Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್

WPL 2023: Delhi Capitals Win The Toss And Opted To Bowl Against Mumbai Indians, Playing XI

ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕಾಗಿ ಸೆಣೆಸಲಿವೆ.

ಮುಂಬೈ ಇಂಡಿಯನ್ಸ್ ವಿರುದ್ಧ ಆಡಿದ್ದ ಮೊದಲನೇ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯುವ ಉತ್ಸಾಹದಲ್ಲಿದೆ.

ಎರಡೂ ತಂಡಗಳು ತಾವಾಡಿದ ಕೊನೆಯ ಪಂದ್ಯದಲ್ಲಿ ಸೋತಿವೆ. ಮುಂಬೈ ಇಂಡಿಯನ್ಸ್ ಮೊದಲ ಬಾರಿಗೆ ಸೋಲು ಕಂಡಿದೆ, ಯುಪಿ ವಾರಿಯರ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ಕೂಡ ತಾವಾಡಿದ ಕೊನೆಯ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 11 ರನ್‌ಗಳಿಂದ ಸೋಲನುಭವಿಸಿತ್ತು.

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋಲನುಭವಿಸಿದರೆ ಮುಂಬೈ ಇಂಡಿಯನ್ಸ್ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ತಲುಪಬೇಕಾದರೆ, ಯುಪಿ ವಾರಿಯರ್ಸ್ ಜೊತೆ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣೆಸಬೇಕಾಗುತ್ತದೆ.

WPL 2023: Delhi Capitals Win The Toss And Opted To Bowl Against Mumbai Indians, Playing XI

ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆ

ಎರಡೂ ತಂಡಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪಡೆಯೇ ಇದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮೆಗ್ ಲ್ಯಾನಿಂಗ್ ಮತ್ತು ಶಫಾಲಿ ವರ್ಮಾ ಆರಂಭದಲ್ಲಿ ಅಬ್ಬರಿಸಿದರೆ, ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಶಕ್ತಿ ತುಂಬಲಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ಹೇಯ್ಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಎರಡೂ ತಂಡಗಳಲ್ಲಿ ಅತ್ಯುತ್ತಮ ಬ್ಯಾಟರ್ ಗಳು ಇರುವುದರಿಂದ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ.

ಉಭಯ ತಂಡಗಳ ಆಡುವ ಬಳಗ

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಪೂಜಾ ವಸ್ತ್ರಾಕರ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.

ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೋನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ಪೂನಂ ಯಾದವ್.

Story first published: Monday, March 20, 2023, 19:30 [IST]
Other articles published on Mar 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+