Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಪೆರ್ರಿ, ರಿಚಾ ಸ್ಫೋಟಕ ಬ್ಯಾಟಿಂಗ್; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸವಾಲಿನ ಗುರಿ ನೀಡಿದ ಆರ್‌ಸಿಬಿ

WPL 2023: Delhi Capitals Needs 151 Runs To Win Against Royal Challengers Bangalore

ಸೋಮವಾರ, ಮಾರ್ಚ್ 13ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ವಿರುದ್ಧ ಉತ್ತಮ ಮೊತ್ತ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡ ಎಲ್ಲಿಸ್ ಪೆರ್ರಿ ಅವರ ಅರ್ಧಶತಕ ಮತ್ತು ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿದ್ದು, ಮೆಗ್ ಲ್ಯಾನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 151 ರನ್‌ಗಳ ಗುರಿ ನೀಡಿದೆ.

ಆರ್‌ಸಿಬಿ ತಂಡದ ಬ್ಯಾಟಿಂಗ್ ಆರಂಭಿಸಿದ ಸ್ಮೃತಿ ಮಂಧಾನ ಮತ್ತು ಸೋಫಿ ಡಿವೈನ್ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. 15 ಎಸೆತಗಳಲ್ಲಿ 8 ರನ್ ಗಳಿಸಿ ಆಡುತ್ತಿದ್ದ ಸ್ಮೃತಿ ಮಂಧಾನ ವಿಕೆಟ್ ಒಪ್ಪಿಸಿದರೆ, 21 ರನ್ ಗಳಿಸಿದ್ದ ಸೋಫಿ ಡಿವೈನ್ ಸಹ ಔಟಾದರು.

WPL 2023: Delhi Capitals Needs 151 Runs To Win Against Royal Challengers Bangalore

ನಂತರ ಬಂದ ಎಲ್ಲಿಸ್ ಪೆರ್ರಿ 52 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಿಂದ 67 ರನ್ ಬಾರಿಸಿದರು. ಇನ್ನು ಹೀದರ್ ನೈಟ್ 11 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ನಂತರ ಬಂದ ರಿಚಾ ಘೋಷ್ 16 ಎಸೆತಗಳಲ್ಲಿ ಸ್ಫೋಟಕ 37 ರನ್ ಬಾರಿಸಿದರೆ, ಕೊನೆಯಲ್ಲಿ ಬಂದ ಶ್ರೇಯಾಂಕ ಪಾಟೀಲ್ 4 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಶಿಖಾ ಪಾಂಡೆ 4 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರೆ, ತಾರಾ ನಾರ್ರಿಸ್ 3 ಓವರ್‌ಗಳಲ್ಲಿ 25 ರನ್ ನೀಡಿ 1 ವಿಕೆಟ್ ಪಡೆದರು.

WPL 2023: Delhi Capitals Needs 151 Runs To Win Against Royal Challengers Bangalore


ಈ ಮೊದಲು ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದಾಗ, ಡೆಲ್ಲಿ ಕ್ಯಾಪಿಟಲ್ಸ್ ತಂಡ 60 ರನ್‌ಗಳ ಅಂತರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿತ್ತು. ಇದೀಗ ಕಳೆದ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿ ಆರ್‌ಸಿಬಿ ತಂಡವಿದೆ.

ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿದ ಹೆಚ್ಚಿನ ಆತ್ಮವಿಶ್ವಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯವನ್ನು ಆಡುತ್ತಿದೆ.

ಇನ್ನು ಸ್ಮೃತಿ ಮಂಧಾನ ಪಡೆ ಇದುವರೆಗೆ ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಸೋತಿರುವ ಕಾರಣ ಗೆಲುವಿಗೆ ಇನ್ನೂ ತೆರೆದಿಲ್ಲ. ಮುಂದಿನ ಹಂತ ತಲುಪಲು ಆರ್‌ಸಬಿ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ. ಸೋತರೆ ಟೂರ್ನಿಯಿಂದ ಹೊರಬೀಳುವ ಸಾಧ್ಯತೆಯೂ ಇದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಆಡುವ 11ರ ಬಳಗ
ಆರ್‌ಸಿಬಿ ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಶ್ರೇಯಾಂಕ ಪಾಟೀಲ್, ಆಶಾ ಶೋಬನಾ, ಪ್ರೀತಿ ಬೋಸ್, ಮೇಗನ್ ಶುಟ್, ರೇಣುಕಾ ಠಾಕೂರ್ ಸಿಂಗ್.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ: ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ ಕ್ಯಾಪ್ಸೆ, ಮರಿಜಾನ್ನೆ ಕಪ್, ಜೆಮಿಮಾ ರೋಡ್ರಿಗಸ್, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್.

Story first published: Monday, March 13, 2023, 20:56 [IST]
Other articles published on Mar 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+