For Quick Alerts
ALLOW NOTIFICATIONS  
For Daily Alerts
 

WPL 2023 GG vs DC: ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ, ಆಡುವ 11ರ ಬಳಗ, ನೇರಪ್ರಸಾರ ಮಾಹಿತಿ

WPL 2023: Gujarat Giants vs Delhi Capitals Match, Probable Playing 11, TV And Live Streaming Details

ಶನಿವಾರ, ಮಾರ್ಚ್ 11ರಂದು ನಡೆಯುವ 2023ರ ಮಹಿಳಾ ಪ್ರೀಮಿಯರ್ ಲೀಗ್‌ನ ಗುಜರಾತ್ ಜೈಂಟ್ಸ್ ಮಹಿಳಾ ತಂಡ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡಗಳ ನಡುವಿನ 9ನೇ ಪಂದ್ಯ ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿದೆ.

ತಮ್ಮ ಹಿಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ರೋಚಕ ಮುಖಾಮುಖಿಯಲ್ಲಿ ಲೀಗ್‌ ತಮ್ಮ ಮೊದಲ ಗೆಲುವನ್ನು ದಾಖಲಿಸಿತು.

ಸೋಫಿಯಾ ಡಂಕ್ಲಿ ಮತ್ತು ಹರ್ಲೀನ್ ಡಿಯೋಲ್ ಅರ್ಧಶತಕಗಳ ನೆರವಿನಿಂದ ಗುಜರಾತ್ ಜೈಂಟ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ 210 ರನ್ ಕಲೆಹಾಕಿತು. ನಂತರ, ಬೌಲಿಂಗ್‌ನಲ್ಲಿ ಸ್ಟಾರ್ ಆಲ್‌ರೌಂಡರ್ ಆಶ್ಲೀಗ್ ಗಾರ್ಡ್ನರ್ 31 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಬಳಿಸಿದರು. ರಾಯಲ್ ಚಾಲೆಂಜರ್ಸ್ ತಂಡವನ್ನು 190 ರನ್‌ಗಳಿಗೆ ನಿಯಂತ್ರಿಸಿದ ಕಾರಣ, 11 ರನ್‌ಗಳ ನಿರ್ಣಾಯಕ ಜಯ ಗಳಿಸಿದರು.

WPL 2023: Gujarat Giants vs Delhi Capitals Match, Probable Playing 11, TV And Live Streaming Details

ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮೊದಲ ಎರಡು ಪಂದ್ಯಗಳನ್ನು ಗೆದ್ದು ಅಭಿಯಾನವನ್ನು ಉತ್ತಮವಾಗಿ ಪ್ರಾರಂಭಿಸಿತು. ಆದರೆ ತನ್ನ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಎಂಟು ವಿಕೆಟ್‌ಗಳ ಸೋಲನ್ನು ಅನುಭವಿಸಿದೆ.

ಇದೀಗ ಮಹಿಳಾ ಪ್ರೀಮಿಯರ್ ಲೀಗ್‌ನ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಉತ್ತಮಪಡಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಸೆಣಸಾಡಲಿವೆ.

WPL 2023: Gujarat Giants vs Delhi Capitals Match, Probable Playing 11, TV And Live Streaming Details

ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ ಪಂದ್ಯವು ಶನಿವಾರ, ಮಾರ್ಚ್ 11ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂದ್ಯದ ಸಮಯ: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಆರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ ಪಂದ್ಯವನ್ನು Sports18 ಚಾನಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಅಲ್ಲದೇ, JioCinema ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಡಿವೈ ಪಾಟೀಲ್ ಸ್ಟೇಡಿಯಂ ಪಿಚ್ ವರದಿ
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣವು ಬ್ಯಾಟಿಂಗ್‌ಗೆ ಅನುಕೂಲಕರವಾದ ಟ್ರ್ಯಾಕ್‌ ಹೊಂದಿದೆ. ಸ್ಪಿನ್ ಬೌಲರ್‌ಗಳಿಗೂ ನೆರವಾಗುವ ಸಾಧ್ಯತೆ ಇದೆ. ಕ್ರೀಡಾಂಗಣದಲ್ಲಿ ಆಡಿದ ಮಹಿಳೆಯರ ಟಿ20 ಚಾಲೆಂಜ್ ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 154 ರನ್ ಆಗಿದೆ.

ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ 11ರ ಬಳಗ
ಗುಜರಾತ್ ಜೈಂಟ್ಸ್ ತಂಡ: ಸ್ನೇಹ್ ರಾಣಾ(ನಾಯಕಿ), ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲೆ, ಹರ್ಲೀನ್ ಡಿಯೋಲ್, ತನುಜಾ ಕನ್ವರ್, ಲಾರಾ ವೋಲ್ವಾರ್ಡ್, ದಯಾಳನ್ ಹೇಮಲತಾ, ಆಶ್ಲೀಗ್ ಗಾರ್ಡ್ನರ್, ಕಿಮ್ ಗಾರ್ತ್, ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಮಾನ್ಸಿ ಜೋಶಿ.

ದೆಹಲಿ ಕ್ಯಾಪಿಟಲ್ಸ್ ತಂಡ: ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್(ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಮಿನ್ನು ಮಣಿ, ಮಾರಿಜಾನ್ನೆ ಕಾಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೋನಾಸೆನ್, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್.

Story first published: Saturday, March 11, 2023, 9:46 [IST]
Other articles published on Mar 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+