WPL 2023 Final: ಚೊಚ್ಚಲ ಟ್ರೋಫಿ ಗೆಲ್ಲಲು ಮುಂಬೈ vs ಡೆಲ್ಲಿ ಕಾದಾಟ; ಸಂಭಾವ್ಯ ಆಡುವ 11ರ ಬಳಗ, ಪಂದ್ಯದ ವಿವರ

ಭಾನುವಾರ, ಮಾರ್ಚ್ 26ರಂದು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ 2023ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮಹಿಳಾ ತಂಡಗಳು ಚೊಚ್ಚಲ ಟ್ರೋಫಿ ಗೆಲ್ಲಲು ಸೆಣಸಾಡಲಿವೆ.
2023ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯವು ಭಾನುವಾರ ರಾತ್ರಿ 7.30ಕ್ಕೆ ಆರಂಭವಾಗಲಿದ್ದು, ಟಾಸ್ 7 ಗಂಟೆಗೆ ನಡೆಯಲಿದೆ. ಮೆಗ್ ಲ್ಯಾನ್ನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂದ್ಯಾವಳಿಯ ಲೀಗ್ ಹಂತದಲ್ಲಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ನೇರವಾಗಿ ಫೈನಲ್‌ಗೆ ಟಿಕೆಟ್ ಪಡೆದುಕೊಂಡಿತ್ತು.
ಇನ್ನು ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಫೈನಲ್ ಅರ್ಹತೆ ಪಡೆಯಲು ಶುಕ್ರವಾರ, ಮಾರ್ಚ್ 24ರಂದು ನಡೆದ ಎಲಿಮಿನೇಟರ್ 2 ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಜಯಗಳಿಸಿತು.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಪಂದ್ಯ ವಿಜೇತರಾದ ಹೇಲಿ ಮ್ಯಾಥ್ಯೂಸ್, ನ್ಯಾಟ್ ಸ್ಕಿವರ್-ಬ್ರಂಟ್ ಮತ್ತು ಅಮೆಲಿಯಾ ಕೆರ್ ಅವರ ಪ್ರದರ್ಶನದ ಮೇಲೆ ಅವಲಂಬಿತವಾಗಿದೆ. ಇದೇ ವೇಳೆ ತಂಡದ ಯಶಸ್ಸಿಗೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಪ್ರಮುಖ ಪಾತ್ರ ವಹಿಸಬೇಕಿದೆ.

ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಯಕಿ ಮೆಗ್ ಲ್ಯಾನ್ನಿಂಗ್ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಅವರು 8 ಪಂದ್ಯಗಳಿಂದ 310 ರನ್ ಗಳಿಸಿದ್ದಾರೆ. ಇನ್ನು ಶಫಾಲಿ ವರ್ಮಾ ಮತ್ತು ಉಪನಾಯಕಿ ಜೆಮಿಮಾ ರೋಡ್ರಿಗಸ್ ಕೂಡಾ ತಂಡದ ಆಧಾರವಾಗಿದ್ದಾರೆ.
ಪಿಚ್ ವರದಿ
ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿನ ಪರಿಸ್ಥಿತಿಗಳು ಬ್ಯಾಟರ್‌ಗಳಿಗೆ ಸಹಾಯ ಮಾಡುವ ಸಾಧ್ಯತೆ ಇದ್ದು, ವೇಗದ ಬೌಲರ್‌ಗಳಿಗೂ ನೆರವಾಗಲಿದೆ. ಒಟ್ಟಾರೆಯಾಗಿ ಬ್ರೆಬೋರ್ನ್ ಸ್ಟೇಡಿಯಂ ಉತ್ತಮ ಬ್ಯಾಟಿಂಗ್ ಪಿಚ್ ಆಗಿದ್ದು, ಫೈನಲ್ ಪಂದ್ಯದಲ್ಲಿ ಹೆಚ್ಚಿನ ರನ್‌ಗಳು ಪ್ರೇಕ್ಷಕರಿಗೆ ರೋಚಕತೆ ಒದಗಿಸಲಿದೆ.
ಹವಾಮಾನ ವರದಿ
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ 2023ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದ ವೇಳೆ ಮಳೆ ಬರುವ ಸಾಧ್ಯತೆ ಇಲ್ಲ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಇದು ಕ್ರಿಕೆಟ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿಯಾಗಿದೆ. ಮುಂಬೈ ತಾಪಮಾನವು 24ರಿಂದ 31 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ಅಂದಾಜಿಸಲಾಗಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
2023ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯವನ್ನು ಟಿವಿಯಲ್ಲಿ ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುವುದು ಮತ್ತು JioCinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ 11ರ ಬಳಗ
ಮುಂಬೈ ಇಂಡಿಯನ್ಸ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಯ್ಲಿ ಮ್ಯಾಥ್ಯೂಸ್, ನ್ಯಾಟ್ ಸ್ಕಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಸೈಕಾ ಇಶಾಕ್, ಧಾರಾ ಗುಜ್ಜರ್, ಅಮನ್ಜೋತ್ ಕೌರ್, ಜಿಂಟಿಮಣಿ ಕಲಿತಾ.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನ್ನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಆಲಿಸ್ ಕ್ಯಾಪ್ಸೆ, ಮಾರಿಜಾನ್ನೆ ಕಾಪ್, ತಾನಿಯಾ ಭಾಟಿಯಾ, ಜೆಸ್ ಜೊನಾಸ್ಸೆನ್, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್, ಟಿಟಾಸ್ ಸಾಧು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications