Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವ ದಾಖಲೆ: 250 ODI ವಿಕೆಟ್ ಪಡೆದ ಮೊದಲ ಬೌಲರ್ ಜೂಲನ್ ಗೋಸ್ವಾಮಿ

Jhulan goswami

ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಹಿರಿಯ ಬೌಲರ್ ಜೂಲನ್ ಗೋಸ್ವಾಮಿ ಮತ್ತೊಂದು ದಾಖಲೆ ಮಾಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ, ಓಪನರ್ ಟಮ್ಮಿ ಬ್ಯೂಮಾಂಟ್‌ರನ್ನ ಎಲ್‌ಬಿಡಬ್ಲ್ಯೂ ಬಲೆಗೆ ಕೆಡವುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 250ನೇ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡೆದ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಜೂಲನ್ ಪಾತ್ರರಾಗಿದ್ದು, ಭಾರತದ ಪರವಾಗಿ ವಿಶ್ವಕಪ್‌ ಟೂರ್ನಿಯಲ್ಲಿ ಪುರುಷರ ಕ್ರಿಕೆಟ್‌ ಅಥವಾ ಮಹಿಳಾ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದವರ ಪಟ್ಟಿಯಲ್ಲಿ ಜೂಲನ್ ಸ್ಥಾನ ಪಡೆದಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದವರಲ್ಲಿ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಅಜಿತ್ ಅಗರ್ಕರ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಕಪಿಲ್‌ ದೇವ್‌ ಜೊತೆಗೆ ಜೂಲನ್ ಗೋಸ್ವಾಮಿ ಕೂಡ ಸೇರಿದ್ದಾರೆ.

ಇತ್ತೀಚೆಗಷ್ಟೇ ಜೂಲನ್ ಗೋಸ್ವಾಮಿ ಐಸಿಸಿ ಮಹಿಳಾ ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎಂಬ ಸಾಧನೆ ಮಾಡಿದ್ದಾರೆ. ಕಳೆದ ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾದ ಲಿನ್ ಫುಲ್‌ಸ್ಟನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನ ಮುರಿದಿದ್ದರು.

ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ 1982ರಿಂದ 1988ರ ಅವಧಿಯಲ್ಲಿ ಆಸ್ಟ್ರೇಲಿಯಾದ ಲಿನ್ ಫುಲ್‌ಸ್ಟನ್ 39 ವಿಕೆಟ್ ಪಡೆದು ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಈವರೆಗೂ ಯಾರಿಂದಲೂ ಮುರಿಯಲು ಸಾಧ್ಯವಾಗಿರಲಿಲ್ಲ. ಆದ್ರೆ ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾದರು. ಪ್ರಸ್ತುತ ಜೂಲನ್ ಗೋಸ್ವಾಮಿ ಮಹಿಳಾ ವಿಶ್ವಕಪ್‌ನಲ್ಲಿ 41 ವಿಕೆಟ್ ಪಡೆದಿದ್ದಾರೆ.

Story first published: Wednesday, March 16, 2022, 11:50 [IST]
Other articles published on Mar 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+