Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಯಾಸ್ತಿಕಾ, ಕೌರ್ ಉತ್ತಮ ಬ್ಯಾಟಿಂಗ್; ಗುಜರಾತ್‌ಗೆ ಸವಾಲಿನ ಗುರಿ ನೀಡಿದ ಮುಂಬೈ ಇಂಡಿಯನ್ಸ್

WPL 2023: Gujarat Giants Need 163 Runs To Win Against Mumbai Indians

ಮಂಗಳವಾರ, ಮಾರ್ಚ್ 14ರಂದು ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಮತ್ತು ಗುಜರಾತ್ ಜೈಂಟ್ಸ್ ಮಹಿಳಾ ತಂಡವನ್ನು ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿವೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿದ್ದು, ಗುಜರಾತ್ ಜೈಂಟ್ಸ್ ತಂಡದ ಗೆಲುವಿಗೆ 163 ರನ್‌ಗಳ ಗುರಿ ನೀಡಿದೆ.

ಮುಂಬೈ ಇಂಡಿಯನ್ಸ್ ತಂಡದ ಪರ ನಾಯಕಿ ಹರ್ಮನ್‌ಪ್ರೀತ್ ಕೌರ್ ಸ್ಫೋಟಕ ಅರ್ಧಶತಕ ಬಾರಿಸಿದರು. 30 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 51 ರನ್ ಬಾರಿಸಿದರು. ಆರಂಭಿಕ ಬ್ಯಾಟರ್ ಯಾಸ್ತಿಕಾ ಭಾಟಿಯಾ 37 ಎಸೆತಗಳಲ್ಲಿ 44 ರನ್ ಗಳಿಸಿದರು.

ಉಳಿದಂತೆ ನ್ಯಾಟ್ ಸೀವರ್-ಬ್ರಂಟ್ 36 ರನ್, ಅಮೇಲಿಯಾ ಕೆರ್ 19 ರನ್ ಗಳಿಸಿ ತಂಡದ ಮೊತ್ತ 160 ರನ್‌ಗಳ ಗಡಿ ದಾಟಲು ನೆರವಾದರು.

WPL 2023: Gujarat Giants Need 163 Runs To Win Against Mumbai Indians

ಬೌಲಿಂಗ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಪರ ಆಶ್ಲೀಗ್ ಗಾರ್ಡ್ನರ್ 4 ಓವರ್‌ಗಳಲ್ಲಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು. ಉಳಿದಂತೆ ಕಿಮ್ ಗಾರ್ಥ್, ಸ್ನೇಹ್ ರಾಣಾ ಮತ್ತು ತನುಜಾ ಕನ್ವರ್ ತಲಾ ಒಂದೊಂದು ವಿಕೆಟ್ ಪಡೆದರು.

ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ ಪಂದ್ಯಾವಳಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಇಲ್ಲಿಯವರೆಗೆ ಅಜೇಯ ಓಟ ಮುಂದುವರೆಸಿದ್ದು, ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದಿದೆ.

ಮತ್ತೊಂದೆಡೆ, ಸ್ನೇಹ್ ರಾಣಾ ನಾಯಕತ್ವದ ಗುಜರಾತ್ ಜೈಂಟ್ಸ್ ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಉದ್ಘಾಟನಾ ಪಂದ್ಯದಲ್ಲಿನ ಸೋಲಿಗೆ ಗುಜರಾತ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದೇ ಎಂಬುದನ್ನು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ ಆಡುವ 11ರ ಬಳಗ
ಮುಂಬೈ ಇಂಡಿಯನ್ಸ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಧಾರಾ ಗುಜ್ಜರ್, ಅಮೆಲಿಯಾ ಕೆರ್, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಹುಮೈರಾ ಕಾಜಿ, ಜಿಂತಿಮಣಿ ಕಲಿತಾ, ಸೈಕಾ ಇಶಾಕ್.

ಗುಜರಾತ್ ಜೈಂಟ್ಸ್ ತಂಡ: ಸ್ನೇಹ್ ರಾಣಾ(ನಾಯಕಿ), ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲೆ, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ದಯಾಳನ್ ಹೇಮಲತಾ, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ.

Story first published: Tuesday, March 14, 2023, 21:15 [IST]
Other articles published on Mar 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+