WPL 2023: DC vs RCB : ತಾರಾ ನಾರಿಸ್‌ಗೆ 5 ವಿಕೆಟ್: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಗೆಲುವು

ಭಾನುವಾರ, ಮಾರ್ಚ್ 5ರಂದು ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ನಡೆದ 2023ರ ಮಹಿಳಾ ಪ್ರೀಮಿಯರ್ ಲೀಗ್‌ನ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ನಾಯಕಿ ಮೆಗ್ ಲ್ಯಾನ್ನಿಂಗ್ 72 ರನ್, ಶಫಾಲಿ ವರ್ಮಾ 84 ರನ್‌ಗಳ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 223 ರನ್‌ಗಳನ್ನು ಪೇರಿಸಿತು.
224 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 163 ರನ್‌ಗಳನ್ನು ಗಳಿಸಲಷ್ಟೆ ಶಕ್ತವಾಗಿ, 60 ರನ್‌ಗಳಿಂದ ಸೋಲು ಕಂಡಿತು. ಡೆಲ್ಲಿ ಕ್ಯಾಪಿಟಲ್ಸ್‌ನ ತಾರಾ ನಾರಿಸ್ 5 ವಿಕೆಟ್ ಕಿತ್ತು ಪ್ರಭಾವಿ ಪ್ರದರ್ಶನ ನೀಡಿದರು.

ಇದಕ್ಕೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್‌ನ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕಿ ಮೆಗ್ ಲ್ಯಾನ್ನಿಂಗ್ ಮತ್ತು ಶಫಾಲಿ ವರ್ಮಾ ಮೊದಲ ವಿಕೆಟ್‌ಗೆ 162 ರನ್‌ಗಳ ದಾಖಲೆ ಜೊತೆಯಾಟ ನೀಡಿದರು.
ಮೆಗ್ ಲ್ಯಾನ್ನಿಂಗ್ 43 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ 72 ರನ್ ಬಾರಿಸಿದರೆ, ಶಫಾಲಿ ವರ್ಮಾ 45 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ 84 ರನ್ ಗಳಿಸಿದರು. ಇವರಿಬ್ಬರ ವಿಕೆಟ್ ಪತನದ ನಂತರ ಬಂದ ಜೆಮಿಮಾ ರೋಡ್ರಿಗಸ್ ಮತ್ತು ಮಾರಿಜಾನ್ನೆ ಕಾಪ್ ಮುರಿಯದ ಮೂರನೇ ವಿಕೆಟ್‌ಗೆ 60 ರನ್ ಜೊತೆಯಾಟ ನೀಡಿದರು.
ಜೆಮಿಮಾ ರೋಡ್ರಿಗಸ್ 15 ಎಸೆತಗಳಲ್ಲಿ 22 ರನ್ ಮತ್ತು ಮಾರಿಜಾನ್ನೆ ಕಾಪ್ 17 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಮೇತ 39 ರನ್ ಬಾರಿಸಿದರು.
ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಹೀದರ್ ನೈಟ್ 3 ಓವರ್‌ಗಳಲ್ಲಿ 40 ರನ್ ನೀಡಿ 2 ವಿಕೆಟ್ ಪಡೆದರು. ಉಳಿದ ಬೌಲರ್‌ಗಳು ದುಬಾರಿಯಾದರು.

ಇನ್ನು ಬೃಹತ್ ಮೊತ್ತ ಬೆನ್ನತ್ತಿದ ಸ್ಮೃತಿ ಮಂಧಾನ ಬಳಗ ಉತ್ತಮ ಆರಂಭ ಕಂಡಿತು. ತಂಡದ ಮೊತ್ತ 4.2 ಓವರ್‌ಗಳಲ್ಲಿ 41 ರನ್ ಆಗಿದ್ದಾಗ, 14 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಸೋಫಿ ಡಿವೈನ್ ವಿಕೆಟ್ ನೀಡಿದರು. ನಂತರ 23 ಎಸೆತಗಳಲ್ಲಿ 35 ರನ್ ಬಾರಿಸಿ ಆಡುತ್ತಿದ್ದ ನಾಯಕಿ ಸ್ಮೃತಿ ಮಂಧಾನ ಕೂಡ ವಿಕೆಟ್ ಒಪ್ಪಿಸಿದ್ದು, ಆರ್‌ಸಿಬಿ ಪತನಕ್ಕೆ ಕಾರಣವಾಯಿತು.
ನಂತರ ಬಂದ ಎಲ್ಲಿಸ್ ಪೆರ್ರಿ 19 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಆಲ್‌ರೌಂಡರ್ ಹೀಧರ್ ನೈಟ್ 21 ಎಸೆತಗಳಲ್ಲಿ 34 ರನ್ ಗಳಿಸಿದರೆ, ಮೆಗನ್ ಶುಟ್ 19 ಎಸೆತಗಳಲ್ಲಿ 30 ರನ್ ಬಾರಿಸಿದರು. ಆದರೆ ಗೆಲುವಿನ ಗಡಿ ಮುಟ್ಟಿಸಲು ಸಾಧ್ಯವಾಗಲಿಲ್ಲ.
ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ತಾರಾ ನಾರಿಸ್ 4 ಓವರ್‌ಗಳಲ್ಲಿ 29 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದರು. ಉಳಿದಂತೆ ಆಲಿಸ್ ಕಾಪ್ಸಿ 2 ವಿಕೆಟ್, ಶಿಖಾ ಪಾಂಡೆ 1 ವಿಕೆಟ್ ಪಡೆದು ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications