For Quick Alerts
ALLOW NOTIFICATIONS  
For Daily Alerts
 

WPL 2023: ಡೆಲ್ಲಿ ಕ್ಯಾಪಿಟಲ್ಸ್ ಅತ್ಯುತ್ತಮ ಬೌಲಿಂಗ್‌: 109 ರನ್‌ ಕಲೆಹಾಕಿದ ಮುಂಬೈ ಇಂಡಿಯನ್ಸ್

WPL 2023: Delhi Capitals Restricted Mumbai Indians To 109 Runs In 20 Overs

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಸ್ತಿನ ಬೌಲಿಂಗ್ ದಾಳಿಗೆ ಮುಂಬೈ ಇಂಡಿಯನ್ಸ್ ಪರದಾಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 109 ರನ್ ಕಲೆಹಾಕಿದೆ.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಬಲಿಷ್ಠ ಬ್ಯಾಟಿಂಗ್ ಪಡೆಯ ವಿರುದ್ಧ ಅತ್ಯುತ್ತಮ ಬೌಲಿಂಗ್ ದಾಳಿ ಸಂಘಟಿಸಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ಕಟ್ಟಿಹಾಕಿತು.

2.1ನೇ ಓವರ್ ನಲ್ಲಿ ಮುಂಬೈ ಇಂಡಿಯನ್ಸ್ ಮೊದಲನೇ ವಿಕೆಟ್ ಕಳೆದುಕೊಂಡಿತು. ಯಾಸ್ತಿಕಾ ಭಾಟಿಯಾ 6 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾದರು, ನ್ಯಾಟ್ ಸಿವರ್ ಬ್ರಂಟ್ ತಮ್ಮ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ವಾಪಸಾದರು. ಮಾರಿಜಾನ್ನೆ ಕಪ್ ಒಂದೇ ಓವರ್ ನಲ್ಲಿ ಈ ಎರಡು ವಿಕೆಟ್ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್‌ಗೆ ಆಘಾತ ನೀಡಿದರು.

ಫಾರ್ಮ್‌ನಲ್ಲಿದ್ದ ಹೇಲಿ ಮ್ಯಾಥ್ಯೂಸ್ ಕೂಡ ಕೇವಲ 5 ರನ್ ಗಳಿಸಿ ಔಟಾದರು. ಅಮೇಲಿಯಾ ಕೆರ್ ಕೂಡ 8 ರನ್ ಗಳಿಸಿ ಔಟಾದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 23 ರನ್ ಗಳಿಸಿ ಔಟಾದರು. ಪೂಜಾ ವಸ್ತ್ರಾಕರ್ 26 ರನ್ ಗಳಿಸಿದರೂ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ. ಇಸ್ಸಿ ವಾಂಗ್ 23 ರನ್ ಗಳಿಸಿದರೆ, ಅಮನ್‌ಜೋತ್ ಕೌರ್ 19 ರನ್ ಗಳಿಸಿ ಔಟಾದರು.

WPL 2023: Delhi Capitals Restricted Mumbai Indians To 109 Runs In 20 Overs

ಮಾರಿಜಾನ್ನೆ ಕಪ್, ಶಿಖಾ ಪಾಂಡೆ ಮತ್ತು ಜೆಸ್ ಜೊನಾಸೆನ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಅರುಂಧತಿ ರೆಡ್ಡಿ ಒಂದು ವಿಕೆಟ್ ಪಡೆದರು. ಡೆಲ್ಲಿ ಶಿಸ್ತಿನ ಬೌಲಿಂಗ್‌ನಿಂದಾಗಿ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 109 ರನ್ ಗಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಮೊದಲನೇ ಸ್ಥಾನಕ್ಕೇರುವ ಅವಕಾಶ ಪಡೆಯಲಿದೆ. ಮುಂಬೈ ಇಂಡಿಯನ್ಸ್ ಇಂದಿನ ಪಂದ್ಯದಲ್ಲಿ ಸೋತರೆ ನೇರವಾಗಿ ಫೈನಲ್‌ ತಲುಪಲು ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾಗುತ್ತದೆ.

ಉಭಯ ತಂಡಗಳ ಆಡುವ ಬಳಗ

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಪೂಜಾ ವಸ್ತ್ರಾಕರ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.

ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೋನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ಪೂನಂ ಯಾದವ್.

Story first published: Monday, March 20, 2023, 21:11 [IST]
Other articles published on Mar 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+