Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

WPL 2023: Gujarat Giants vs UP Warriorz Toss Report, Playing 11 And Live Score

ಸೋಮವಾರ, ಮಾರ್ಚ್ 20ರಂದು ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ 2023ರ ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ಯುಪಿ ವಾರಿಯರ್ಸ್ ತಂಡದ ವಿರುದ್ಧ ಸೆಣಸಾಡುತ್ತಿದೆ.

ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ನಾಯಕಿ ಸ್ನೇಹ್ ರಾಣಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಗುಜರಾತ್ ಜೈಂಟ್ಸ್ ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧದ ಮುಖಾಮುಖಿಯಲ್ಲಿ ರೋಚಕ ಎಂಟು ವಿಕೆಟ್‌ಗಳ ಸೋಲಿನ ನಂತರ ಈ ಪಂದ್ಯವನ್ನು ಆಡುತ್ತಿದೆ.

ಮತ್ತೊಂದೆಡೆ, ಯುಪಿ ವಾರಿಯರ್ಸ್ ತಂಡವು ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಐದು ವಿಕೆಟ್‌ಗಳಿಂದ ಗೆಲುವು ದಾಖಲಿಸಿ ಈ ಪಂದ್ಯದಲ್ಲಿ ಆಡುತ್ತಿದೆ. ಇಂದಿನ ಯುಪಿ ವಾರಿಯರ್ಸ್ ತಂಡದ ಗೆಲುವು ಆರ್‌ಸಿಬಿ ತಂಡದ ಪ್ಲೇಆಫ್ ಕನಸನ್ನು ಚಿವುಟಿ ಹಾಕಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ:
ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯವನ್ನು Sports18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದರೆ, Jio ಸಿನಿಮಾ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ಗಳಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ ಆಡುವ 11ರ ಬಳಗ
ಗುಜರಾತ್ ಜೈಂಟ್ಸ್ ತಂಡ: ಸೋಫಿಯಾ ಡಂಕ್ಲೆ, ಲಾರಾ ವೊಲ್ವಾರ್ಡ್ಟ್, ಆಶ್ಲೀಗ್ ಗಾರ್ಡ್ನರ್, ದಯಾಳನ್ ಹೇಮಲತಾ, ಹರ್ಲೀನ್ ಡಿಯೋಲ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಸ್ನೇಹ್ ರಾಣಾ(ನಾಯಕಿ), ಕಿಮ್ ಗಾರ್ತ್, ಮೋನಿಕಾ ಪಟೇಲ್, ತನುಜಾ ಕನ್ವರ್, ಅಶ್ವನಿ ಕುಮಾರಿ .

ಯುಪಿ ವಾರಿಯರ್ಜ್ ತಂಡ: ದೇವಿಕಾ ವೈದ್ಯ, ಅಲಿಸ್ಸಾ ಹೀಲಿ (ವಿಕೆಟ್ ಕೀಪರ್/ ನಾಯಕಿ), ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಸಿಮ್ರಾನ್ ಶೇಖ್, ಪಾರ್ಶವಿ ಚೋಪ್ರಾ, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.

Story first published: Monday, March 20, 2023, 15:13 [IST]
Other articles published on Mar 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+