WPL 2023: ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ ಸೆಣೆಸಾಟ, ಟಾಸ್ ರಿಪೋರ್ಟ್, ಆಡುವ ಬಳಗ

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಐದನೇ ಪಂದ್ಯ ನಡೆಯುತ್ತಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ಎರಡು ತಂಡಗಳಿಗೂ ಇದು ಎರಡನೇ ಪಂದ್ಯವಾಗಿದ್ದು ಮೊದಲ ಪಂದ್ಯದಲ್ಲಿ ಎರಡು ತಂಡಗಳು ಕೂಡ ಗೆಲುವಿನ ರುಚಿ ಕಂಡಿದೆ. ಹೀಗಾಗಿ ಗೆದ್ದ ತಂಡಗಳ ನಡುವಿನ ಈ ಪಂದ್ಯ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಎರಡು ತಂಡದಲ್ಲಿಯೂ ಸಾಕಷ್ಟು ಪ್ರವಾಣದಲ್ಲಿ ಸ್ಟಾರ್ ಆಟಗಾರರಿದ್ದು ಮತ್ತೊಂದು ಜಿದ್ದಾಜಿದ್ದಿನ ಪಂದ್ಯವಾಗುವುದರಲ್ಲಿ ಅನುಮಾನವಿಲ್ಲ.
ಇನ್ನು ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಗ್ರೇಸ್ ಹ್ಯಾರಿಸ್ ಆಡುವ ಬಳಗದಿಂದ ಹೊರಗುಳಿದಿದ್ದು ಅವರ ಬದಲಿಗೆ ಶಬ್ನಿಮ್ ಇಸ್ಮೈಲ್‌ಗೆ ಅವಕಾಶ ದೊರೆತಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಆಡಿದ ಬಳಗದೊಂದಿಗೆ ಕಣಕ್ಕಿಳಿದಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್
ಯುಪಿ ವಾರಿಯರ್ಸ್ ಆಡುವ ಬಳಗ: ಅಲಿಸ್ಸಾ ಹೀಲಿ (ವಿಕೆಟ್ ಕೀಪರ್/ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ಸಿಮ್ರಾನ್ ಶೇಖ್, ದೇವಿಕಾ ವೈದ್ಯ, ಸೋಫಿ ಎಕ್ಲೆಸ್ಟೋನ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications