For Quick Alerts
ALLOW NOTIFICATIONS  
For Daily Alerts
 

WPL 2023 MI vs RCB : ಮುಂಬೈ ಇಂಡಿಯನ್ಸ್‌ಗೆ ಗೆಲ್ಲಲು ಸವಾಲಿನ ಗುರಿ ನೀಡಿದ ಆರ್‌ಸಿಬಿ

WPL 2023: MI vs RCB 4th match, Mumbai Indians need 156 runs to win against Royal Challengers Bangalore

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿಯರು ಮತ್ತೊಮ್ಮೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಆದರೆ ಕೆಳ ಕ್ರಮಾಂಕದ ಆಟಗಾರ್ತಿಯರ ಪ್ರದರ್ಶನ ತಂಡ ಗೌರವಯುತ ಮೊತ್ತ ತಲುಪಲು ಕಾರಣವಾಗಿದೆ. ಅದರಲ್ಲೂ ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕನ್ನಡತಿ ಶ್ರೇಯಾಂಕ ಪಾಲೀಟ್ ಪ್ರದರ್ಶನ ಆರ್‌ಸಿಬಿ ಅಭಿಮಾನಿಗಳ ಹೃದಯ ಗೆದ್ದಿದೆ. ಆರ್‌ಸಿಬಿ ತಂಡ ಈ ಪಂದ್ಯದಲ್ಲಿ 18.4 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 155 ರನ್ ಗಳಿಸಿದೆ.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಆರ್‌ಸಿನಿ ಉತ್ತಮ ಆರಂಭವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಆದರೆ ಆ ಆರಂಭ ಮುಂದುವರಿಸಿಕೊಂಡು ಹೋಗಲು ವಿಫಲವಾಗಿದೆ. ನಾಯಕಿ ಮಂಧಾನ ಹಾಗೂ ಡಿವೈನ್ 39 ರನ್‌ಗಳ ಜೊತೆಯಾಟನ ನೀಡಿ ಬೇರ್ಪಟ್ಟ ಬಳಿಕ ಆರ್‌ಸಿಬಿ ತಂಡ ಹಠಾತ್ ಕುಸಿತಕ್ಕೆ ಒಳಗಾಯಿತು. 43 ರನ್‌ಗಳಿಗೆ 4 ವಿಕಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಎಲ್ಈಸ್ ಪೆರ್ರಿ ಕೂಡ ಈ ಸಂದರ್ಭದಲ್ಲಿ ವಿಕೆಟ್ ಕಳೆದುಕೊಳ್ಳುವ ಮೂಲಕ 71 ರನ್‌ಗೆ 5 ನೇ ವಿಕೆಟ್ ಕಳೆದುಕೊಂಡಿತು.

ಆದರೆ ಕೆಳಖ ಕ್ರಮಾಂಕದಲ್ಲಿ ರಿಚಾ ಘೋಷ್, ಕನಿಕಾ ಅಹುಜಾ, ಶ್ರೇಯಾಂಕ ಪಾಟೀಲ್, ಹಾಗೂ ಮೇಘನ್ ಶುಟ್ ತಂಡವನ್ನು ಸವಾಲಿನ ಮೊತ್ತದತ್ತ ಮುನ್ನಡೆಸಿದರು. ಕನ್ನಡತಿ ಶ್ರೇಯಾಂಕ ಪಾಟೀಲ್ 15 ಎಸೆತಗಳಲ್ಲಿ 23 ರನ್‌ಗಳಿಸುವ ಮೂಲಕ ತನ್ನಲ್ಲಿನ ಬ್ಯಾಟಿಂಗ್ ಕೌಶಲ್ಯವನ್ನು ತೋರ್ಪಡಿಸಿದ್ದಾರೆ. ಕನಿಕಾ ಅಹುಜಾ 13 ಎಸೆತಗಳಲ್ಲಿ 22 ರನ್ ಬಾರಿಸಿ ಮಿಂಚಿದರು. ಅಂತಿಮವಾಗಿ ಆರ್‌ಸಿಬಿ ಇನ್ನೂ 8 ಎಸೆತಗಳು ಬಾಕಿಯಿರುವಂತೆಯೇ 155 ರನ್‌ಗಳಿಸಿ ಆಲೌಟ್ ಆಗಿದೆ.

ಮುಂಬೈ ಇಂಡಿಯನ್ಸ್ ಆಡುವ ಬಳಗ: ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂತಿಮನಿ ಕಲಿತಾ, ಸೈಕಾ ಇಶಾಕ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶುಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್

Story first published: Monday, March 6, 2023, 21:37 [IST]
Other articles published on Mar 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+