GG Vs DC: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಜೈಂಟ್ಸ್: ಪ್ಲೇಯಿಂಗ್ XI, ಪಿಚ್ ವರದಿ

ಮಹಿಳಾ ಪ್ರೀಮಿಯರ್ ಲೀಗ್‌ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಬಹುದಾಗಿದೆ. ಗುಜರಾತ್ ಜೈಂಟ್ಸ್ ಇದುವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ಮೂರು ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿತ್ತು.
ಎರಡೂ ತಂಡಗಳಲ್ಲಿ ಅನುಭವಿ ಬ್ಯಾಟರ್ ಗಳ ದಂಡೇ ಇರುವುದರಿಂದ ಎರಡೂ ತಂಡಗಳು ಗೆಲುವಿಗೆ ಭಾರಿ ಹಣಾಹಣಿ ನಡೆಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಕೂಡ ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ಲಾರಾ ಹ್ಯಾರಿಸ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಗುಜರಾತ್ ಜೈಂಟ್ಸ್ ತಂಡದಲ್ಲಿ ಪ್ರಮುಖವಾಗಿ ಎರಡು ಬದಲಾವಣೆ ಮಾಡಲಾಗಿದೆ. ನಾಯಕಿ ಬೆತ್ ಮೂನಿ ಬದಲಾಗಿ ತಂಡವನ್ನು ಸೇರಿಕೊಂಡಿರುವ ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಜಾರ್ಜಿಯಾ ವರೆಹಾಮ್ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆ
ಡಿವೈ ಪಾಟೀಲ್ ಸ್ಟೇಡಿಯಂ ಬ್ಯಾಟಿಂಗ್‌ಗೆ ಹೆಚ್ಚಿನ ಸಹಾಯ ಮಾಡುವುದರಿಂದ ಎರಡೂ ತಂಡಗಳಲ್ಲಿ ಬ್ಯಾಟಿಂಗ್ ಪಡೆ ಬಲಿಷ್ಠವಾಗಿದ್ದು, ಮತ್ತೊಂದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ. ಹಸಿರು ಪಿಚ್‌ನಲ್ಲಿ ವೇಗಿಗಳು ವಿಕೆಟ್ ಪಡೆದುಕೊಳ್ಳುವ ಸಾಧ್ಯತೆ ಇದೆ.
ಕಳೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವು ಸಾಧಿಸಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಆ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ 201 ರನ್‌ಗಳನ್ನು ಕಲೆಹಾಕಿತ್ತು.

ಉಭಯ ತಂಡಗಳ ಆಡುವ ಬಳಗ
ಗುಜರಾತ್ ಜೈಂಟ್ಸ್ : ಸಬ್ಬಿನೇನಿ ಮೇಘನಾ, ಲಾರಾ ವೊಲ್ವಾರ್ಡ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ಜಾರ್ಜಿಯಾ ವೇರ್ಹ್ಯಾಮ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್
ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನಾರ್ರಿಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications