ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಟೀಮ್ ಇಂಡಿಯಾದ ಕೆಲ ಆಟಗಾರರು ಈಗಾಗಲೇ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದು ಅಭ್ಯಾಸವನ್ನು ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಕಿಟ್ ಪ್ರಾಯೋಜನಕತ್ವದ ಜವಾಬ್ಧಾರಿ ವಹಿಸಿಕೊಂಡಿರುವ ಅಡಿಡಾಸ್ ಸಂಸ್ಥೆ ನೂತನ ಜರ್ಸಿ ಕಿಟ್‌ಅನ್ನು ತಂಡಕ್ಕೆ ನೀಡಿದೆ. ಟೀಮ್ ಇಂಡಿಯಾದ ಆಟಗಾರರು, ಕೋಚ್ ದ್ರಾವಿಡ್ ಹಾಗೂ ಸಹಾಯಕ ಸಿಬ್ಬಂದಿಗಳು ಈ ನೂತನ ಕಿಟ್ ಅನ್ನು ಅನಾವರಣಗೊಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಅಡಿಡಾಸ್ ಕಿಟ್ ಪ್ರಾಯೋಕತ್ವಕ್ಕೆ ಒಪ್ಪಂದ ಮಾಡಿಕೊಂಡಿರುವುದನ್ನು ಘೋಷಿಸಿದ್ದರು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ವಿಚಾರವನ್ನು ಖಚಿತಪಡಿಸಿದ್ದರು. ಇದೀಗ ವಿಶ್ವ ಟೆಸ್ ಚಾಂಪಿಯನ್‌ಶಿಪ್‌ನ ಪಂದ್ಯಕ್ಕೂ ಮುನ್ನ ಅಡಿಡಾಸ್ ಟ್ರೈನಿಂಗ್ ಕಿಟ್ ತಂಡಕ್ಕೆ ನೀಡಿದೆ.

ಜರ್ಮನಿ ಮೂಲದ ಕ್ರೀಡಾ ಉತ್ಪನ್ನಗಳ ದಿಗ್ಗಜ ಸಂಸ್ಥೆಯಾಗಿರುವ ಅಡಿಡಾಸ್ ಜೊತೆಗಿನ ಕಿಟ್ ಪ್ರಾಯೋಜಕತ್ವದ ಒಪ್ಪಂದ ಮಾರ್ಚ್ 2028 ರವರೆಗೆ ಮುಂದುವರಿಯಲಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಮುಂದಿನ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣೆಸಾಡುವಾಗ ಮೊದಲ ಬಾರಿಗೆ ಅಡಿಡಾಸ್ ಪ್ರಯೋಕತ್ವದ ಜರ್ಸಿಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.
ಅಡೀಡಸ್ ಸಂಸ್ಥೆ ಭಾರತದ ಪುರುಷರು, ಮಹಿಳೆಯರು ಮತ್ತು ಅಂಡರ್-19 ತಂಡಗಳಿಗೆ ಜೆರ್ಸಿ, ಕಿಟ್‌ಗಳು ಮತ್ತು ಇತರ ವಸ್ತುಗಳನ್ನು ವಿನ್ಯಾಸ ಮತ್ತು ತಯಾರಿಸುವ ಜವಾಬ್ಧಾರಿ ವಹಿಸಿಕೊಂಡಿದೆ ಎಂದು ಸೋಮವಾರ ಜರ್ಮನಿಯ ಕ್ರೀಡಾ ದಿಗ್ಗಜ ಸಂಸ್ಥೆಯೊಂದಿಗಿನ ಒಪ್ಪಂದವನ್ನು ಅಧಿಕರತವಾಗಿ ಘೋಷಿಸಿದ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದಾರೆ. ಆದರೆ ಒಪ್ಪಂದದ ಮೌಲ್ಯಗಳ ಬಗ್ಗೆ ಬಿಸಿಸಿಐ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್, ಇಶಾನ್ ಕಿಶನ್(ವಿಕೆಟ್ ಕೀಪರ್)
ಆಸ್ಟ್ರೇಲಿಯಾ ಸ್ಕ್ವಾಡ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮಿಚ್ ಮಾರ್ಷ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್, ಸ್ಟೀವ್ ಸ್ಮಿತ್ , ಡೇವಿಡ್ ವಾರ್ನರ್.