Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಆರ್‌ಸಿಬಿ ತಂಡಕ್ಕೆ ಮತ್ತೊಂದ ಕಠಿಣ ಸವಾಲು; ಗುಜರಾತ್ ವಿರುದ್ಧ ಗೆಲ್ಲಲು 202 ರನ್ ಗುರಿ

WPL 2023: GG vs RCB, 6th match Royal Challngers Bangalore need 202 runs to win

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡಕ್ಕೆ ಮತ್ತೊಂದು ದೊಡ್ಡ ಮೊತ್ತವನ್ನು ಬೆನ್ನಟ್ಟು ಸವಾಲು ದೊರೆತಿದೆ. ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ನಿಗದಿತ 20 ಓವರ್‌ಗಳಲ್ಲಿ ಭರ್ತಿ 201 ರನ್‌ಗಳಿಸಿದೆ. ಈ ಮೂಲಕ ಆರ್‌ಸಿಬಿ ಮುಂದೆ ಮತ್ತೊಂದು ಕಠಿಣ ಸವಾಲಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಗುಜರಾತ್ ಜೈಂಟ್ಸ್ ಉತ್ತಮ ಪ್ರದರ್ಶನ ನೀಡಿದೆ. ಆರಂಭಿಕ ಆಟಗಾರ್ತಿ ಸೋಫಿಯಾ ಡಂಕ್ಲೆ ಸ್ಪೋಟಕ ಪ್ರದರ್ಶನ ನೀಡಿದ್ದು ಕೇವಲ 28 ಎಸೆತಗಳಲ್ಲಿ 65 ರನ್ ಬಾರಿಸಿ ಅಬ್ಬರಿಸಿದರು. ಹರ್ಲೀನ್ ಡಿಯೋಲ್ ಕೂಡ ಅದ್ಭುತ ಪ್ರದರ್ಶನ ನೀಡಿದ್ದು 45 ಎಸೆತಗಳಲ್ಲಿ 67 ರನ್‌ ಬಾರಿಸಿದ್ದಾರೆ.

ಉಳಿದಂತೆ ಗಾರ್ಡ್ನರ್ 15 ಎಸೆತಗಳಲ್ಲಿ 19 ರನ್ ಬಾರಿಸಿದರೆ ಹೇಮಲತಾ 7 ಎಸೆತಗಳಲ್ಲಿ 16 ರನ್ ಬಾರಿಸಿದರು. ಸದರ್ಲ್ಯಾಂಡ್ ಕೂಡ 8 ಎಸೆತಗಳಲ್ಲಿ 14 ರನ್ ಬಾರಿಸಿದ್ದಾರೆ. ಹೀಗಾಗಿ ಗುಜರಾತ್ ಜೈಂಟ್ಸ್ ತಂಡ ಈ ಪಂದ್ಯದಲ್ಲಿ ಆರ್‌ಸಿಬಿ ಬೃಹತ್ ಗುರಿ ನಿಗದಿಪಡಿಸಿದೆ.

ರಾಯಲ್ ಚಾಲೆಂಜರ್ಸ್ ಹಾಗೂ ಗುಜರಾತ್ ಜೈಂಟ್ಸ್ ಈ ಎರಡು ತಂಡಗಳಿಗೂ ಕೂಡ ಇದು ಮೂರನೇ ಪಂದ್ಯವಾಗಿದೆ. ಮೊದಲ ಎರಡು ಪಂದ್ಯಗಳಲ್ಲಿಯೂ ಎರಡು ತಂಡಗಳು ಕೂಡ ಸೋಲು ಕಂಡಿದ್ದು ಟೂರ್ನಿಯಲ್ಲಿ ಮೊದಲ ಗೆಲುವಿಗಾಗಿ ಎದುರು ನೋಡುತ್ತಿವೆ. ಹಾಗಾಗಿ ಅಂಕಪಟ್ಟಿಯಲ್ಲಿ ಯಾವ ತಂಡ ಇಂದು ಖಾತೆ ತೆರೆಯಲಿದೆ ಎಂಬುದು ಸದ್ಯದ ಕುತೂಹಲ.

ಗುಜರಾತ್ ಜೈಂಟ್ಸ್ ಆಡುವ ಬಳಗ: ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಆಶ್ಲೀ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್(ವಿಕೆಟ್ ಕೀಪರ್), ಪೂನಂ ಖೇಮ್ನಾರ್, ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ಮೇಗನ್ ಶುಟ್, ರೇಣುಕಾ ಠಾಕೂರ್ ಸಿಂಗ್, ಪ್ರೀತಿ ಬೋಸ್

Story first published: Wednesday, March 8, 2023, 21:26 [IST]
Other articles published on Mar 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+