Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ ಪಂದ್ಯದ ವಿವರ; ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮಿಂಗ್

WPL 2023: Delhi Capitals vs UP Warriorz Probable Playing 11, Match Report, TV And Live Streaming Details

ಮಂಗಳವಾರ, ಮಾರ್ಚ್ 7ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನ (WPL) 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ಮಹಿಳಾ ತಂಡಗಳು ಮುಖಾಮುಖಿಯಾಗಲಿವೆ.

ಎರಡೂ ತಂಡಗಳು ಭಾನುವಾರ ನಡೆದ ಪಂದ್ಯಗಳಲ್ಲಿ ಅಚ್ಚರಿ ಗೆಲುವುಗಳೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ತಮ್ಮ ಅಭಿಯಾನ ಆರಂಭಿಸಿದವು. ಮುಂಬೈ ಇಂಡಿಯನ್ ಮಹಿಳಾ ತಂಡದಂತೆಯೇ ತಮ್ಮ ಸತತ ಎರಡನೇ ಗೆಲುವಿನ ಮೇಲೆ ಎರಡೂ ತಂಡಗಳು ಕಣ್ಣಿಟ್ಟಿವೆ.

ಭಾನುವಾರ ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 60 ರನ್‌ಗಳ ಬೃಹತ್ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಮಹಿಳಾ ಲೀಗ್‌ನಲ್ಲಿ ಶುಭಾರಂಭ ಮಾಡಿತು.

WPL 2023: Delhi Capitals vs UP Warriorz Probable Playing 11, Match Report, TV And Live Streaming Details

ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಶಫಾಲಿ ವರ್ಮಾ ಅವರ 162 ರನ್‌ಗಳ ಅದ್ಭುತ ಆರಂಭಿಕ ಜೊತೆಯಾಟದ ಸಹಾಯದಿಂದ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 223 ರನ್ ಕಲೆ ಹಾಕಿತು. ನಂತರ ವೇಗದ ಬೌಲರ್ ತಾರಾ ನಾರ್ರಿಸ್ ಅವರ ಐದು ವಿಕೆಟ್ ಗೊಂಚಲು ನೆರವಿನಿಂದ ಆರ್‌ಸಿಬಿ ತಂಡವನ್ನು 20 ಓವರ್‌ಗಳಲ್ಲಿ 163 ರನ್‌ಗಳಿಗೆ ನಿಯಂತ್ರಿಸಿತು.

ಆರ್‌ಸಿಬಿ ವಿರುದ್ಧದ ತಮ್ಮ ಗೆಲುವಿನ ಬಗ್ಗೆ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನ್ನಿಂಗ್, ""ಇದು ನಮಗೆ ಉತ್ತಮ ಆರಂಭವಾಗಿದೆ. ಶಫಾಲಿ ವರ್ಮಾ ಜೊತೆ ಬ್ಯಾಟ್ ಮಾಡುವುದು ಖುಷಿ ಕೊಟ್ಟಿತು. ಮೈದಾನದಲ್ಲಿ ಎಲ್ಲರೂ ಉತ್ತಮ ಪ್ರದರ್ಶನ ನೀಡಿದರು. ತಾರಾ ನಾರ್ರಿಸ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದಳು,'' ಎಂದು ತಿಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ ಪಂದ್ಯದ ವರದಿ
ಸ್ಥಳ ಮತ್ತು ಸಮಯ: ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ ಪಂದ್ಯ ಮಂಗಳವಾರ, ಮಾರ್ಚ್ 7ರಂದು ಮುಂಬೈ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಮಹಿಳಾ ಪ್ರೀಮಿಯರ್ ಲೀಗ್ 2023ರ ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ ಪಂದ್ಯವು ಭಾರತದಲ್ಲಿ Sports18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದರೆ, JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

WPL 2023: Delhi Capitals vs UP Warriorz Probable Playing 11, Match Report, TV And Live Streaming Details


ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ ಸಂಭಾವ್ಯ ಆಡುವ 11ರ ಬಳಗ

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನ್ನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ, ಜೆಸ್ ಜೊನಾಸೆನ್, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್, ಅರುಂಧತಿ ರೆಡ್ಡಿ.

ಯುಪಿ ವಾರಿಯರ್ಸ್ ತಂಡ: ಅಲಿಸ್ಸಾ ಹೀಲಿ (ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಗ್ರಾತ್, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ಸಿಮ್ರಾನ್ ಶೇಖ್, ದೇವಿಕಾ ವೈದ್ಯ, ಸೋಫಿ ಎಕ್ಲೆಸ್ಟೋನ್, ಅಂಜಲಿ ಶರ್ವಾಣಿ, ರಾಜೇಶ್ವರಿ ಗಾಯಕ್ವಾಡ್.

Story first published: Tuesday, March 7, 2023, 9:58 [IST]
Other articles published on Mar 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+