ವಿಶ್ವಕಪ್ 2023: ನೆದರ್ಲೆಂಡ್ಸ್ ವಿರುದ್ಧ ಅಭ್ಯಾಸ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜು
ವಿಶ್ವಕಪ್‌ಗೆ ಮುನ್ನ ಐಸಿಸಿ ಪ್ರತಿ ತಂಡಗಳಿಗೂ ತಲಾ ಎರಡು ಅಭ್ಯಾಸ ಪಂದ್ಯಗಳನ್ನು ಆಯೋಜನೆ ಮಾಡಿತ್ತು. ಆದರೆ ಟೀಮ್ ಇಂಡಿಯಾದ ಮೊದಲ ಅಭ್ಯಾಸ ಪಂದ್ಯ ಮಳೆಗೆ ಆಹುತಿಯಾಗಿದೆ. ಇದೀಗ ಭಾರತ ತಂಡ ಎರಡನೇ ಅಭ್ಯಾಸ ಪಂದ್ಯವನ್ನಾಡಲು ಸಜ್ಜಾಗಿದ್ದು ನೆದರ್ಲೆಂಡ್ಸ್ ತಂಡದ ವಿರುದ್ಧ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಇಂಗ್ಲೆಂಡ್ ತಂಡದ ಇರುದ್ಧ ಆಯೋಜನೆಯಾಗಬೇಕಿದ್ದ ಮೊದಲ ಅಭ್ಯಾಸ ಪಂದ್ಯ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಹೀಗಾಗಿ ವಿಶ್ವಕಪ್ ಮೆಗಾ ಟೂರ್ನಿಗೂ ಮುನ್ನ ಭಾರತದ ಆಟಗಾರರಿಗೆ ದೊರೆಯುವ ಕಟ್ಟಕಡೆಯ ಅಭ್ಯಾಸ ಪಂದ್ಯ ಇದಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಕೆಲ ಆಟಗಾರರಿಗೆ ಮೈದಾನದಲ್ಲಿ ಹೆಚ್ಚಿನ ಅವಕಾಶ ದೊರೆಯುವಂತೆ ಮಾಡುವುದು ಮ್ಯಾನೇಜ್‌ಮೆಂಟ್‌ನ ಲೆಕ್ಕಾಚಾರವಾಗಿದೆ.

ವಿಶ್ವಕಪ್ ಟೂರ್ನಿಗೂ ಮುನ್ನ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕೂಡ ಅದ್ಭುತವಾದ ಲಯದಲ್ಲಿರುವುದು ಸ್ಪಷ್ಟವಾಗಿದೆ. ಬ್ಯಾಟಿಂಗ್ ವಿಭಾಗದ ಎಲ್ಲಾ ಆಟಗಾರರು ಕೂಡ ಭರ್ಜರಿ ಫಾರ್ಮ್‌ನಲ್ಲಿದ್ದು ಮಧ್ಯಮ ಕ್ರಮಾಂಕದ ಆಟಗಾರರನ್ನು ಅಂತಿಮಗೊಳಿಸುವುದು ತಂಡಕ್ಕೆ ಸಕಾರಾತ್ಮಕ ತಲೆನೋವಾಗಿ ಪರಿಣಮಿಸಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿಯೂ ಭಾರತ ತಂಡ ಭರ್ಜರಿ ಲಯದಲ್ಲಿದೆ. ಹೀಗಾಗಿ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯಕ್ಕೂ ಮುನ್ನ ಸಂಯೋಜನೆಯನ್ನು ಅಂತಿಮಗೊಳಿಸುವ ಸವಾಲು ಭಾರತ ತಂಡಕ್ಕಿದೆ.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇನ್ನು ಭಾರತ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಅಭ್ಯಾಸ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಪಿಚ್ ರಿಪೋರ್ಟ್:
ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣವು ಅದರ ಪಿಚ್‌ಗೆ ಹೆಸರುವಾಸಿಯಾಗಿದೆ, ಅದು ಬೌಲರ್‌ಗಳಿಗೆ, ವಿಶೇಷವಾಗಿ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿದೆ, ಅವರು ಆಟದ ಎರಡನೇ ಇನ್ನಿಂಗ್ಸ್‌ನಲ್ಲಿ ಮಿಂಚುತ್ತಾರೆ. ಅದೇನೇ ಇದ್ದರೂ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಸಾಕಷ್ಟು ಸಮಯವನ್ನು ಕಳೆದರೆ ಇಲ್ಲಿ ಗಮನಾರ್ಹ ರನ್‌ಗಳನ್ನು ಸಂಗ್ರಹಿಸಬಹುದು. ಇಲ್ಲಿಯವರೆಗೆ, ಈ ಸ್ಥಳದಲ್ಲಿ ಕೇವಲ ಎರಡು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ.
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ನೆದರ್ಲ್ಯಾಂಡ್ಸ್ ತಂಡ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ವೆಸ್ಲಿ ಬ್ಯಾರೆಸಿ, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್(ನಾಯಕ/ವಿಕೆಟ್ ಕೀಪರ್), ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಆರ್ಯನ್ ದತ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ರಯಾನ್ ಕ್ಲೈನ್, ಸಾಕಿಬ್ ಜುಲ್ಫಿಕರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications