For Quick Alerts
ALLOW NOTIFICATIONS  
For Daily Alerts
 

WPL 2023: ಡೆಲ್ಲಿ ಕ್ಯಾಪಿಟಲ್ಸ್ ಆರ್ಭಟಕ್ಕೆ ಕಂಗಾಲಾದ ಮುಂಬೈ ಇಂಡಿಯನ್ಸ್ : ಮೊದಲ ಸ್ಥಾನಕ್ಕೆ ಜಿಗಿದ ಡೆಲ್ಲಿ

WPL 2023: Delhi Capitals Defeated Mumbai Indians By 9 Wickets

ಸೋಮವಾರ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಡೆ ಅಬ್ಬರಿಸಿದೆ. ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

109 ರನ್‌ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 1 ವಿಕೆಟ್ ಕಳೆದುಕೊಂಡು 9 ಓವರ್ ಗಳಲ್ಲೇ ಗುರಿ ತಲುಪುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಉತ್ತಮ ಬ್ಯಾಟಿಂಗ್ ಮಾಡುವಲ್ಲಿ ವಿಫಲವಾಯಿತು. ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುವ ಮೂಲಕ ಒತ್ತಡಕ್ಕೆ ಸಿಲುಕಿದ ಮುಂಬೈ ಇಂಡಿಯನ್ಸ್ ಮತ್ತೆ ಸುಧಾರಿಸಿಕೊಳ್ಳಲೇ ಇಲ್ಲ.

ಕೇವಲ 10 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಳ್ಳುವ ಮೂಲಕ ಕಡಿಮೆ ಮೊತ್ತಕ್ಕೆ ಕುಸಿಯುವ ಭೀತಿ ಅನುಭವಿಸಿತ್ತು. ನಂತರ 21 ರನ್‌ಗಳಾಗುಷ್ಟರಲ್ಲಿ ಮತ್ತೊಂದು ವಿಕೆಟ್ ಕಳೆದುಕೊಂಡಿತು. ನಾಯಕಿ ಹರ್ಮನ್‌ಪ್ರೀತ್ ಕೌರ್ 23 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ.

WPL 2023: Delhi Capitals Defeated Mumbai Indians By 9 Wickets

ಡೆಲ್ಲಿ ಕ್ಯಾಪಿಟಲ್ಸ್ ಅತ್ಯುತ್ತಮ ಬೌಲಿಂಗ್

ಪೂಜಾ ವಸ್ತ್ರಾಕರ್ 26 ರನ್, ಇಸ್ಸಿ ವೋಂಗ್ 23 ರನ್ ಮತ್ತು ಅಮನ್‌ಜೋತ್ ಕೌರ್ 19 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ಅಂತಿಮವಾಗಿ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 109 ರನ್ ಕಲೆಹಾಕಿತು. ಇದು ಮುಂಬೈ ಇಂಡಿಯನ್ಸ್ ಇದುವರೆಗೆ ಗಳಿಸಿದ ಅತ್ಯಂತ ಕಡಿಮೆ ಮೊತ್ತವಾಗಿದೆ.

ಮಾರಿಜಾನ್ನೆ ಕಪ್ 4 ಓವರ್ ಗಳಲ್ಲಿ ಕೇವಲ 13 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದು ಮಿಂಚಿದರು. ಶಿಖಾ ಪಾಂಡೆ 4 ಓವರ್ ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದರೆ, ಜೆಸ್ ಜೊನಾಸ್ಸೆನ್ ಕೂಡ 2 ವಿಕೆಟ್ ಪಡೆದು ಮಿಂಚಿದರು. ಅರುಂಧತಿ ರೆಡ್ಡಿ ಒಂದು ವಿಕೆಟ್ ಪಡೆದರು.

WPL 2023: Delhi Capitals Defeated Mumbai Indians By 9 Wickets

9 ಓವರ್ ಗಳಲ್ಲೇ ಪಂದ್ಯ ಮುಗಿಸಿದ ಡೆಲ್ಲಿ

ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಡೆಲ್ಲಿ ಕ್ಯಾಪಿಟಲ್ಸ್ 110 ರನ್‌ಗಳ ಗುರಿಯನ್ನು 11 ಓವರ್ ಗಳಲ್ಲಿ ತಲುಪಬೇಕಾಗಿತ್ತು. ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಮಾಡಲು ಆರಂಭಿಸಿದ ಶಫಾಲಿ ವರ್ಮಾ ಮತ್ತು ನಾಯಕಿ ಮೆಗ್‌ ಲ್ಯಾನಿಂಗ್ ಮುಂಬೈ ಇಂಡಿಯನ್ಸ್ ಬೌಲರ್ ಗಳ ಬೆವರಿಳಿಸಿದರು.

4.3 ಓವರ್ ಗಳಲ್ಲೇ ಈ ಜೋಡಿ ಮೊದಲನೇ ವಿಕೆಟ್‌ಗೆ 56 ರನ್ ಕಲೆಹಾಕುವ ಮೂಲಕ ಸ್ಫೋಟಕ ಆರಂಭ ಒದಗಿಸಿದರು. ಕೇವಲ 15 ಎಸೆತಗಳಲ್ಲಿ 6 ಬೌಂಡರಿ ಒಂದು ಸಿಕ್ಸರ್ ಸಹಿತ 33 ರನ್ ಗಳಿಸಿ ಶಫಾಲಿ ವರ್ಮಾ ವಿಕೆಟ್ ಒಪ್ಪಿಸಿದರು. ನಂತರ ಬಂದ ಅಲೀಸ್ ಕ್ಯಾಪ್ಸಿ ಕೂಡ ಅಬ್ಬರಿಸಿದರು. ಕೇವಲ 17 ಎಸೆತಗಳಲ್ಲಿ 1 ಬೌಂಡರಿ 5 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 38 ರನ್ ಗಳಿಸಿದರು. ಮೆಗ್‌ ಲ್ಯಾನಿಂಗ್ 22 ಎಸೆತಗಳಲ್ಲಿ ಅಜೇಯ 32 ಗಳಿಸಿ ಮಿಂಚಿದರು.

ಈ ಮೂವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 9 ಓವರ್ ಗಳಲ್ಲಿ ಗೆಲುವಿನ ದಡ ಮುಟ್ಟುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮುಂದಿನ ಪಂದ್ಯದಲ್ಲಿ ಕೂಡ ಡೆಲ್ಲಿ ಗೆಲುವು ಸಾಧಿಸಿದರೆ, ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯಲಿದ್ದಾರೆ.

Story first published: Monday, March 20, 2023, 22:18 [IST]
Other articles published on Mar 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+