Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಆರ್‌ಸಿಬಿ ತಂಡ ಸೇರಿಕೊಂಡ ಎಲ್ಲಿಸ್ ಪೆರ್ರಿ, ಮೆಗನ್ ಶುಟ್

WPL 2023: Ellyse Perry, Megan Schutt Joins RCB Squad In Mumbai

ಮಹಿಳಾ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದೆ. ಚೊಚ್ಚಲ ಆವೃತ್ತಿಯ ಎಲ್ಲಾ ಪಂದ್ಯಗಳು ಮುಂಬೈನಲ್ಲಿ ನಡೆಯಲಿದ್ದು, ಮಾರ್ಚ್ 4ರಂದು ಪಂದ್ಯಾವಳಿ ಆರಂಭವಾಗಲಿದೆ.

ಶುಕ್ರವಾರ ಆರ್‌ಸಿಬಿ ನಾಯಕಿ ಸ್ಮೃತಿ ಮಂದಾನ ಮುಂಬೈನಲ್ಲಿ ತಂಡವನ್ನು ಸೇರಿಕೊಂಡಿದ್ದರು. ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಎಲ್ಲಿ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದರು. ಈ ಹಿನ್ನೆಲೆಯಲ್ಲೇ ಎಲ್ಲಿಸ್ ಪೆರ್ರಿ ಮತ್ತು ಮೇಗನ್ ಶುಟ್ ಮುಂಬೈಗೆ ಬಂದಿರುವ ಫೋಟೋಗಳನ್ನು ಆರ್‌ಸಿಬಿ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.

ಬೆಂಗಳೂರಿನಲ್ಲಿ ಕೆಲವು ದಿನ ಅಭ್ಯಾಸ ಮಾಡಿದ ಆರ್ ಸಿಬಿ ತಂಡದ ಕೆಲವು ಆಟಗಾರರು ಮತ್ತು ಸಿಬ್ಬಂದಿ ಮಾರ್ಚ್ 1ರಂದು ಮುಂಬೈಗೆ ಪ್ರಯಾಣಿಸಿದ್ದರು. ಅಲ್ಲಿಯೇ ಪ್ರಮುಖ ಆಟಗಾರರು ತಂಡವನ್ನು ಸೇರಿಕೊಂಡಿದ್ದು ಅಭ್ಯಾಸವನ್ನು ಮುಂದುವರೆಸಿದ್ದಾರೆ.

ಕಳೆದ ತಿಂಗಳು ನಡೆದ ಮಹಿಳಾ ಪ್ರೀಮಿಯರ್ ಲೀಗ್‌ ಚೊಚ್ಚಲ ಹರಾಜಿನಲ್ಲಿ ಆರ್ ಸಿಬಿ ಫ್ರಾಂಚೈಸಿ ಎಲ್ಲಿಸ್ ಪೆರ್ರಿ ಅವರನ್ನು 1.4 ಕೋಟಿ ರುಪಾಯಿ ನೀಡಿ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿತು. ಪೆರ್ರಿ ಜೊತೆ ವೇಗದ ಬೌಲರ್ ಮೇಗನ್ ಶುಟ್ ಕೂಡ ತಂಡವನ್ನು ಸೇರಿಕೊಂಡಿದ್ದಾರೆ.

WPL 2023: Ellyse Perry, Megan Schutt Joins RCB Squad In Mumbai

ಮಾರ್ಚ್ 5ರಂದು ಆರ್ ಸಿಬಿ ಮೊದಲ ಪಂದ್ಯ

ಮಾರ್ಚ್ 4ರಂದು ಮಹಿಳಾ ಪ್ರೀಮಿಯರ್ ಲೀಗ್‌ಗೆ ಚಾಲನೆ ಸಿಗಲಿದ್ದು, ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 5ರಂದು ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣೆಸಲಿದೆ. ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದ್ದು, ಬ್ರಾಬೌರ್ನೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಆರ್ ಸಿಬಿ ತಂಡದ ನಾಯಕಿಯಾಗಿ ಸ್ಮೃತಿ ಮಂದಾನರನ್ನು ನೇಮಕ ಮಾಡಿದೆ. ಬಲಿಷ್ಠ ತಂಡವನ್ನು ಹೊಂದಿರುವ ಆರ್ ಸಿಬಿ ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ.

WPL 2023: Ellyse Perry, Megan Schutt Joins RCB Squad In Mumbai

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ : ಸ್ಮೃತಿ ಮಂದಾನ (ನಾಯಕಿ), ದಿಶಾ ಕಸತ್, ರಿಚಾ ಘೋಷ್ (ವಿಕೆಟ್ ಕೀಪರ್‌), ಇಂದ್ರಾಣಿ ರಾಯ್, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಎರಿನ್ ಬರ್ನ್ಸ್, ಹೀಥರ್ ನೈಟ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಡೇನ್ ವ್ಯಾನ್ ನೀಕರ್ಕ್, ಪೂನಂ ಖೇಮ್ನಾರ್, ರೇಣುಕಾ ಸಿಂಗ್, ಪ್ರೀತಿ ಬೋಸ್, ಕೋಮಲ್ ಜಂಜಾದ್, ಮೇಗನ್ ಶುಟ್, ಸಹನಾ ಪವಾರ್.

Story first published: Friday, March 3, 2023, 2:30 [IST]
Other articles published on Mar 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+