ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌: ಓವಲ್‌ನಲ್ಲಿ ನಡೆಯಲಿದೆ ಫೈನಲ್ ಪಂದ್ಯ

World Test Championship 2023: final match will be played in Oval

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ 2021-23ರ ಆವೃತ್ತಿಯ ಫೈನಲ್ ಪಂದ್ಯದ ಬಗ್ಗೆ ಐಸಿಸಿ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ. 2023ರಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಲಂಡನ್‌ನ ಓವಲ್ ಕ್ರೀಡಾಂಗಣ ತಾಣವಾಗಿರಲಿದೆ ಎಂದು ಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದ್ದು 2025ರ ಆವೃತ್ತಿಯ ಫೈನಲ್ ಪಂದ್ಯ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ ಎಂದಿದ್ದಾರೆ.

ಐಸಿಸಿ 2023 ಮತ್ತು 2025 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಗಳಿಗೆ ದಿನಾಂಕಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಸೂಕ್ತ ಸಂದರ್ಭದಲ್ಲಿ ತಿಳಿಸಲಾಗುತ್ತದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಕಳೆದ ಜುಲೈನಲ್ಲಿ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಂದಿನ ಎರಡು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗಳಿಗೂ ಇಂಗ್ಲೆಂಡ್ ಆತಿಥ್ಯ ವಹಿಸಿಕೊಳ್ಳಲಿದೆ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

Ind Vs Aus T20: ಕ್ಯಾಮರೂನ್ ಗ್ರೀನ್ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ವೈರಲ್Ind Vs Aus T20: ಕ್ಯಾಮರೂನ್ ಗ್ರೀನ್ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ವೈರಲ್

ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಆವೃತ್ತಿಯ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ 84 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸಿಸ್ ಪಡೆ ತಂಡ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 1 ಸೋಲು ಮತ್ತು ಮೂರು ಡ್ರಾ ಸಾಧಿಸಿದೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ 72 ಅಂಕಗಳನ್ನು ಹೊಂದಿದ್ದು 6 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ 4 ಪಂದ್ಯಗಳಲ್ಲಿ ಸೋತಿದೆ.

2021ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಆವೃತ್ತಿಯ ಫೈನಲ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತದ ವಿರುದ್ಧ ಅದ್ಭುತ ಮೇಲುಗೈ ಸಾಧಿಸಿದ ನ್ಯೂಜಿಲೆಂಡ್ ತಂಡ ಚೊಚ್ಚಲ ಆವೃತ್ತಿಯ ಚಾಂಪಿಯನ್ ತಂಡ ಎನಿಸಿಕೊಂಡಿದೆ.

ಮುಂದಿನ ವರ್ಷ ನಡೆಯಲಿದೆ ಮಹಾ ಹೋರಾಟ: ಸದ್ಯ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಮುಂದಿನ ವರ್ಷದ ಆರಂಭದಲ್ಲಿ ಆಸಿಸ್ ಪಡೆ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಈ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ದೃಷ್ಟಿಯಿಂದ ಮಹತ್ವವನ್ನು ಪಡೆದುಕೊಳ್ಳಲಿದ್ದು ಭಾರತದ ಅಗ್ರ ಎರಡರಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡೆಸಲಿದೆ.

Ind vs Aus: 48 ಎಸೆತ 101 ರನ್, ಭುವಿ ಮತ್ತು ಹರ್ಷಲ್ ಪಟೇಲ್‌ಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ!Ind vs Aus: 48 ಎಸೆತ 101 ರನ್, ಭುವಿ ಮತ್ತು ಹರ್ಷಲ್ ಪಟೇಲ್‌ಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ!

ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ಸ್ಥಿತಿ ಹೀನಾಯ: ಇನ್ನು ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಚಾಂಪಿಯನ್ ತಂಡ ನ್ಯೂಜಿಲೆಂಡ್ ಈ ಬಾರಿಯ ಆವೃತ್ತಿಯ ಅಂಕಪಟ್ಟಿಯಲ್ಲಿ ಕಳಪೆ ಸಾಧನೆ ಮಾಡಿದೆ. ಅಂಕಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನದಲ್ಲಿದೆ ಹಾಲಿ ಚಾಂಪಿಯನ್ ನ್ಯೂಜಿಲೆಂಡ್. ಬಾಂಗ್ಲಾದೇಶ ಅಂತಿಮ ಸ್ಥಾನದಲ್ಲಿದೆ.

Story first published: Thursday, September 22, 2022, 10:26 [IST]
Other articles published on Sep 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X