ಬೆಂಗಳೂರು, ಅಕ್ಟೋಬರ್ 18: ಕರ್ನಾಟಕ ಮೂಲದ ಟೀಂ ಇಂಡಿಯಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರು ಆಸ್ಟ್ರೇಲಿಯಾದ ಮಹಿಳಾ ಬಿಗ್ ಬಾಷ್ ಲೀಗ್‌ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಜತೆಗೆ ಯುವ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಕೂಡಾ ಲೀಗ್ ಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ.

'ವೇದಾ ಮತ್ತು ದೀಪ್ತಿ ಅವರೊಂದಿಗೆ ಹಲವು ಫ್ರಾಂಚೈಸ್‌ಗಳು ಮಾತುಕತೆ ನಡೆಸಿದ್ದು, ಈ ಋತುವಿನಲ್ಲಿ ಇಬ್ಬರೂ ಬಿಗ್ ಬಾಷ್ ಲೀಗ್‌ನಲ್ಲಿ ಆಡುವುದು ನಿಶ್ಚಿತ' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 8ರಿಂದ ಬೆಂಗಳೂರಿನಲ್ಲಿ ರಾಷ್ಟ್ರೀಯ ತಂಡದ ಶಿಬಿರ ಆರಂಭವಾಗಲಿದೆ. ಅದರಲ್ಲಿ ಭಾಗವಹಿಸಿ ಫಿಟ್‌ನೆಸ್ ಕಾಪಾಡಿಕೊಳ್ಳಲು ಹೆಚ್ಚಿನ ಒತ್ತು ನೀಡುತ್ತೇನೆ' ಎಂದು ವೇದಾ ಹೇಳಿದ್ದಾರೆ.