Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ 2ನೇ ಸೆಮಿಫೈನಲ್: ಹೇಗಿದೆ ಹವಾಮಾನ ವರದಿ?

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಈ ಬಾರಿಯ ವಿಶ್ವಕಪ್‌ನಲ್ಲಿ ಫೈನಲ್‌ಗೆ ಪ್ರವೇಶ ಪಡೆಯಲು ಇಂದು ಕಾದಾಟ ನಡೆಸಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಐದು ಬಾರಿಯ ಚಾಂಪಿಯನ್ ತಂಡವಾಗಿರುವ ಆಸ್ಟ್ರೇಲಿಯಾ ಆರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಕನಸು ಕಾಣುತ್ತಿದ್ದರೆ ದಕ್ಷಿಣ ಆಫ್ರಿಕಾ ಪ್ರಪ್ರಥಮ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯಲ್ಲಿದೆ.

ಈ ಎರಡು ತಂಡಗಳು ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಎರಡು ಬಾರಿ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಿರುವ ಇತಿಹಾಸವಿದೆ. 1999 ಹಾಗೂ 2007ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಈ ಎರಡು ತಮಡಗಳು ಮುಖಾಮುಖಿಯಾಗಿದ್ದವು. ಆದರೆ ಆ ಎರಡು ಸಂದರ್ಭದಲ್ಲಿಯೂ ಆಸ್ಟ್ರೇಲಿಯಾ ತಂಡವೇ ಗೆದ್ದು ಬೀಗಿತ್ತು. ಬಳಿಕ ಫೈನಲ್‌ನಲ್ಲಿಯೂ ಗೆದ್ದು ಚಾಂಪಿಯನ್ ಎನಿಸಿಕೊಂಡಿತ್ತು. ಈ ಬಾರಿ ಯಾವ ತಂಡ ಫೈನಲ್‌ನ್ಲಲಿ ಆಡುವ ಅರ್ಹತೆ ಸಂಪಾದಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

World Cup Semi-Final 2: Australia vs South Africa Last Minute Weather Update from Eden Gardens

ಪ್ಯಾಟ್ ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡ ಆಡಿದ 9 ಲೀಗ್ ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿತ್ತು. ಇನ್ನು ಟೆಂಬಾ ಬವಿಮಾ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ತಮಡ ಅಬ್ಬರದ ಪ್ರದರ್ಶನ ನೀಡದ್ದು ಈ ತಂಡ ಮೂಡಿ ಆಡಿದ 9 ಲೀಗ್ ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಮಡಗಳ ವಿರುದ್ಧ ಮಾತ್ರವೇ ಸೋಲು ಅನುಭವಿಸಿದ್ದರೆ ದಕ್ಷಿಣ ಆಫ್ರಿಕಾ ತಂಡ ಭಾರತ ಹಾಗೂ ನೆದರ್ಲೆಂಡ್ಸ್ ತಂಡದ ವಿರುದ್ಧ ಸೋಲು ಅನುಭವಿಸಿತ್ತು.

ಹವಾಮಾನ ವರದಿ ಹೇಗಿದೆ?
ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಎರಡನೇ ಸೆಮಿಫೈನಲ್ ಪಂದ್ಯ ಗುರುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಆದರೆ ಹವಾಮಾನ ವರದಿಯ ಪ್ರಕಾರ ಈ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡುವ ಸಾಧ್ಯತೆಯೂ ಇದೆ. ಹಗಲಿನ ವೇಳೆ ಮಳೆಯಾಗುವ ಸಾಧ್ಯತೆ ಶೇಕಡಾ 33ರಷ್ಟಿದ್ದರೆ ರಾತ್ರಿ ಸಮಯದಲ್ಲಿ 56 ಶೇಕಡಾ ಇದೆ. ಇನ್ನು ಉಷ್ಣಾಂಶ ಹಗಲು 27 ಡಿಗ್ರಿ ಸೆಲ್ಸಿಯಸ್ ಇದ್ದರೆ ರಾತ್ರಿ 23 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ.

ಇನ್ನು ಈಡನ್ ಗಾರ್ಡನ್ಸ್‌ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಎನಿಸಿಕೊಂಡಿದೆ. ಇಲ್ಲಿ ಬ್ಯಾಟರ್‌ಗಳು ರನ್‌ ಮಳೆ ಹರಿಸುವ ಸಾಧ್ಯ ಹೆಚ್ಚಾಗಿದೆ. ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಎರಡು ತಂಡಗಳಲ್ಲಿಯೂ ಬಲಿಷ್ಠ ಬ್ಯಾಟರ್‌ಗಳು ಇರುವ ಕಾರಣ ದೊಡ್ಡ ಮೊತ್ತದ ಪೈಪೋಟಿ ಆಗುವುದು ನಿಶ್ಚಿತ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್(ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಟೆಂಬಾ ಬವುಮಾ(ನಾಯಕ), ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಲಿಜಾದ್ ವಿಲಿಯಮ್ಸ್, ರೀಜಾ ಹೆಂಡ್ರಿಕ್ಸ್, ತಬ್ರೈಜ್ ಶಮ್ಸಿ, ಮಾರ್ಕೊ ಜಾನ್ಸೆನ್

Story first published: Thursday, November 16, 2023, 11:40 [IST]
Other articles published on Nov 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+