For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌ ಫೈನಲ್‌ಗೆ ಪ್ರವೇಶಿಸಿದ ಭಾರತ: 2019ರ ಸೆಮಿಫೈನಲ್ ಸೋಲಿಗೆ ಟೀಮ್ ಇಂಡಿಯಾ ಪ್ರತಿಕಾರ!

ಏಕದಿನ ವಿಶ್ವಕಪ್ 2023ರ ಫೈನಲ್‌ಗೆ ಭಾರತ ಕ್ರಿಕೆಟ್ ತಂಡ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ 3ನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಅವಕಾಶವನ್ನು ಹೊಂದಿದೆ. ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದು 70 ರನ್‌ಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ನಾಲ್ಕನೇ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

ಇಂದಿನ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ 397 ರನ್‌ಗಳನ್ನು ಕಲೆಹಾಕಿತ್ತು. ವಿರಾಟ್ ಕೊಹ್ಲಿಯ ವಿಶ್ವದಾಖಲೆಯ ಶತಕ ಹಾಗೂ ಶ್ರೇಯಸ್ ಐಯ್ಯರ್ ಅವರ ಅಮೋಘ ಶತಕದ ಕಾರಣದಿಂದಾಗಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಕಲೆಹಾಕಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಕೂಡ ಅದ್ಭುತ ಹೋರಾಟವನ್ನು ನೀಡಿತು. ಆದರೆ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಅಮೋಘ ಬೌಲಿಂಗ್ ಪ್ರದರ್ಶನ ಕಿವೀಸ್ ಪಡೆಗೆ ಭಾರೀ ಅಡ್ಡಿಯಾದರು. ಏಳು ವಿಕೆಟ್‌ಗಳ ಗೊಂಚಲು ಪಡೆದ ಮೊಹಮ್ಮದ್ ಶಮಿ ಭಾರತದ ಗೆಲುವಿನಲ್ಲಿ ಮತ್ತೊಮ್ಮೆ ದೊಡ್ಡ ಪಾತ್ರವನ್ನು ನಿರ್ವಹಿಸಿದ್ದಾರೆ.

World cup: Semi Final-1, India win against New Zealand by 70 runs and reach finals

ಟೀಮ್ ಇಂಡಿಯಾದ ಬೃಹತ್ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲಿಯೇ ಮೊಹಮ್ಮದ್ ಶಮಿ ಆಘಾತ ನೀಡಿದ್ದರು. ಮೊದಲ ವಿಕೆಟ್‌ಗೆ 5 ಓವರ್‌ಗಳಲ್ಲಿ 30 ರನ್‌ಗಳ ಜೊತೆಯಾವಾಡಿದ ಕಿವೀಸ್ ಆರಂಭಿಕರಿಬ್ಬರನ್ನೂ ಮೊಹಮ್ಮದ್ ಶಮಿ ತಮ್ಮ ಮೊದಲ ಓವರ್‌ನಲ್ಲಿಯೇ ಔಟ್ ಭಾರತಕ್ಕೆ ಮೇಲುಗೈ ಒದಗಿಸಿದ್ದರು. ಆದರೆ ಮೂರನೇ ವಿಕೆಟ್‌ಗೆ ಜೊತೆಯಾದ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡ್ಯಾರೆಲ್ ಮಿಚೆಲ್ ಬರೊಬ್ಬರಿ 181 ರನ್‌ಗಳ ಜೊತೆಯಾಟವನ್ನು ನೀಡಿ ಭಾರತಕ್ಕೆ ಹಿನ್ನಡೆಯುಂಟು ಮಾಡುವ ಲೆಕ್ಕಾಚಾರದಲ್ಲಿದ್ದರು.

ಈ ಹಂತದಲ್ಲಿ ಕೇನ್ ವಿಲಿಯಮ್ಸನ್ ಅವರನ್ನು ಔಟ್ ಮಾಡುವ ಮೂಲಕ ಮತ್ತೊಮ್ಮೆ ಭಾರತಕ್ಕೆ ಮುನ್ನಡೆ ಒದಗಿಸಿರು. ಅದೇ ಓವರ್‌ನಲ್ಲಿ ಟಾಮ್ ಲ್ಯಾಥಮ್ ಕೂಡ ವಿಕೆಟ್ ಕಳೆದುಕೊಂಡಾಗ ಮತ್ತೆ ಕಿವೀಸ್ ತಂಡ ಒತ್ತಡಕ್ಕೆ ಸಿಲುಕಿತ್ತು. ಬಳಿಕ ಮಿಚೆಲ್ ಹಾಗು ಗ್ಲೆನ್ ಫಿಲಿಪ್ಸ್ ಮತ್ತೊಂದು ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. ಮಿಚೆಲ್ ಭರ್ಜರಿ 134 ರನ್‌ಗಳನ್ನು ಕಲೆ ಹಾಕಿ ಕಿವೀಸ್ ಹೋರಾಟಕ್ಕೆ ಬಲ ತುಂಬಿದರು. ಆದರೆ ಪಿಲಿಪ್ಸ್ ವಿಕೆಟ್ ಕಳೆದುಕೊಂಡ ಬಳಿಕ ಭಾರತ ಪಂದ್ಯವನ್ನು ಸಂಪೂರ್ಣವಾಗಿ ತಮ್ಮ ತೆಕ್ಕೆಗೆ ತೆಗೆದುಕೊಂಡಿತು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಭರ್ಜರಿ 7 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಮೊಹಮ್ಮದ್ ಹಲವು ದಾಖಲೆಗಳನ್ನು ಕೂಡ ಬರೆದಿದ್ದಾರೆ.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಮತ್ತೊಂದು ಅಮೋಘ ಆರಂಭ ನೀಡಿದರು. ಅದರಲ್ಲೂ ನಾಯಕ ರೋಹಿತ್ ಶರ್ಮಾ ಆರಂಭದಿಂದಲೇ ಕಿವೀಸ್ ಬೌಲರ್‌ಗಳ ವಿರುದ್ಧ ಸ್ಪೋಟಕ ಪ್ರದರ್ಶನ ನೀಡಲು ಆರಂಭಿಸಿದ್ದರು. ಕೇವಲ 29 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 47 ರನ್‌ಗಳಿಸಿ ವಿಕೆಟ್ ಕಳೆದುಕೊಳ್ಳುವ ಮೂಲಕ ಅರ್ಧ ಶತಕದ ಅಂಚಿನಲ್ಲಿ ಎಡವಿದರು.

ಅದಾದ ಬಳಿಕ ವಿರಾಟ್ ಕೊಹ್ಲಿ ಹಾಗೂ ಶುಬ್ಮನ್ ಗಿಲ್ ಮತ್ತೊಂದು ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಅರ್ಧ ಶತಕ ಸಿಡಿಸಿ ಶತಕದತ್ತ ಹೆಜ್ಜೆ ಹಾಕುತ್ತಿದ್ದ ಶುಬ್ಮನ್ ಗಿಲ್ ಗಾಯದಿಂದಾಗಿ ಮೈದಾನ ತೊರೆದರು. ಬಳೀಕ ಕಣಕ್ಕಿಳಿದ ಶ್ರೇಯಸ್ ಐಯ್ಯರ್ ವಿರಾಟ್ ಕೊಹ್ಲಿ ಜೊತೆಗೆ ಸೇರಿಕೊಂಡು ಬೃಹತ್ ಜೊತೆಯಾಟದಲ್ಲಿ ಭಾಗುಯಾದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆಯ 50ನೇ ಶತಕವನ್ನು ಪೂರ್ಣಗೊಳಿಸಿದರು.

113 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 117 ರನ್‌ಗಳನ್ನು ಬಾರಿಸಿ ವಿಕೆಟ್ ಕಳೆದುಕೊಂಡರು. ಬಳಿಕ ಶ್ರೇಯಸ್ ಐಯ್ಯರ್ ತಮ್ಮ ಸ್ಪೋಟಕ ಆಟವನ್ನು ಮುಂದುವರಿಸಿದ್ದಾರೆ. ಐಯ್ಯರ್ ಈ ಪಂದ್ಯದಲ್ಲಿ 70 ಎಸೆತಗಳನ್ನು ಎದುರಿಸಿ 105 ರನ್‌ಗಳನ್ನು ಸಿಡಿಸಿದರು. ಈ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಹಾಗೂ 8 ಭರ್ಜರಿ ಶತಕ ಸೇರಿಕೊಂಡಿತ್ತು. ಇನ್ನು ಅಂತಿಮ ಹಂತದಲ್ಲಿ ಕೆಎಲ್ ರಾಹುಲ್ ಕೂಡ ವೇಗವಾಗಿ ರನ್‌ಗಳಿಸಿದ್ದು 20 ಎಸೆತಗಳಲ್ಲಿ 39 ರನ್‌ಗಳನ್ನು ಗಳಿಸಿದರು. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಭರ್ಜರಿ 397 ರನ್‌ಗಳನ್ನು ಕಲೆಹಾಕಿತ್ತು.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ವಿಲ್ ಯಂಗ್, ಇಶ್ ಸೋಧಿ, ಜೇಮ್ಸ್ ನೀಶಮ್, ಕೈಲ್ ಜೇಮಿಸನ್

Story first published: Wednesday, November 15, 2023, 22:35 [IST]
Other articles published on Nov 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+