For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ ಅಭ್ಯಾಸ ಪಂದ್ಯ: ಭಾರತ vs ಇಂಗ್ಲೆಂಡ್ ಮುಖಾಮುಖಿ; ಟಾಸ್ ವರದಿ, Live ಸ್ಕೋರ್

ಇಂದು ಗುವಾಹಟಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ವಿಶ್ವಕಪ್‌ಗೂ ಮುನ್ನ ಆಡುವ ಎರಡು ಅಭ್ಯಾಸ ಪಂದ್ಯಗಳ ಪೈಕಿ ಇದು ಮೊದಲನೆಯದಾಗಿದ್ದು ಈ ಪಂದ್ಯಲ್ಲೆ ಆರಂಭದಲ್ಲಿ ಮಳೆ ಅಡ್ಡಿಪಡಿಸಿದೆ. ಟಾಸ್ ಗೆದ್ದಿರುವ ಭಾರತ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತು. ಹೀಗಾಗಿ ಇಂಗ್ಲೆಂಡ್ ಬೌಲಿಂಗ್‌ನ ಸವಾಲು ಸ್ವೀಕರಿಸಿದೆ.

ಭಾರತ ಈ ವಿಶ್ವಕಪ್ ಟೂರ್ಇಗೆ ಭರ್ಜರಿ ಸಿದ್ಧತೆಯೊಂದಿಗೆ ಬಂದಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಎನಿಸಿಕೊಂಡಿರುವ ಭಾರತ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಗೆದ್ದು ಬೀಗಿತ್ತು. ಅಲ್ಲದೆ ಈ ಸಂದರ್ಭದಲ್ಲಿ ಭಾರತ ತಂಡ ಏಕದಿನ ಮಾದರಿಯಲ್ಲಿ ನಂಬರ್1 ಸ್ಥಾನವನ್ನು ಕೂಡ ಅಲಂಕರಿಸಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್ ಟೂರ್ನಿಗೆ ಅತ್ಯಂತ ಆತ್ಮವಿಶ್ವಾಸದಿಂದ ಭಾರತ ತಂಡ ಸಜ್ಜಾಗಿದೆ.

World Cup Warm-up Match: India vs England Toss report and Live score

ಗುವಾಹಟಿಯ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಪೂರಕವಾದ ಪಿಚ್ ಆಗಿದೆ. ಕಳೆದ ಐಪಿಎಲ್‌ನಲ್ಲಿ ಈ ಮೈದಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎರಡು ಆತಿಥೇಯ ಪಂದ್ಯಗಳನ್ನು ಇಲ್ಲಿ ಆಯೋಜನೆ ಮಾಡಲಾಗಿತ್ತು. ಎರಡು ಸಂದರ್ಭದಲ್ಲಿಯೂ ಪಿಚ್ ಬ್ಯಾಟರ್‌ಗಳ ಪಾಲಿಗೆ ಸ್ವರ್ಗವಾಗಿ ಪರಿಣಮಿಸಿತ್ತು. ಹಾಗಾಗಿ ಇಂದಿನ ಪಂದ್ಯದಲ್ಲಿಯೂ ಬ್ಯಾಟರ್‌ಗಳಿಗೆ ಸ್ವಗವೆನಿಸುವ ಸಾಧ್ಯತೆಯಿದೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ .

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್

Story first published: Saturday, September 30, 2023, 14:36 [IST]
Other articles published on Sep 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+