದಿಟ್ಟಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಮತ್ತೊಂದು ಅಮೋಘ ಆರಂಭ ನೀಡಿದರು. ಅದರಲ್ಲೂ ನಾಯಕ ರೋಹಿತ್ ಶರ್ಮಾ ಆರಂಭದಿಂದಲೇ ಕಿವೀಸ್ ಬೌಲರ್‌ಗಳ ವಿರುದ್ಧ ಸ್ಪೋಟಕ ಪ್ರದರ್ಶನ ನೀಡಲು ಆರಂಭಿಸಿದ್ದರು. ಕೇವಲ 29 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 47 ರನ್‌ಗಳಿಸಿ ವಿಕೆಟ್ ಕಳೆದುಕೊಳ್ಳುವ ಮೂಲಕ ಅರ್ಧ ಶತಕದ ಅಂಚಿನಲ್ಲಿ ಎಡವಿದರು.

ಅದಾದ ಬಳಿಕ ವಿರಾಟ್ ಕೊಹ್ಲಿ ಹಾಗೂ ಶುಬ್ಮನ್ ಗಿಲ್ ಮತ್ತೊಂದು ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಅರ್ಧ ಶತಕ ಸಿಡಿಸಿ ಶತಕದತ್ತ ಹೆಜ್ಜೆ ಹಾಕುತ್ತಿದ್ದ ಶುಬ್ಮನ್ ಗಿಲ್ ಗಾಯದಿಂದಾಗಿ ಮೈದಾನ ತೊರೆದರು. ಬಳೀಕ ಕಣಕ್ಕಿಳಿದ ಶ್ರೇಯಸ್ ಐಯ್ಯರ್ ವಿರಾಟ್ ಕೊಹ್ಲಿ ಜೊತೆಗೆ ಸೇರಿಕೊಂಡು ಬೃಹತ್ ಜೊತೆಯಾಟದಲ್ಲಿ ಭಾಗುಯಾದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆಯ 50ನೇ ಶತಕವನ್ನು ಪೂರ್ಣಗೊಳಿಸಿದರು.
113 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 117 ರನ್‌ಗಳನ್ನು ಬಾರಿಸಿ ವಿಕೆಟ್ ಕಳೆದುಕೊಂಡರು. ಬಳಿಕ ಶ್ರೇಯಸ್ ಐಯ್ಯರ್ ತಮ್ಮ ಸ್ಪೋಟಕ ಆಟವನ್ನು ಮುಂದುವರಿಸಿದ್ದಾರೆ. ಐಯ್ಯರ್ ಈ ಪಂದ್ಯದಲ್ಲಿ 70 ಎಸೆತಗಳನ್ನು ಎದುರಿಸಿ 105 ರನ್‌ಗಳನ್ನು ಸಿಡಿಸಿದರು. ಈ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಹಾಗೂ 8 ಭರ್ಜರಿ ಶತಕ ಸೇರಿಕೊಂಡಿತ್ತು. ಇನ್ನು ಅಂತಿಮ ಹಂತದಲ್ಲಿ ಕೆಎಲ್ ರಾಹುಲ್ ಕೂಡ ವೇಗವಾಗಿ ರನ್‌ಗಳಿಸಿದ್ದು 20 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರು. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಭರ್ಜರಿ 397 ರನ್‌ಗಳನ್ನು ಕಲೆಹಾಕಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್
ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ವಿಲ್ ಯಂಗ್, ಇಶ್ ಸೋಧಿ, ಜೇಮ್ಸ್ ನೀಶಮ್, ಕೈಲ್ ಜೇಮಿಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications