ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಾಂಗ್ಲಾದೇಶ
ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಇಂದಿನಿಂದ ಅಭ್ಯಾಸ ಪಂದ್ಯಗಳು ಆರಂಭವಾಗಿದೆ. ಏಷ್ಯಾದ ಎರಡು ತಂಡಗಳಾದ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ಇದರಲ್ಲಿ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ ಭರ್ಜರಿ ಗೆಲುವು ಸಾಧಿಸಿದೆ. ಇತ್ತೀಚೆಗಷ್ಟೇ ಏಷ್ಯಾಕಪ್‌ನಲ್ಲಿ ಶ್ರೀಲಂಕಾ ಫೈನಲ್‌ಗೆ ಪ್ರವೇಶಿಸಿದ್ದರೆ ಬಾಂಗ್ಲಾದೇಶ ತಂಡ ಸೂಪರ್ 4 ಹಂತದಿಂದ ನಿರ್ಗಮಿಸಿತ್ತು.
ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿತು. ಆರಂಭಿಕ ಆಟಗಾರ ಫಾತುಮ್ ನಿಸಾಂಕ ಹಾಗೂ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಧನಂಜಯ ಡಿಸಿಲ್ವ ಅರ್ಧ ಶತಕ ಸಿಡಿಸಿದ ಕಾರಣ ಶ್ರೀಲಂಕಾ ಈ ಪಂದ್ಯದಲ್ಲಿ 263 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಲು ಸಾಧ್ಯವಾಯಿತು. ಫಾತುಮ್ ನಿಸಾಂಕ 64 ಎಸೆತಗಳಲ್ಲಿ 68 ರನ್‌ಗಳನ್ನು ಗಳಿಸಿದರೆ ಡಿಸಿಲ್ವ 55 ರನ್‌ಗಳ ಕೊಡುಗೆ ನೀಡಿದರು.

ಈ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡಕ್ಕೆ ಅದ್ಭುತ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ ಬಾಂಗ್ಲಾದೇಶ ಭರ್ಜರಿ 131 ರನ್‌ಗಳ ಜೊತೆಯಾಟ ನೀಡುವ ಮೂಲಕ ಮಿಂಚಿನ ಪ್ರದರ್ಶನ ನೀಡಿದೆ. ತನ್ಜಿದ್ ಹಸನ್ 84 ರನ್‌ಗಳನ್ನು ಗಳಿಸಿದರೆ ಲಿಟನ್ ದಾಸ್ 61 ರನ್‌ಗಳ ಕೊಡುಗೆ ನೀಡಿದರು. ನಂತರ ಮೆಹದಿ ಹಸನ್ ಮಿರಾಜ್ ಕೂಡ 67 ರನ್‌ಗಳನ್ನು ಗಳಿಸಿ ಮಿಂಚಿದರು. ಮುಸ್ತಫುಜುರ್ ರಹೀಮ್ 35ರ ನ್‌ಗಳ ಕೊಡುಗೆ ನೀಡಿದರು. ಈ ಮೂಲಕ ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಇನ್ನೂ 8 ಓವರ್‌ಗಳು ಬಾಕಿಯಿರುವಂತೆಯೇ ಭರ್ಜರಿ 7 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.
ಬಾಂಗ್ಲಾದೇಶ ಸ್ಕ್ವಾಡ್: ತಂಜಿದ್ ಹಸನ್, ಲಿಟ್ಟನ್ ದಾಸ್, ಮೆಹಿದಿ ಹಸನ್ ಮಿರಾಜ್ (ನಾಯಕ), ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಮಹೇದಿ ಹಸನ್, ನಸುಮ್ ಅಹ್ಮದ್ , ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ನಜ್ಮುಲ್ ಹೊಸೈನ್ ಶಾಂಟೋ, ಶಕಿಬ್ ಅಲ್ ಹಸನ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ
ಶ್ರೀಲಂಕಾ ಆಡುವ ಬಳಗ: ಕುಸಾಲ್ ಪೆರೆರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದಿಮುತ್ ಕರುಣಾರತ್ನೆ, ದುಶನ್ ಹೇಮಂತ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ಲಹಿರು ಕುಮಾರ, ಮಹೇಶ್ ತೀಕ್ಷಣ, ಮತೀಶ ಪತಿರಣ, ದಿಲ್ಶನ್ ಮಧುಶಂಕ, ಪಾತುಂ ನಿಸ್ಸಾಂಕ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications