WPL 2023: ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಗೆಲುವು: ನೇರವಾಗಿ ಫೈನಲ್‌ಗೆ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಚೊಚ್ಚಲ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯ ಮುಕ್ತಾಯವಾಗಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾವನ್ನು ಪಡೆದುಕೊಂಡಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಅಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶ ಪಡೆಯಲಿದೆ.
ಇಂದು ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಅರ್ಹವಾಗಿಯೇ ಗೆಲುವು ಸಾಧಿಸಿ ಬೀಗಿದೆ. ಆರಂಭದಲ್ಲಿ ಬೌಲಿಂಗ್‌ನಲ್ಲಿ ಮಿಂಚಿದ ಮೆಗ್ ಲ್ಯಾನಿಂಗ್ ಬಳಗ ಬಳಿಕ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದು ಯುಪಿ ವಾರಿಯರ್ಸ್ ನೀಡಿದ್ದ 139 ರನ್‌ಗಳ ಗುರಿಯನ್ನು 17.5 ಓವರ್‌ಗಳಲ್ಲಿ ಮೀರಿ ನಿಲ್ಲುವಲ್ಲಿ ಯಶಸ್ವಿಯಾಗಿದೆ.
ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ಪರವಾಗಿ ತಹಿಲಾ ಮೆಗ್ರಾಥ್ ಏಕಾಂಗಿ ಪ್ರದರ್ಶನ ನೀಡಿದರು. ಉಳಿದಂತೆ ನಾಯಕಿ ಹೀಲಿ ಅವರ 36 ರನ್‌ಗಳ ಕೊಡುಗೆ ತಂಡಕ್ಕೆ ನೆರವಾಯಿತು. ಇತರ ಯಾವ ಆಟಗಾರ್ತಿಯರು ಕೂಡ ಈ ಪಂದ್ಯದಲ್ಲಿ ಮಿಂಚಲು ವಿಫಲವಾಗಿದ್ದಾರೆ. ಹೀಗಾಗಿ 20 ಓವರ್‌ಗಳ ಸಂಪೂರ್ಣ ಬ್ಯಾಟಿಂಗ್ ನಡೆಸಿದರು ಕೂಡ ಸಾಧಾರಣ ಮೊತ್ತವನ್ನಷ್ಟೇ ಗಳಿಸಲು ಯುಪಿ ಪಡೆ ಶಕ್ತವಾಯಿತು.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಬೌಲಿಂಗ್‌ನಲ್ಲಿ ಅಲೈಸ್ ಕ್ಯಾಪ್ಸಿ 3 ವಿಕೆಟ್ ಕಿತ್ತು ಮಿಂಚಿದ್ದಾರೆ. ಉಳಿದಂತೆ ರಾಧಾ ಯಾದವ್ 2 ವಿಕೆಟ್ ಪಡೆದರೆ ಒಂದು ವಿಕೆಟ್ ಜೊನಾಸನ್ ಪಾಲಾಯಿತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ವಿಭಾಗ ಮತ್ತೊಮ್ಮೆ ಮಿಂಚಿತು.
ಇನ್ನು ಯುಪಿ ವಾರಿಯರ್ಸ್ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅದ್ಭುತ ಆರಂಭವನ್ನು ಪಡೆಯಿತು. ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಶಪಾಲಿ ವರ್ಮ ಮೊದಲ ವಿಕೆಟ್‌ಗೆ 56 ರನ್‌ಗಳ ಜೊತೆಯಾಟ ನೀಡಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಜಮಿಮಾ ಈ ಪಂದ್ಯದಲ್ಲಿ ವಿಫಲವಾದರು ಕೂಡ ಮರಿಜಾನೆ ಕಪ್ ಹಾಗೂ ಅಲಿಸ್ ಕ್ಯಾಪ್ಸೆ ಅವರಿಂದ ಅದ್ಣುತ ಪ್ರದರ್ಶನ ವ್ಯಕ್ತವಾಗಿದೆ. ಹೀಗಾಗಿ ಯದು ವಿಕೆಟ್‌ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ ಗೆದ್ದು ಬೀಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications