WPL 2023: ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಸೆಣೆಸಾಟ, ಟಾಸ್ ರಿಪೋರ್ಟ್, ಆಡುವ ಬಳಗ

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಏಳನೇ ಪಂದ್ಯ ನಡೆಯುತ್ತಿದ್ದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೊಂಡಿದ್ದು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಮುಂಬೈ ಇಂಡಿಯನ್ಸ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಈ ಪಂದ್ಯದಲ್ಲಿ ಡೆಲ್ಲಿ ಪಡೆ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಮಿನ್ನು ಮಣಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದು ಅರುಂಧತಿ ರೆಡ್ಡಿ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ.
ಈ ಎರಡು ತಂಡಗಳಿಗೂ ಇದು ಮೂರನೇ ಪಂದ್ಯವಾಗಿದೆ. ಆಡಿರುವ ಎರಡು ಪಂದ್ಯಗಳಲ್ಲಿಯೂ ಎರಡು ತಂಡಗಳು ಕೂಡ ಗೆಲುವು ಸಾಧಿದ್ದು ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿದೆ. ನೆಟ್ ರನ್‌ರೇಟ್ ಆಧಾರದಲ್ಲಿ ಮುಂಬೈ ಇಂಡಿಯನ್ಸ ಮೊದಲ ಸ್ಥಾನದಲ್ಲಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ
ಮುಂಬೈ ಇಂಡಿಯನ್ಸ್ ಮಹಿಳೆಯರು (ಪ್ಲೇಯಿಂಗ್ XI): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮಂಜೋತ್ ಕೌರ್, ಹುಮೈರಾ ಕಾಜಿ, ಜಿಂತಿಮಣಿ ಕಲಿತಾ, ಸೈಕಾ ಇಶಾಕ್
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸಿ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್
ಬೆಂಚ್: ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಅಪರ್ಣಾ ಮೊಂಡಲ್, ಪೂನಂ ಯಾದವ್, ಟಿಟಾಸ್ ಸಾಧು, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications