For Quick Alerts
ALLOW NOTIFICATIONS  
For Daily Alerts
 

GG Vs DC: ಮರಿಜಾನ್ನೆ ಕಪ್ ಮಾರಕ ದಾಳಿಗೆ ತತ್ತರಿಸಿದ ಗುಜರಾತ್ ಜೈಂಟ್ಸ್: ಡೆಲ್ಲಿ ಗೆಲುವಿಗೆ ಸುಲಭ ಗುರಿ

WPL 2023: Marizanne Kapp Took 5 Wickets To Restrict The Gujarat Giants To 105 Runs In 20 Overs

ಡೆಲ್ಲಿ ಕ್ಯಾಪಿಟಲ್ಸ್‌ನ ಆಲ್‌ರೌಂಡರ್ ಮರಿಜಾನ್ನೆ ಕಪ್ ಮತ್ತು ಶಿಖಾ ಪಾಂಡೆ ಮಾರಕ ದಾಳಿಗೆ ತತ್ತರಿಸಿದ ಗುಜರಾತ್ ಜೈಂಟ್ಸ್ 20 ಓವರ್ ಗಳಲ್ಲಿ 105 ರನ್ ಗಳಿಸಿದ್ದು ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ ಸುಲಭವಾದ ಗುರಿ ನೀಡಿದೆ.

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿತು. ಖಾತೆ ತೆರೆಯುವ ಮುನ್ನವೇ ಮೊದಲ ವಿಕೆಟ್ ಕಳೆದುಕೊಂಡ ಗುಜರಾತ್ ಜೈಂಟ್ಸ್ 33 ರನ್ ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತ್ತು.

ಮಾರಿಜಾನ್ನೆ ಕಪ್ 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು. ಶಿಖಾ ಪಾಂಡೆ ಕೂಡ 4 ಓವರ್ ಗಳಲ್ಲಿ 26 ರನ್ ನೀಡಿ 3 ವಿಕೆಟ್ ಪಡೆದರು, ರಾಧಾ ಯಾದವ್ 4 ಓವರ್ ಗಳಲ್ಲಿ 19 ರನ್ ನೀಡಿ 1 ವಿಕೆಟ್ ಪಡೆದರು. ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಗುಜರಾತ್ ಜೈಂಟ್ಸ್ ನಂತರ ಸುಧಾರಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

WPL 2023: Marizanne Kapp Took 5 Wickets To Restrict The Gujarat Giants To 105 Runs In 20 Overs

ಗುಜರಾತ್ ಜೈಂಟ್ಸ್ ಬ್ಯಾಟಿಂಗ್ ವೈಫಲ್ಯ

ಬೆತ್ ಮೂನಿ ಬದಲಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡ ಲಾರಾ ವೊಲ್ವಾರ್ಡ್ ಕೇವಲ 1 ರನ್ ಗಳಿಸಿ ಔಟಾದರು. ಸಬ್ಬಿನೇನಿ ಮೇಘನಾ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಹರ್ಲಿನ್ ಡಿಯೋಲ್ ಮಾತ್ರ 20 ರನ್ ಗಳಿಸಿದರು, ಕಪ್‌ ಬೌಲಿಂಗ್‌ನಲ್ಲಿ ಔಟಾದರು.

ಜಾರ್ಜಿಯಾ ವಾರೆಹಾಮ್ 22 ರನ್ ಗಳಿಸಿದರೆ, ಕಿಮ್ ಗಾರ್ತ್ 32 ರನ್ ಗಳಿಸುವ ಮೂಲಕ ಗುಜರಾತ್ ಜೈಂಟ್ಸ್ 100 ರನ್‌ಗಳ ಗಡಿಯನ್ನು ದಾಟಲು ಕಾರಣವಾದರು. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ ಸುಲಭವಾಗಿ ಜಯ ಗಳಿಸುವ ಹಾದಿಯಲ್ಲಿದೆ.

WPL 2023: Marizanne Kapp Took 5 Wickets To Restrict The Gujarat Giants To 105 Runs In 20 Overs

ಉಭಯ ತಂಡಗಳ ಆಡುವ ಬಳಗ

ಗುಜರಾತ್ ಜೈಂಟ್ಸ್ : ಸಬ್ಬಿನೇನಿ ಮೇಘನಾ, ಲಾರಾ ವೊಲ್ವಾರ್ಡ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ಜಾರ್ಜಿಯಾ ವೇರ್ಹ್ಯಾಮ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್

ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನಾರ್ರಿಸ್.

Story first published: Saturday, March 11, 2023, 21:14 [IST]
Other articles published on Mar 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+