WPL 2023 Schedule : ಪ್ರಪ್ರಥಮ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಯ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತವಾಗಿ ಘೋಷಣೆ ಮಾಡಿದೆ. ಐದು ಪಂದ್ಯಗಳ ಈ ಟೂರ್ನಿ ಮಾರ್ಚ್ 4 ಭಾನುವಾರದಂದು ಆರಂಭಗೊಳ್ಳಲಿದ್ದು ಮಾರ್ಚ್ 26ರಂದು ಫೈನಲ್ ಪಂದ್ಯ ನಡೆಯಲಿದೆ.
ಲೀಗ್ ಹಂತದಲ್ಲಿ 20 ಪಂದ್ಯಗಳು ನಡೆಯಲಿದೆ. ಐದು ತಂಡಗಳು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿದೆ. ಬಳಿಕ ಒಂದು ಎಲಿಮಿನೇಟರ್ ಪಂದ್ಯ ನಂತರ ಫೈನಲ್ ಪಂದ್ಯ ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಎಲ್ಲಾ ಪಂದ್ಯಗಳು ನಡೆಯಲಿದ್ದು ಎರಡು ಕ್ರೀಡಾಂಗಣಗಳಲ್ಲಿ ತಲಾ 11 ಪಂದ್ಯಗಳು ಆಯೋಜನೆಯಾಗಲಿದೆ. ಲೀಗ್ ಹಂತದಲ್ಲಿ ಪ್ರತಿ ತಂಡಗಳು 8 ಪಂದ್ಯಗಳನ್ನು ಆಡಲಿದೆ. ಡಬಲ್ ಹೆಡ್ಡರ್ ದಿನ ಮೊದಲ ಪಂದ್ಯ ಮಧ್ಯಾಹ್ನ 3:30 ಹಾಗೂ ಸಂಜೆ 7:30ಕ್ಕೆ ಆರಂಭವಾಗಲಿದೆ.

ಆರ್‌ಸಿಬಿಗೆ ಮೊದಲ ಎದುರಾಳಿ ಡೆಲ್ಲಿ
ಪಂದ್ಯಾವಳಿಯ ಪ್ರಪ್ರಥಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಯುಪಿ ವಾರಿಯರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಭಾಗವಹಿಸುವ ಇತರ ಮೂರು ತಂಡಗಳಾಗಿದೆ.
ಆರ್‌ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್ 5 ಭಾನುವಾರದಂದು ಆಡಲಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಎದುರಾಳಿಯಾಗಿರಲಿದೆ. ಈ ಪಂದ್ಯ ಮಧ್ಯಾಹ್ನ 3:30ಕ್ಕೆ ನಡೆಯಲಿದ್ದು ಬ್ರೆಬೋರ್ನ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಗಮನ ಸೆಳೆದ ಚೊಚ್ಚಲ ಹರಾಜು
ಇನ್ನು ಈ ಚೊಚ್ಚಲ ಡಬ್ಲ್ಯುಪಿಎಲ್ ಟೂರ್ನಿಗೆ ಸೋಮವಾರವಷ್ಟೇ ಹರಾಜು ಪ್ರಕ್ರಿಯೆ ನಡೆಯಿತು. ಮುಂಬೈನಲ್ಲಿ ನಡೆದ ಈ ಹರಾಜಿನಲ್ಲಿ ಐದು ತಂಡಗಳು ಕೂಡ ಬಲಿಷ್ಠ ಆಟಗಾರರ ಪಡೆಯನ್ನು ಸಿದ್ದಪಡಿಸಿಕೊಂಡಿದೆ. 3.40 ಕೋಟಿ ರೂಪಾಯಿಗೆ ಸ್ಮೃತಿ ಮಂಧಾನ ಹರಾಜಾಗುವ ಮೂಲಕ ಟೂರ್ನಿಯ ಅತ್ಯಂತ ದುಬಾರಿ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದಾರೆ.

ವಿದೇಶಿ ಆಟಗಾರ್ತಿಯರಿಗೂ ಭರ್ಜರಿ ಬೇಡಿಕೆ
ಇಂಗ್ಲೆಂಡ್‌ನ ಆಶ್ಲೇ ಗಾರ್ಡ್ನರ್ ಮತ್ತು ಇಂಗ್ಲೆಂಡ್‌ನ ನ್ಯಾಟ್ ಸ್ಕಿವರ್ ಬ್ರಂಟ್ ವಿದೇಶಿ ಆಟಗಾರ್ತಿಯರ ಪೈಕಿ ದುಬಾರಿ ಮೊತ್ತಕ್ಕೆ ಹರಾಜಾದ ಆಟಗಾರ್ತಿಯರಾಗಿದ್ದಾರೆ. ಈ ಇಬ್ಬರು ಕೂಡ 3.20 ಕೋಟಿ ರೂಪಾಯಿಗೆ ಹರಾಜಾಗಿದ್ದಾರೆ. ರಿಚಾ ಘೋಷ್, ಅಲಿಸ್ಸಾ ಹೀಲಿ, ಆಶ್ ಗಾರ್ಡ್ನರ್ ಮತ್ತು ಅಮೆಲಿಯಾ ಕೆರ್ ಸೇರಿದಂತೆ ಹಲವಾರು ದೊಡ್ಡ ಆಟಗಾರರು ಉತ್ತಮ ಮೊತ್ತಕ್ಕೆ ಹರಾಜಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications