ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯಗಳಿಗೆ ಮಳೆ ಭಾರೀ ಕಾಟವನ್ನು ನೀಡಲು ಆರಂಭಿಸಿದೆ. ಇಂದು ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಎರಡು ಪ್ರಮುಖ ತಂಡಗಳಾದ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯ ಕೂಡ ಮಳೆಗೆ ಆಹುತಿಯಾಗುವ ಮೂಲಕ ಭಾರೀ ನಿರಾಸೆಯುಂಟು ಮಾಡಿದೆ. ಅಲ್ಲದೆ ಇದು ವಿಶ್ವಕಪ್ ಟೂರ್ನಿಗೂ ಹಿನ್ನಡೆಯುಂಟು ಮಾಡುವ ಆತಂಕ ಮೂಡಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಈ ಪಂದ್ಯದಲ್ಲಿ ಕಣಕ್ಕಿಳಿಯಲು ಸರ್ವ ಸನ್ನಧವಾಗಿದ್ದವು. ಎರಡು ತಂಡಗಳ ನಾಯಕರು ಟಾಸ್‌ನಲ್ಲಿಯೂ ಭಾಗಿಯಾಗಿದ್ದರು, ಭಾರತ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಕೂಡ ಆಯ್ಕೆ ಮಾಡಿಕೊಂಡಿತ್ತು. ಆದರೆ ಟಾಸ್‌ನ ನಂತರ ಮಳಡೆ ಆರಂಭವಾದ ಕಾರಣ ನಂತರ ಪಂದ್ಯ ನಡೆಯಲು ಅವಕಾಶ ದೊರೆಯಲೇ ಇಲ್ಲ.

ಭಾರತ ಈ ವಿಶ್ವಕಪ್ ಟೂರ್ಇಗೆ ಭರ್ಜರಿ ಸಿದ್ಧತೆಯೊಂದಿಗೆ ಬಂದಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಎನಿಸಿಕೊಂಡಿರುವ ಭಾರತ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಗೆದ್ದು ಬೀಗಿತ್ತು. ಅಲ್ಲದೆ ಈ ಸಂದರ್ಭದಲ್ಲಿ ಭಾರತ ತಂಡ ಏಕದಿನ ಮಾದರಿಯಲ್ಲಿ ನಂಬರ್1 ಸ್ಥಾನವನ್ನು ಕೂಡ ಅಲಂಕರಿಸಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್ ಟೂರ್ನಿಗೆ ಅತ್ಯಂತ ಆತ್ಮವಿಶ್ವಾಸದಿಂದ ಭಾರತ ತಂಡ ಸಜ್ಜಾಗಿದೆ.
ಮತ್ತೊಂದೆಡೆ ಆಸ್ಟ್ರೇಲಿಯಾ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡಿದೆ. ಆದರೆ ಬಳಿಕ ಮಳೆ ಪಂದ್ಯ ನಡೆಯಲು ಅವಕಾಶ ನಿಡಿರುವ ಕಾರಣ 23 ಓವರ್‌ಗಳಿಗೆ ಸೀಮಿತಗೋಲಿಸಿ ಪಂದ್ಯವನ್ನು ಆರಂಭಿಸಲಾಗಿದೆ. ಆಸ್ಟ್ರೇಲಿತಾ ತಂಡ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ .
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್