For Quick Alerts
ALLOW NOTIFICATIONS  
For Daily Alerts
 

WPL 2023: ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟ ಮುಂಬೈ, ಡೆಲ್ಲಿ: ಪಂದ್ಯದ ಸಮಯ ಹಾಗೂ ಇತರ ಮಾಹಿತಿ

WPL 2023: Delhi Capitals vs Mumbai Indians Final match, match time and Live details

ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ಚೊಚ್ಚಲ ಆವೃತ್ತಿ ಅಂತಿಮ ಹಂತಕ್ಕೆ ತಲುಪಿದೆ. ಟೂರ್ನಿಯ ಫೈನಲ್ ಪಂದ್ಯ ಮಾತ್ರವೇ ಬಾಕಿಯಿದ್ದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಚೊಚ್ಚಲ ಆವೃತ್ತಿಯ ಟ್ರೋಫಿಗಾಗಿ ಸೆಣೆಸಾಟ ನಡೆಸಲಿದೆ. ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟೂರ್ನಿಯ ಲೀಗ್ ಹಂತದಲ್ಲಿ ಅಗ್ರಸ್ಥಾನವನ್ನು ಪಡೆದು ನೇರವಾಗಿ ಫೈನಲ್‌ಗೆ ಪ್ರವೇಶಿಸಿದ್ದರೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗೆದ್ದು ಫೈನಲ್‌ಗೆ ಪ್ರವೇಶಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಪ್ರಪ್ರಥಮ ಫೈನಲ್ ಪಂದ್ಯ ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದ್ದು ಮಾರ್ಚ್ 26 ಭಾನುವಾರದಂದು ಈ ಪಂದ್ಯ ನಡೆಯಲಿದೆ. ಎರಡು ತಂಡಗಳು ಕೂಡ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿದ್ದು ಯಾವ ತಂಡ ಚಾಂಪಿಯನ್ ಪಟ್ಟವನ್ನು ಏರಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಪಂದ್ಯದ ಸಮಯ

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ವುಮೆನ್ಸ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯ ಮಾರ್ಚ್ 26 ಭಾನುವಾರ ನಡೆಯಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣ ಈ ಐತಿಹಾಸಿಕ ಪಂದ್ಯಕ್ಕೆ ಆತಿಥ್ಯವಹಿಸಲಿದ್ದು ಸಂಜೆ 7:30ಕ್ಕೆ ಫೈನಲ್ ಪಂದ್ಯ ಆರಂಭವಾಗಲಿದೆ.

ನೇರಪ್ರಸಾರದ ಮಾಹಿತಿ: ಇನ್ನು ಈ ಪಂದ್ಯದ ನೇರಪ್ರಸಾರ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ದೊರೆಯಲಿದೆ. ಅಲ್ಲದೆ ಜಿಯೋ ಸಿನಿಮಾ ಆಪ್ ಹಾಗೂ ವೆಬ್‌ಸೈಟ್‌ನಲ್ಲಿಯೂ ಉಚಿತವಾಗಿ ಪಂದ್ಯ ವೀಕ್ಷಿಸುವ ಅವಕಾಶವಿದೆ.

ಸ್ಕ್ವಾಡ್‌ಗಳು ಹೀಗಿದೆ
ಢೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸಿ, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಝನ್ನೆ ಕಪ್, ಟೈಟಾಸ್ ಸಾಧು, ಲಾರಾ ಹ್ಯಾರಿಸ್, ಮಿನ್ನು ಮಣಿ, ಜಸಿಯಾ ಅಖ್ತರ್, ತಾರಾ ನಾರ್ರಿಸ್, ತನಿಯಾ ಭಾಟಿಯಾ, ಪೂನಂ ಯಾದವ್, ಜೆಸ್ ಜೋನಾಸೆನ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಲ್ಪನಾ ಮೊಂಡಲ್

ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್ (ನಾಯಕಿ), ನಟಾಲಿ ಸಿವರ್, ಪೂಜಾ ವಸ್ತ್ರಕರ್, ಯಾಸ್ತಿಕಾ ಭಾಟಿಯಾ, ಅಮೆಲಿಯಾ ಕೆರ್, ಶಬ್ನಮ್ ಇಸ್ಮಾಯಿಲ್, ಅಮನ್ಜೋತ್ ಕೌರ್, ಹೇಲಿ ಮ್ಯಾಥ್ಯೂಸ್, ಹೀದರ್ ಗ್ರಹಾಂ, ಇಸಾಬೆಲ್ಲೆ ವಾಂಗ್, ಕ್ಲೋಯ್ ಟ್ರಯಾನ್, ಪ್ರಿಯಾಂಕಾ ಬಾಲಾ, ಧಾರಾ ಗುಜ್ಜರ್, ಸೈಕಾ ಇಶಾಕ್, ಹುಮೈರಾ ಕಾಜಿ, ಸೋನಮ್ ಯಾದವ್, ಜಿಂತಿಮಣಿ ಕಲಿತಾ, ನೀಲಂ ಬಿಷ್ತ್

Story first published: Saturday, March 25, 2023, 14:19 [IST]
Other articles published on Mar 25, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+