WPL 2023: ಮುಂಬೈ ಇಂಡಿಯನ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ : ಮುಂಬೈ ಗೆಲುವಿಗೆ 132 ರನ್‌ಗಳ ಗುರಿ

ಮಹಿಳಾ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಶಿಸ್ತಿನ ಬೌಲಿಂಗ್ ದಾಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಲುಗಿದೆ. 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುವ ಮೂಲಕ ಒತ್ತಡಕ್ಕೆ ಸಿಲುಕಿತು.
ಕಳೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು, ಫೈನಲ್ ಪಂದ್ಯದಲ್ಲಿ ಕೂಡ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕಾಡಿದರು. ಅತ್ಯುತ್ತಮ ಫಾರ್ಮ್‌ನಲ್ಲಿದ್ದ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾರನ್ನು ತಮ್ಮ ಮೊದಲನೇ ಓವರ್ ನಲ್ಲಿ ಔಟ್ ಮಾಡುವ ಮೂಲಕ ಮಿಂಚಿದರು.
ಶಫಾಲಿ ವರ್ಮಾ 4 ಎಸೆತಗಳಲ್ಲಿ 11 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು. ಅಲಿಸ್ಸಾ ಕ್ಯಾಪ್ಸಿ ಕೂಡ ಮೊದಲನೇ ಎಸೆತದಲ್ಲೇ ಇಸ್ಸಿ ವಾಂಗ್‌ಗೆ ವಿಕೆಟ್ ಒಪ್ಪಿಸಿದರು. ಜೆಮಿಮಾ ರಾಡ್ರಿಗಸ್ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ, 8 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು.
ಮೆಗ್ ಲ್ಯಾನಿಂಗ್ ಮತ್ತು ಮಾರಿಜಾನ್ನೆ ಕಾಪ್ 21 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. 29 ಎಸೆತಗಳಲ್ಲಿ 35 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ನಾಯಕಿ ಮೆಗ್ ಲ್ಯಾನಿಂಗ್ ಕೂಡ ರನೌಟ್‌ಗೆ ಬಲಿಯಾದರು. ಜೆಸ್ ಜೊನಾಸ್ಸೆನ್ 11 ಎಸೆತಗಳಲ್ಲಿ 2 ರನ್ ಗಳಿಸಿ ನಿರಾಸೆ ಮೂಡಿಸಿದರು. ಅರುಂಧತಿ ರಾಯ್ ಶೂನ್ಯಕ್ಕೆ ಔಟಾದರು.

ಆಸರೆಯಾದ ಶಿಖಾ ಪಾಂಡೆ - ರಾಧಾ ಯಾದವ್
ಒಂದು ಹಂತದಲ್ಲಿ 100 ರನ್‌ಗಳ ಗಡಿ ದಾಟುವುದೇ ಕಷ್ಟ ಎನ್ನುವಂತಿದ್ದಾಗ ಶಿಖಾ ಪಾಂಡೆ ಮತ್ತು ರಾಧಾ ಯಾದವ್ ತಂಡಕ್ಕೆ ಆಸರೆಯಾದರು. ಅಂತಿಮ ವಿಕೆಟ್‌ಗೆ ಈ ಜೋಡಿ 24 ಎಸೆತಗಳಲ್ಲಿ 52 ರನ್‌ಗಳನ್ನು ಕಲೆಹಾಕಿತು. ರಾಧಾಯಾದವ್ 12 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿರೆ, ಶಿಖಾ ಪಾಂಡೆ 17 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು.
ಮುಂಬೈ ಇಂಡಿಯನ್ಸ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಇಸ್ಸಿ ವಾಂಗ್ 4 ಓವರ್ ಗಳಲ್ಲಿ 42 ರನ್ ನೀಡಿ 3 ವಿಕೆಟ್ ಪಡೆದರು. ಹೇಲಿ ಮ್ಯಾಥ್ಯೂಸ್ 4 ಓವರ್ ಗಳಲ್ಲಿ ಕೇವಲ 5 ರನ್ ನೀಡಿ 3 ವಿಕೆಟ್ ಪಡೆದರು. ಮೆಲಿ ಕೆರ್ 4 ಎಸೆತಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರು.
ಉಭಯ ತಂಡಗಳ ಆಡುವ ಬಳಗ
ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಪೂಜಾ ವಸ್ತ್ರಾಕರ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.
ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೋನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ಮಿನ್ನು ಮಣಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications