Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ ಮುಖಾಮುಖಿ: ಸಂಭಾವ್ಯ XI ಹಾಗೂ ಪಂದ್ಯದ ಮಾಹಿತಿ

ಐದು ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಗುರುವಾರ ದಕ್ಷಿಣ ಆಫ್ರಿಕಾ ತಂಡನ್ನು ಎರಡನೇ ಸೆಮಿಫೈನಲ್‌ನಲ್ಲಿ ಎದುರಿಸಲು ಸಜ್ಜಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಎರಡು ತಂಡಗಳು ಕೂಡ ಫೈನಲ್ ಪಂದ್ಯದಲ್ಲಿ ಆಡುವ ಅರ್ಹತೆ ಗಿಟ್ಟಿಸಿಕೊಳ್ಳಲು ಸರ್ವ ಪ್ರಯತ್ನ ನಡೆಸಲಿದೆ.

ಈ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿರುವ ದಕ್ಷಿಣ ಆಫ್ರಿಕಾ ತಂಡ ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿತ್ತು. ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಪ್ರಿಕಾ ತಂಡಗಳು ಸಮಾನ ಅಂಕವನ್ನು ಪಡೆದುಕೊಂಡಿದ್ದರೂ ನೆಟ್‌ರನ್‌ರೆಟ್‌ನಲ್ಲಿ ಆಸ್ಟ್ರೇಲಿಯಾ ಹಿಂದಿದ್ದ ಕಾರಣ ಮೂರನೇ ಸ್ಥಾನದೊಂದಿಗೆ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

World cup, Semi-final 2: Australia vs South Africa; Probable XIs Pitch Report and Live details


ಇನ್ನು ಈ ವಿಶ್ವಕಪ್ ಟೂರ್ನಿಯಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಆಸ್ಟ್ರೇಲಿಯಾ ತಂಡವನ್ನು ದಕ್ಷಿಣ ಆಫ್ರಿಕಾ ಬರೊಬ್ಬರಿ 134 ರನ್‌ಗಳ ಅಂತರದಿಂದ ಮಣಿಸಿತ್ತು. ಆದರೆ ಈ ಹಿಂದೆ ಎರಡು ಬಾರಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಎದುರಿಸಿದ್ದಾಗ ಸೋಲು ಅನುಭವಿಸಿದ ಹಿನ್ನಲೆಯಿದೆ. 1999 ಹಾಗೂ 2007ರಲ್ಲಿ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾಗೆ ಶರಣಾಗಿತ್ತು.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಪಂದ್ಯ ಗುರುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್(ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಟೆಂಬಾ ಬವುಮಾ(ನಾಯಕ), ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಲಿಜಾದ್ ವಿಲಿಯಮ್ಸ್, ರೀಜಾ ಹೆಂಡ್ರಿಕ್ಸ್, ತಬ್ರೈಜ್ ಶಮ್ಸಿ, ಮಾರ್ಕೊ ಜಾನ್ಸೆನ್

ಆಸ್ಟ್ರೇಲಿಯಾ ಸಂಭಾವ್ಯ XI
ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಷ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ದಕ್ಷಿಣ ಆಫ್ರಿಕಾ ಸಂಭಾವ್ಯ XI: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ

Story first published: Wednesday, November 15, 2023, 21:58 [IST]
Other articles published on Nov 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+