Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ vs ಗುಜರಾತ್ ಜೈಂಟ್ಸ್, ಸಂಭಾವ್ಯ ಆಡುವ ಬಳಗ ಹಾಗೂ ಇತರ ಮಾಹಿತಿ

WPL 2023: Delhi Capitals Women vs Gujarat Giants, match 14, probable XI and pitch report

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು ಆಯ್ಮವಿಶ್ವಾಸದಿಂದ ಇದೆ. ಆದರೆ ಗುಜರಾತ್ ಜೈಂಟ್ಸ್ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೂ ಅದರ ಸ್ಥಾನವನ್ನು ಭದ್ರಗೊಳಿಸಬೇಕಾದ ಸವಾಲು ಹೊಂದಿದೆ.

ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದ್ದರೆ ಒಂದು ಪಂದ್ಯವನ್ನು ಮಾತ್ರವೇ ಕಳೆದುಕೊಂಡಿದೆ. ಹೀಗಾಗಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಯುಪಿ ವಾರಿಯರ್ಸ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ಮೂರು ಸೋಲು ಹಾಗೂ ಎರಡು ಗೆಲುವು ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದು ಸ್ಥಾನ ಭದ್ರಪಡಿಸುವ ಇರಾದೆಯಲ್ಲಿದೆ ಗುಜರಾತ್ ಜೈಂಟ್ಸ್ ತಂಡ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಈ ಮುನ್ನ ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಿದ್ದಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಮೋಘ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಫಿಟಲ್ಸ್ ಬೌಲರ್‌ಗಳು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ 10 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯ ಗುಜರಾತ್ ಜೈಂಟ್ಸ್ ತಂಡದ ಪಾಲಿಗೆ ಕಠಿಣ ಸವಾಲಾಗಿರಲಿದೆ.

ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭಗೊಳ್ಳಲಿದೆ. 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು ಜಿಯೋ ಸಿನಿಮಾದಲ್ಲಿ ಪಂದ್ಯದ ನೇರಪ್ರಸಾರವಿರಲಿದೆ.

ಪಿಚ್ ರಿಪೋರ್ಟ್: ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಈವರೆಗೆ ಇಲ್ಲಿ 11 ಪಂದ್ಯಗಳನ್ನು ಆಡಿದ್ದು ಮೊದಲು ಬ್ಯಾಟಿಂಗ್ ನಡೆಸಿರುವ ತಂಡಗಳು ಇಲ್ಲಿ 5 ಬಾರಿ ಗೆದ್ದಿದ್ದರೆ ಮೊದಲು ಬೌಲಿಂಗ್ ನಡೆಸಿದ ತಂಡಗಳು ಇಲ್ಲಿ 6 ಬಾರಿ ಗೆದ್ದುಕೊಂಡಿದೆ. 165 ರನ್ ಇಲ್ಲಿನ ಸರಾಸರಿ ಸ್ಕೋರ್ ಆಗಿದ್ದು ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವದು ಉತ್ತಮ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ ಬಳಗ: ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕಿ), ಆಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶಿಖಾ ಪಾಂಡೆ ಮತ್ತು ತಾರಾ ನಾರ್ರಿಸ್.

ಗುಜರಾತ್ ಜೈಂಟ್ಸ್: ಸೋಫಿಯಾ ಡಂಕ್ಲಿ, ಸಬ್ಬಿನೇನಿ ಮೇಘನಾ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್/ಲೌರಾ ವೊಲ್ವಾರ್ಡ್ಟ್, ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ (ನಾಯಕಿ), ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವಾರ್ ಮತ್ತು ಮಾನ್ಸಿ ಜೋಶಿ.

Story first published: Thursday, March 16, 2023, 14:30 [IST]
Other articles published on Mar 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+