ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಭಾರತ ಗೆದ್ದು ಬೀಗಿದ್ದ ಟೆಸ್ಟ್ ಸರಣಿಯೇ ಅತ್ಯುತ್ತಮ ಎಂದು ಘೋಷಿಸಿದ ಐಸಿಸಿ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಆಸ್ಟ್ರೇಲಿಯಾದಲ್ಲಿ ನಡೆದ 4 ಟೆಸ್ಟ್ ಪಂದ್ಯಗಳ ಬಾರ್ಡರ್ - ಗವಾಸ್ಕರ್ ಟ್ರೋಫಿ 2020/21ರಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವನ್ನು ಸಾಧಿಸಿತು.

WTC Final: ನ್ಯೂಜಿಲೆಂಡ್‌ಗೆ ಲಾಭ, ಭಾರತಕ್ಕೆ ನಷ್ಟ; ಯುವರಾಜ್ ಸಿಂಗ್ ಅಸಮಾಧಾನ

ಅಡಿಲೇಡ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲನ್ನು ಕಂಡ ಭಾರತ ನಂತರದ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಕಾಂಗರೂಗಳಿಗೆ ಗೆಲುವಿನ ಅವಕಾಶವನ್ನು ನೀಡದೇ ಆಸ್ಟ್ರೇಲಿಯಾ ನೆಲದಲ್ಲಿ ಸರಣಿ ಗೆಲುವನ್ನು ಸಾಧಿಸಿತು. ಮೊದಲನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ 36 ರನ್‌ಗಳಿಗೆ ಆಲ್ಔಟ್ ಆಗುವ ಮೂಲಕ ತನ್ನ ಕ್ರಿಕೆಟ್ ಇತಿಹಾಸದಲ್ಲಿಯೇ ಕೆಟ್ಟ ಸೋಲನ್ನು ಕಂಡಿತು.

ಈ ಬಾರಿಯ ಐಪಿಎಲ್‌ನಲ್ಲಿ ಆಡುವ ಅವಕಾಶ ಸಿಗದೇ ಮೂಲೆಗುಂಪಾದ 9 ಭಾರತೀಯ ಕ್ರಿಕೆಟಿಗರು!

ಮೊದಲನೇ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ವಾಪಸ್ಸಾದರು. ನಂತರದ ಮೂರು ಪಂದ್ಯಗಳಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ 8 ವಿಕೆಟ್‍ಗಳ ಅಮೋಘ ಜಯವನ್ನು ಸಾಧಿಸಿತು. ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲುವ ಭೀತಿಯಲ್ಲಿದ್ದಾಗ ರಿಷಭ್ ಪಂತ್ ನೀಡಿದ ಅದ್ಭುತ ಪ್ರದರ್ಶನದಿಂದ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಹಾಗೂ ಕೊನೆಯ ಪಂದ್ಯದಲ್ಲಿ ಭಾರತ 3 ವಿಕೆಟ್‍ಗಳ ಜಯ ಸಾಧಿಸುವುದರ ಮೂಲಕ ಗಬ್ಬಾದಲ್ಲಿ ಆಸ್ಟ್ರೇಲಿಯಾವನ್ನು ಸದೆಬಡಿದಿತ್ತು.

ಆರ್‌ಸಿಬಿ ಸರಿಯಾಗಿ ಬಳಸಿಕೊಳ್ಳದೇ ತಂಡದಿಂದ ಕೈಬಿಟ್ಟ ಸ್ಟಾರ್ ಕ್ರಿಕೆಟಿಗರಿವರು!

ಹೀಗೆ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ 4 ಟೆಸ್ಟ್ ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದು ಬೀಗಿತು. ಇದೀಗ ಐಸಿಸಿ ಈ ಸರಣಿಯನ್ನು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಪಂದ್ಯಾವಳಿಯ ಅತ್ಯುತ್ತಮ ಸರಣಿ ಎಂದು ಘೋಷಿಸಿದೆ. ಹೌದು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ನಡೆದ ಎಲ್ಲಾ ಟೆಸ್ಟ್ ಸರಣಿಗಳಿಗಿಂತ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಬಾರ್ಡರ್ - ಗವಾಸ್ಕರ್ ಟ್ರೋಫಿ ಸರಣಿಯ ಅತ್ಯುತ್ತಮ ಎಂದು ಐಸಿಸಿ ಪ್ರಕಟಿಸಿದೆ.

ಆಸ್ಟ್ರೇಲಿಯಾವನ್ನು ಕಾಡಿದ್ದ ಪಂತ್

ಆಸ್ಟ್ರೇಲಿಯಾವನ್ನು ಕಾಡಿದ್ದ ಪಂತ್

ಆ ಸರಣಿಯ ಮೂರನೇ ಪಂದ್ಯದಲ್ಲಿ ಗೆಲುವಿನ ಸನಿಹಕ್ಕೆ ಬಂದಿದ್ದ ಆಸ್ಟ್ರೇಲಿಯಾ ಕನಸಿಗೆ ರಿಷಭ್ ಪಂತ್ ತಣ್ಣೀರನ್ನು ಎರಚಿದ್ದರು. ಅದರಲ್ಲಿಯೂ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಪಂತ್ ಬಾರಿಸಿದ 97(118) ರನ್ ಭಾರತ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು. ಹಾಗೂ ಕೊನೆಯ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಪಂತ್ ಅಜೇಯ 89 ರನ್ ಬಾರಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದರು ಮತ್ತು ಆ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆಸ್ಟ್ರೇಲಿಯಾ ನೆಲದಲ್ಲೇ ಆಸ್ಟ್ರೇಲಿಯಾವನ್ನು ಸೋಲಿಸಿದ ಕೀರ್ತಿ ರಹಾನೆಗಿದೆ

ಆಸ್ಟ್ರೇಲಿಯಾ ನೆಲದಲ್ಲೇ ಆಸ್ಟ್ರೇಲಿಯಾವನ್ನು ಸೋಲಿಸಿದ ಕೀರ್ತಿ ರಹಾನೆಗಿದೆ

ಮೊದಲ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಭಾರತಕ್ಕೆ ತೆರಳಿದ ನಂತರ ಉಳಿದ 3 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ಅಜಿಂಕ್ಯ ರಹಾನೆ. ರಹಾನೆ ನಾಯಕತ್ವವನ್ನು ವಹಿಸಿಕೊಂಡಾಗ ಅನುಮಾನಿಸಿದವರೇ ಹೆಚ್ಚು, ಆದರೆ ರಹಾನೆಯ ಜಾಣ್ಮೆಯ ನಾಯಕತ್ವದಿಂದ ಟೀಮ್ ಇಂಡಿಯಾ 2-1 ಅಂತರದಿಂದ ಆಸ್ಟ್ರೇಲಿಯಾ ನೆಲದಲ್ಲಿಯೇ ವಿಜಯ ಪತಾಕೆಯನ್ನು ಹಾರಿಸಿತು.

ಪದಾರ್ಪಣೆ ಮಾಡಿ ಅಬ್ಬರಿಸಿದ ಮೊಹಮ್ಮದ್ ಸಿರಾಜ್

ಪದಾರ್ಪಣೆ ಮಾಡಿ ಅಬ್ಬರಿಸಿದ ಮೊಹಮ್ಮದ್ ಸಿರಾಜ್

ಈ ಸರಣಿ ಮೊಹಮ್ಮದ್ ಸಿರಾಜ್ ಕ್ರಿಕೆಟ್ ಜೀವನವನ್ನು ಬದಲಾಯಿಸಿತು ಎಂದರೆ ತಪ್ಪಾಗಲಾರದು. ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಮೊಹಮ್ಮದ್ ಸಿರಾಜ್ ಆ ಸರಣಿಯಲ್ಲಿ 13 ವಿಕೆಟ್ ಪಡೆದು ಮಿಂಚಿದರು. ಅದರಲ್ಲಿಯೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್‍ಗಳ ಗೊಂಚಲನ್ನು ಪಡೆದು ಮೊಹಮ್ಮದ್ ಸಿರಾಜ್ ಅದ್ಭುತ ಪ್ರದರ್ಶನವನ್ನು ನೀಡಿ ಟೀಮ್ ಇಂಡಿಯಾಕ್ಕೆ ಭರವಸೆಯ ಬೌಲರ್ ಆದರು.

ಗಬ್ಬಾಗೆ ಬಾ ಎಂದು ಆಹ್ವಾನ ನೀಡಿ ಮುಖಭಂಗ ಅನುಭವಿಸಿದ್ದ ಟಿಮ್ ಪೇನ್

ಗಬ್ಬಾಗೆ ಬಾ ಎಂದು ಆಹ್ವಾನ ನೀಡಿ ಮುಖಭಂಗ ಅನುಭವಿಸಿದ್ದ ಟಿಮ್ ಪೇನ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಗಬ್ಬಾದಲ್ಲಿ ನಡೆಯಿತು. ಈ ಪಂದ್ಯಕ್ಕೂ ಮುನ್ನ ಅಶ್ವಿನ್ ಬ್ಯಾಟ್ ಮಾಡುವ ವೇಳೆ ಕೀಪಿಂಗ್ ಮಾಡುತ್ತಿದ್ದ ಟಿಮ್ ಪೇನ್ ಗಬ್ಬಾಗೆ ಬಂದು ಗೆಲ್ಲಿ ಎಂದು ಅಶ್ವಿನ್‌ಗೆ ವ್ಯಂಗ್ಯವಾಗಿ ಆಹ್ವಾನ ನೀಡಿದ್ದರು. ಆದರೆ ಗಬ್ಬಾದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ಶರಣಾಯಿತು, ಈ ಮೂಲಕ ಟಿಮ್ ಪೇನ್ ಸುಮ್ಮನೆ ಇರಲಾರದೆ ಆಹ್ವಾನ ನೀಡಿ ಮುಖಭಂಗ ಅನುಭವಿಸಿದ್ದರು.

For Quick Alerts
ALLOW NOTIFICATIONS
For Daily Alerts
Story first published: Tuesday, June 8, 2021, 15:40 [IST]
Other articles published on Jun 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X