WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ ಸತತ 2ನೇ ಗೆಲುವು; ಮೊದಲ ಸೋಲು ಕಂಡ ಯುಪಿ ವಾರಿಯರ್ಸ್

ವುಮೆನ್ಸ್ ಪ್ರೀಮಿಯರ್ ಲೀಗ್‌ನ 5ನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಭರ್ಜರಿ ಪ್ರದರ್ಶನ ನೀಡಿದ್ದು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅಬ್ಬರಿಸಿದ ಡೆಲ್ಲಿ ಆಟಗಾರ್ತಿಯರು ಪಂದ್ಯದಲ್ಲಿ ಅಮೋಘ 42 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಮತ್ತೊಂದೆಡೆ ಯುಪಿ ವಾರಿಯರ್ಸ್ ಡಬ್ಲ್ಯುಪಿಎಲ್‌ನಲ್ಲಿ ಚೊಚ್ಚಲ ಸೋಲಿನ ರುಚಿ ಕಂಡಿದೆ. ಯುಪಿ ವಾರಿಯರ್ಸ್ ಪರವಾಗಿ ತಹ್ಲಿಯಾ ಮೆಗ್ರಾಥ್ ಏಕಾಂಗಿ ಹೋರಾಟ ನಡೆಸಿದ್ದು ಅಜೇಯ 90 ರನ್‌ಗಳಿಸಿ ವ್ಯರ್ಥ ಹೋರಾಟ ಪ್ರದರ್ಶಿಸಿದರು.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಯುಪಿ ವಾರಿಯರ್ಸ್ ತಂಡ ಭರ್ಜರಿ ಪ್ರದರ್ಶನ ನೀಡಿತು. ಮೊದಲ ವಿಕೆಟ್‌ಗೆ ಭರ್ಜರಿ 67 ರನ್‌ಗಳ ಜೊತೆಯಾಟ ನೀಡಿ ಆರಂಭಿಕ ಜೋಡಿ ಬೇರ್ಪಟ್ಟಿತು. ಆದರೆ ಈ ಪಂದ್ಯದಲ್ಲಿ ಶಫಾಲಿ ವರ್ಮಾ ಕೇವಲ 17 ರನ್‌ಗಳಿಗಷ್ಟೇ ಸೀಮಿತವಾದರು. ಮತ್ತೊಂದು ತುದಿಯಲ್ಲಿ ನಾಯಕಿ ಲ್ಯಾನಿಂಗ್ ಅಬ್ಬರಿಸುತ್ತಿದ್ದರು.
ಮೆಗ್ ಲ್ಯಾನಿಂಗ್ ಈ ಪಂದ್ಯದಲ್ಲಿ ಕೇವಲ 42 ಎಸೆತಗಳನ್ನು ಎದುರಿಸಿ ಭರ್ಜರಿ 70 ರನ್ ಗಳಿಸಿದರು. 10 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದ್ದರು ಡಿಸಿ ನಾಯಕಿ. ಇನ್ನು ಜಮಿಮಾ ರೋಡ್ರಿಗಸ್ 22 ಎಸೆತಗಳಲ್ಲಿ 34 ರನ್ ಸಿಡಿಸಿದರೆ ಜೆಸ್ ಜೊನಾಸನ್ 20 ಎಸೆತಗಳಲ್ಲಿ 42 ರಬ್ ಬಾರಿಸಿ ತಂಡದ ಮೊತ್ತ ಮತ್ತೊಮ್ಮೆ 200ರ ಗಡಿ ದಾಟಲು ಕಾರಣವಾದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡ 211 ರನ್ ಬಾರಿಸಿತು.
ಈ ಮೊತ್ತವನ್ನು ಬೆನ್ನಟ್ಟಿದ ಯುಪಿ ವಾರಿಯರ್ಸ್ ತಂಡಕ್ಕೆ ಹೇಳಿಕೊಳ್ಳುವಂತಾ ಆರಂಭ ದೊರೆಯಲಿಲ್ಲ. ಆದರೆ ತಹ್ಲಿಯಾ ಮೆಗ್ರಾಥ್ ಪಂದ್ಯದ ಕೊನೆಯ ತನಕವೂ ಅಜೇಯವಾಗುಳಿದು ಅದ್ಭುತ ಹೋರಾಟ ನಡೆಸಿದರು. ಆದರೆ ಅವರಿಗೆ ಮತ್ತೊಂದು ತುದಿಯಲ್ಲಿ ಸೂಕ್ತ ಬೆಂಬಲ ದೊರೆಯದ ಕಾರಣ ಈ ಹೋರಾಟ ವ್ಯರ್ಥವಾಯಿತು. ಮೆಗ್ರಾಥ್ 50 ಎಸೆತಗಳನ್ನು ಎದುರಿಸಿದ್ದು ನಾಲ್ಕು ಸಿಕ್ಸರ್ ಹಾಗೂ 11 ಬೌಂಡರಿಗಳ ನೆರವಿನಿಂದ 90 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. ಇವರಿಗೆ ದೇವಿಕಾ ವೈದ್ಯ ಮಾತ್ರವೇ ಕೆಲ ಕಾಲ ಸಾಥ್ ನೀಡಿದರು.
ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 169 ರನ್ ಗಳಿಸಲಷ್ಟೇ ಶಕ್ತವಾಯಿತು ಯುಪಿ ವಾರಿಯರ್ಸ್. ಈ ಮೂಲಕ ಈ ಪಂದ್ಯದಲ್ಲಿ 42 ರನ್‌ಗಳ ಅಂತರದ ಭಾರೀ ಸೋಲು ಅನುಭವಿಸಿದೆ ಅಲಿಸಾ ಹೀಲಿ ನೇತೃತ್ವದ ಯುಪಿ ವಾರಿಯರ್ಸ್. ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್
ಯುಪಿ ವಾರಿಯರ್ಸ್ ಆಡುವ ಬಳಗ: ಅಲಿಸ್ಸಾ ಹೀಲಿ (ವಿಕೆಟ್ ಕೀಪರ್/ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ಸಿಮ್ರಾನ್ ಶೇಖ್, ದೇವಿಕಾ ವೈದ್ಯ, ಸೋಫಿ ಎಕ್ಲೆಸ್ಟೋನ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications