Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್ ಅಭ್ಯಾಸ ಪಂದ್ಯ: ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದ ಬಾಂಗ್ಲಾದೇಶ

ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ತಂಡಗಳು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿತ್ತು. ಮಳೆ ಅಡ್ಡಿಯುಂಟು ಮಾಡಿದ ಈ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಆರಂಭಿಕ ಆಘಾತವನ್ನು ಅನುಭವಿಸಿತು. ಆದರೆ ತನ್ಸಿದ್ ಹಸನ್ ಹಾಗೂ ಮೆಹದಿ ಹಸನ್ ಮಿರಾಜ್ ಅದ್ಭುತ ಜೊತೆಯಾಟ ನೀಡುವ ಮೂಲಕ ಗಮನಸೆಳೆದಿದ್ದಾರೆ. ಆದರೆ ಈ ಜೋಡಿ ಹೊರತುಪಡಿಸಿ ಯಾವ ಆಟಗಾರನಿಂದಲೂ ಪ್ರತಿರೋಧವೊಡ್ಡ ಸಾಧ್ಯವಾಗಲೇ ಇಲ್ಲ. ಮಳೆಯಿಂದಾಗಿ 37 ಓವರ್‌ಗಳಿಗೆ ಕಡಿತವಾದ ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 188 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಯಿತು.

World cup warmup Match: England beat New Zealand by 4 wickets in DL method

ತನ್ಸಿದ್ ಹುಸೇನ್ ಈ ಪಂದ್ಯದಲ್ಲಿ 45 ರನ್‌ಗಳನ್ನು ಗಳಿಸಿದರೆ ಮೆಹದಿ ಹಸನ್ ಮಿರಾಜ್ 74 ರನ್‌ಗಳ ಕೊಡುಗೆ ನೀಡಿದ್ದಾರೆ. ಉಳಿದಂತೆ ಮೊಹಮದುಕ್ಕಾ ಅವರ 18 ರನ್ ತಂಡದ ಅತಿ ಹೆಚ್ಚಿನ ಸ್ಕೋರ್ ಆಗಿದೆ. ಇನ್ನು ಇಂಗ್ಲೆಂಡ್ ಪರವಾಗಿ ಬೌಲಿಂಗ್‌ನಲ್ಲಿ ಟೀಪ್ಲಿ ಮೂರು ವಿಕೆಟ್ ಕಬಳಿಸಿ ಗಮನಸೆಳೆದರೆ ವಿಲ್ಲಿ ಹಾಗೂ ಆದಿಲ್ ರಶೀದ್ ತಲಾ ಎರಡು ವಿಎಕಟ್ ಪಡೆದರು.

ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ಡೇವಿಡ್ ಮಲನ್ ವಿಕೆಟನ್ನು ಆರಂಭದಲ್ಲಿಯೇ ಕಳೆದುಕೊಂಡಿತು. ಆದರೆ ಜಾನಿ ಬಯರ್‌ಸ್ಟೋವ್ ಹಾಗೂ ರೂಟ್ ಉತ್ತಮ ಜೊತೆಯಾಟ ನೀಡಿದರು. ಆದರೆ ರೂಟ್ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿದ್ದು 40 ಎಸೆಗಳಲ್ಲಿ 26 ರನ್‌ಗಳನ್ನು ಗಳಿಸಿದರು. ಇನ್ನು ನಾಯಕ ಜೋಸ್ ಬಟ್ಲರ್ 15 ಎಸೆಗಳಲ್ಲಿ 30 ರನ್ ಬಾರಿಸಿದರೆ ಮೊಯೀನ್ ಅಲಿ 29 ಎಸೆತಗಳಲ್ಲಿ 56 ರನ್ ಬಾರಿಸಿ ಅಬ್ಬರಿಸಿದರು.

ಹೀಗಾಗಿ ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿ 24.1 ಓವರ್‌ಗಳಲ್ಲಿ ಗುರಿ ತಲುಪಲು ಯಶಸ್ವಿಯಾಗುತ್ತು. 6 ವಿಎಕಟ್ ಕಳೆದುಕೊಂಡ ಇಂಗ್ಲೆಂಡ್ ತಂಡ 197 ರನ್‌ಗಳನ್ನು ಗಳಿಸಿದ್ದು 4 ವಿಕೆಟ್‌ಗಳ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿತು. ಈ ಮೂಲಕ ಇಂಗ್ಲೆಂಡ್ ತಂಡ ಭರ್ಜರಿ ಅಭ್ಯಾಸ ನಡೆಸಿದಂತಾಗಿದೆ.

ಇಂಗ್ಲಂಡ್ ಆಡುವ ಬಳಗ: ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ರೀಸ್ ಟಾಪ್ಲಿ, ಮಾರ್ಕ್ ವುಡ್, ಗಸ್ ಅಟ್ಕಿನ್ಸನ್, ಕ್ರಿಸ್ ವೋಕ್ಸ್

ಬಾಂಗ್ಲಾದೇಶ: ತಂಝಿದ್ ಹಸನ್, ಲಿಟ್ಟನ್ ದಾಸ್, ಮೆಹಿದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ಮಹೆದಿ ಹಸನ್, ನಸುಮ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್

Story first published: Monday, October 2, 2023, 23:27 [IST]
Other articles published on Oct 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+